ರಾಜ್ಯಕ್ಕೆ ಮುಂಗಾರು ಪ್ರವೇಶ ತಡ
Team Udayavani, Jun 5, 2019, 3:00 AM IST
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ದಿನ ತಡವಾಗುವ ಸಾಧ್ಯತೆಯಿದ್ದು, ಇನ್ನು ಎರಡು ದಿನ ಒಳನಾಡಿನ ಕೆಲವೆಡೆ ಮುಂಗಾರು ಪೂರ್ವ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಉಂಟಾಗಿರುವ ಟ್ರಫ್ನಿಂದಾಗಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿರುವ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಮುಂದಿನ ಎರಡು ದಿನ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂಗಾರು ಕೇರಳ ಪ್ರವೇಶಿಸುವುದು ಒಂದು ದಿನ ತಡವಾಗುವ ಸಾಧ್ಯತೆಯಿದ್ದು, ಕೇರಳಕ್ಕೆ ಬಂದ ಎರಡು ದಿನಗಳ ನಂತರ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರದ ವಿಜ್ಞಾನಿ ಸುನೀಲ್ ಗವಾಸ್ಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ