‘ಮಾತೃ ಭಾಷೆ ಜತೆ ಎಲ್ಲ ಭಾಷೆಗಳ ಕಲಿಕೆಯಿಂದ ಬುದ್ಧಿವಂತರಾಗಲು ಸಾಧ್ಯ’

Team Udayavani, Jun 1, 2019, 6:10 AM IST

3005KPE6

ಪಡುಬಿದ್ರಿ: ಮಾತೃ ಭಾಷಾ ಜ್ಞಾನದ ಜೊತೆಗೆ ಎಲ್ಲಾ ಭಾಷೆಗಳ ಕಲಿಕೆಯನ್ನೂ ವೃದ್ಧಿಸಿಕೊಂಡರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ಬುದ್ಧಿವಂತರಾಗಿ ಮೂಡಿ ಬರಲು ಸಾಧ್ಯವಿದೆ. ಕನ್ನಡ ಭಾಷಾ ಬೋಧನೆಯೊಂದಿಗೆ ಆಂಗ್ಲ ಭಾಷಾ ಮಾಧ್ಯಮವನ್ನೂ ಜೋಡಿಸುವ ಮೂಲಕ ನಮ್ಮೂರಿನ ಸರಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಿದೆ. ಕನ್ನಡ ಶಾಲೆಗಳ ಉಳಿವಿಗೆ ಇಂತಹ ಉಪಕ್ರಮ ಅತ್ಯಂತ ಶ್ಲಾಘನೀಯವಾಗಿದೆ. ಈ ಮೂಲಕ ಜ್ಞಾನದ ಬೆಳಕನ್ನು ನಾಡಿಗೆ ಪಸರಿಸಲು ಸಾಧ್ಯವಿದೆ ಎಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ನಂದಿಕೂರು ಶಿಕ್ಷಣ ಟ್ರಸ್ಟ್‌ ನಂದಿಕೂರು ಮತ್ತು ಶ್ರೀ ರಾಮ ಟೆಂಪಲ್ ಟ್ರಸ್ಟ್‌ನ ಸಹಯೋಗದಲ್ಲಿ ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ಶೈಕ್ಷಣಿಕ ಸಾಲಿನಲ್ಲಿ ಆರಂಭಿಸಲಾಗುವ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಆಂಗ್ಲ ಮಾಧ್ಯಮ ವಿಭಾಗದ ಪ್ರಾರಂಭೋತ್ಸವ ಸಮಾರಂಭದ ದೀಪ ಬೆಳಗಿಸಿ ಅವರು ಆಶೀರ್ವಚನ ನೀಡಿದರು.

ಆರ್‌ಬಿಐನ ಆರ್ಥಿಕ ಸಂಶೋಧನಾ ವಿಭಾಗದ ನಿವೃತ್ತ ಮುಖ್ಯಸ್ಥ ಡಾ| ಸದಾನಂದ ಎಲ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ನೂತನವಾಗಿ ಆರಂಭಿಸಲಾಗುವ ಎಲ್ಕೆಜಿ ತರಗತಿಗಳನ್ನು ಬೆಂಗಳೂರಿನ ಉದ್ಯಮಿ ಪ್ರಕಾಶ್‌ ಶೆಟ್ಟಿ, ಮುಂಬೈನ ಉದ್ಯಮಿ ಕೃಷ್ಣ ವೈ. ಶೆಟ್ಟಿ, ಯುಕೆಜಿ ತರಗತಿಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್‌ ರೈ ಮಾಲಾಡಿ, ಒಂದನೇ ತರಗತಿಯನ್ನು ಸಂಗೀತ ನಿರ್ದೇಶಕ ಗುರುಕಿರಣ್‌, ಸಂಯೋಜಕರ ಕಚೇರಿಯನ್ನು ಸಮಾಜ ಸೇವಕ ಸುರೇಶ್‌ ಶೆಟ್ಟಿ ಗುರ್ಮೆ, ಕಂಪ್ಯೂಟರ್‌ ಕೊಠಡಿಯನ್ನು ಭಾಸ್ಕರ್‌ ಶೆಟ್ಟಿ ಸಾಂತೂರು, ಶಿಕ್ಷಕರ ಕೊಠಡಿಯನ್ನು ಪಲಿಮಾರು ಗ್ರಾ.ಪಂ. ಅಧ್ಯಕ್ಷ ಜಿತೇಂದ್ರ ಫುಟಾರ್ಡೋ, ದಾನಿಗಳು ಕೊಡಮಾಡಿದ ಶಾಲಾ ಬಸ್‌ಗಳನ್ನು ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಎನ್‌. ಮಧ್ವರಾಯ ಭಟ್ ಉದ್ಘಾಟಿಸಿದರು.

ಉದ್ಯಮಿಗಳಾದ ಉದಯ ಸುಂದರ ಶೆಟ್ಟಿ, ಶಂಕರ್‌ ಶೆಟ್ಟಿ ವಿರಾರ್‌, ಶ್ರೀ ರಾಮ ಟೆಂಪಲ್ ಟ್ರಸ್ಟ್‌ನ ಸುರೇಶ್‌ ಶೆಟ್ಟಿ, ರಘುರಾಮ ಶೆಟ್ಟಿ ಪುಣೆ, ಪ್ರಕಾಶ್‌ ವಿ.ಶೆಟ್ಟಿ ಅಡ್ವೆ ಮಾಗಂದಡಿ, ದಿನೇಶ್‌ ಶೆಟ್ಟಿ ಅಡ್ವೆ ಪರಾಡಿ, ಸತೀಶ್‌ ಆರ್‌. ಶೆಟ್ಟಿ, ತೆಂಕುಮನೆ ಪ್ರಸಾದ್‌ ಎಸ್‌.ಹೆಗ್ಡೆ, ಸಿಎ. ವಿಶ್ವನಾಥ ಶೆಟ್ಟಿ ನಂದಿಕೂರು, ನಾಗರಾಜ ರಾವ್‌ ನಂದಿಕೂರು, ಸತೀಶ್‌ ಶೆಟ್ಟಿ ಬೆಜ್ಜಬೆಟ್ಟು, ಉದಯ ರೈ ಅರಂತಡೆ, ನವೀನ್‌ಚಂದ್ರ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯಿನಿ ವಿಮಲಾ, ಎಸ್‌ಡಿಎಂಸಿ ಅಧ್ಯಕ್ಷ ಪದ್ಮನಾಭ ಆಚಾರ್ಯ ಉಪಸ್ಥಿತರಿದ್ದರು.

ಸಾಧಕ ಶಿಕ್ಷಕಿ ಸುಷ್ಮಾ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿ, ಗೌರವಿಸಲಾಯಿತು.

ನಂದಿಕೂರು ಶಿಕ್ಷಣ ಟ್ರಸ್ಟ್‌ನ ಆಡಳಿತ ನಿರ್ದೇಶಕ ಲಕ್ಷಣ ಎಲ್. ಶೆಟ್ಟಿವಾಲ್ ಅರಂತಡೆ ಸ್ವಾಗತಿಸಿದರು. ಟ್ರಸ್ಟ್‌ ಅಧ್ಯಕ್ಷ ಅಡ್ವೆ ಮಾಗಂದಡಿ ಅನಿಲ್ ಶೆಟ್ಟಿ ಏಳಿಂಜೆ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಅಡ್ವೆ ಸನ್ನೋಣಿ ಗಣನಾಥ ಬಿ. ಶೆಟ್ಟಿ ದಾನಿಗಳ ಪಟ್ಟಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಸಿಎ. ಅನಿಲ್ ಶೆಟ್ಟಿ ತೆಂಕುಮನೆ ವಂದಿಸಿದರು. ಸಾಯಿನಾಥ್‌ ಎಂ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.