ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಿ ಪ್ರತಿಭಟನೆ

Team Udayavani, Jun 4, 2019, 11:38 AM IST

kb-tdy-00..

ಕಲಬುರಗಿ: ಹಿಂದಿ ಕಡ್ಡಾಯಗೊಳಿಸಲು ಮುಂದಾಗುತ್ತಿರುವ ಕೇಂದ್ರದ ಕ್ರಮ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಹಿಂದಿ ಪುಸ್ತಕಕ್ಕೆ ಸುಟ್ಟು ಪ್ರತಿಭಟನೆ ನಡೆಸಿದರು.

ಕಲಬುರಗಿ: ತ್ರಿಭಾಷಾ ಸೂತ್ರದ ನೆಪದಲ್ಲಿ ಹಿಂದಿ ಕಡ್ಡಾಯಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಹಿಂದಿ ಪುಸ್ತಕವನ್ನು ಸುಟ್ಟು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರವು ಕಸ್ತೂರಿ ರಂಗನ್‌ ನೀಡಿರುವ ವರದಿಯಂತೆ ತ್ರಿಭಾಷಾ ಸೂತ್ರ ಜಾರಿ ಮಾಡುವ ಮೂಲಕ ಹಿಂದಿ ಭಾಷೆಯನ್ನು ಹಿಂದಿಯೇತರ ರಾಜ್ಯಗಳಲ್ಲಿ ಹೇರುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಭಾರತ ವಿವಿಧ ಭಾಷೆಗಳಿರುವ ರಾಜ್ಯಗಳನ್ನು ಹೊಂದಿದೆ. ಇಲ್ಲಿ ಪ್ರತಿಯೊಂದು ಭಾಷೆ, ಸಂಸ್ಕೃತಿಯಿದೆ. ಆಯಾ ರಾಜ್ಯಗಳ ಭಾಷೆಗಳನ್ನು ಉಳಿಸಿ, ಬೆಳೆಸುವ ಅಧಿಕಾರ ಎಲ್ಲಾ ರಾಜ್ಯಗಳಿಗಿದೆ. ಈಗ ಕೇಂದ್ರ ಸರ್ಕಾರ ರಾಷ್ಟ್ರೀಯ ಭಾಷೆ ಎಂದು ಹಿಂದಿಯನ್ನು ಹಿಂದಿಯೇತರ ರಾಜ್ಯಗಳ ಮೇಲೆ ಹೇರಲು ಹೊರಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸದೇ ಹೋದರೆ ಮುಂದೊಂದು ದಿನ ಗಂಭೀರ ಪರಿಣಾಮ ಎದುರಿಸಬೇಕಾಗುವುದು. ಬಲವಂತದ ಹೇರಿಕೆ ದೇಶ ವಿಭಜನೆಗೆ ಕಾರಣವಾಗಬಹುದು. ಕೂಡಲೇ ತೃತೀಯ ಭಾಷೆಯಾಗಿ ಹಿಂದಿಯನ್ನು ಹಿಂದಿಯೇತರ ರಾಜ್ಯಗಳಲ್ಲಿ ಹೇರುವುದನ್ನು ಕೈಬೀಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಬೇಕಾಗುವುದೆಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ರವಿ ದೇವಣಗಾಂವ, ಪ್ರಶಾಂತ ಮಹತಿ, ಮಲ್ಲಿಕಾರ್ಜುನ ಬುಳ್ಳಾ, ಆನಂದ ಪಾಲ್ಕೆ, ಅಶೋಕ ಪಾಟೀಲ, ನವೀನ ಬಿರಾದಾರ, ವಿಲಾಸ ಬಿರಾದಾರ, ದಿಲೀಪ ಕಿರಸಾವಳಗಿ ಹಾಗೂ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.