ಪ್ರತಿ ಮಳೆಗಾಲದಲ್ಲೂ ಸಂಕ ಕಟ್ಟಬೇಕು ಇಲ್ಲಿ !


Team Udayavani, Jun 5, 2019, 6:00 AM IST

E-18

ಕಡಬ: ಮಳೆಗಾಲ ಆರಂಭವಾಗುತ್ತದೆ ಎನ್ನುವಾಗಲೇ ಬಿಳಿನೆಲೆ ಗ್ರಾಮದ ಕಾಡಂಚಿನ ಪುತ್ತಿಲ ಬೈಲಡ್ಕ ಭಾಗದ ಜನರ ಎದೆಯಲ್ಲಿ ನಡುಕ ಶುರುವಾಗುತ್ತದೆ. ಏಕೆಂದರೆ, ಸೇತುವೆ ಇಲ್ಲದ ಇಲ್ಲಿನ ಭಾಗ್ಯ ಹೊಳೆಯನ್ನು ಮಳೆಗಾಲದಲ್ಲಿ ದಾಟುವುದೇ ಸಾಹಸದ ಕೆಲಸ. ಮಳೆಗಾಲದಲ್ಲಿ ಉಕ್ಕಿ ಹರಿಯುವ ಈ ಹೊಳೆಯನ್ನು ದಾಟಲು ಸ್ಥಳೀಯರೇ ನಿರ್ಮಿಸುವ ಅಡಿಕೆ ಮರದ ಕಾಲು ಸಂಕವೇ ಸಂಪರ್ಕ ಸೇತು.

ಬಿಳಿನೆಲೆ ಗ್ರಾಮದದಲ್ಲಿ ಹರಿಯುವ ಭಾಗ್ಯ ಹೊಳೆಗೆ ಉದ್ಮಯ ಎನ್ನುವಲ್ಲಿ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. 50ಕ್ಕೂ ಹೆಚ್ಚು ಮನೆಗಳ ಜನರು, ಶಾಲಾ ವಿದ್ಯಾರ್ಥಿಗಳು ಸೇತುವೆಯಿಲ್ಲದೆ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಹೊಳೆ ದಾಟುತ್ತಿದ್ದಾರೆ.

ಅಡಿಕೆ ಮರದ ಕಾಲು ಸಂಕವೇ ಗತಿ
ವರ್ಷದ ಬೇಸಗೆಯ 3 ತಿಂಗಳು ಹೊರತುಪಡಿಸಿ ಉಳಿದ ದಿನಗಳಲ್ಲಿ ಜನತೆ ಹೊರ ಜಗತ್ತಿನ ಸಂಪರ್ಕಕ್ಕಾಗಿ ತಾವೇ ನಿರ್ಮಿಸುವ ಅಡಿಕೆ ಮರದ ತೂಗು ಸೇತುವೆ ಮಾದರಿಯ ಕಾಲು ಸಂಕವನ್ನೇ ಆಶ್ರಯಿಸಬೇಕಿದೆ. ಅರ್ಗಿನಿ, ಅಮೈ, ಬೈಲು ಪ್ರದೇಶದ ಜನರು ಬಿಳಿನೆಲೆ ಮುಖಾಂತರ ಕಡಬ, ಸುಬ್ರಹ್ಮಣ್ಯ ಸಂಪರ್ಕಿಸಲು ಭಾಗ್ಯ ಹೊಳೆಯನ್ನು ದಾಟಿ ಮುಂದುವರಿಯಬೇಕಾಗಿದೆ.

ದಶಕಗಳ ಬೇಡಿಕೆಗಿಲ್ಲ ಮನ್ನಣೆ
ಇಲ್ಲೊಂದು ಸರ್ವ ಋತು ಸೇತುವೆ ಬೇಕೆಂದು 10 ವಷಗಳಿಂದ ಈ ಭಾಗದ ಸಂಸದರಿಗೆ ಶಾಸಕರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದಾರೆ. ಭರವಸೆ ಮಾತ್ರ ಇದುವರೆಗೂ ಈಡೇರಿಲ್ಲ. ಪ್ರತಿ ವರ್ಷ ಇಲ್ಲಿನ ಜನರು ಹಣ ಹೊಂದಿಸಿ 20 ಸಾವಿರ ರೂ. ವೆಚ್ಚದಲ್ಲಿ ಅಡಿಕೆ ಮರದ ಕಾಲು ಸಂಕ ನಿರ್ಮಿಸುತ್ತಾರೆ. ಹೊಳೆಯ ಎರಡೂ ಬದಿಗಳಲ್ಲಿರುವ ದೊಡ್ಡ ಮರಗಳಿಗೆ ಕಬ್ಬಿಣದ ರೋಪ್‌ ಆಳವಡಿಸಿ ಅಡಿಕೆ ಮರದಿಂದ ಪಾಲ ನಿರ್ಮಿಸಿದರೆ ಅದು ಒಂದು ವರ್ಷ ಮಾತ್ರ ಪ್ರಯೋಜನಕ್ಕೆ ಸಿಗುತ್ತದೆ. ಮಳೆಗಾಲ ಕಳೆದಾಗ ಕಬ್ಬಿಣದ ರೋಪ್‌ ತುಕ್ಕು ಹಿಡಿದು ಅಡಿಕೆ ಮರ ಶಿಥಿಲಗೊಂಡು ಮುಂದಿನ ವರ್ಷ ಹೊಸದಾಗಿ ಸೇತುವೆ ನಿರ್ಮಿಸಬೇಕಾದ ಅನಿವಾರ್ಯತೆ ಇಲ್ಲಿದೆ.

ಸ್ಥಳೀಯರ ಮನವಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್‌. ಅಂಗಾರ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಸೇತುವೆ ನಿರ್ಮಾಣಕ್ಕೆ ಸುಮಾರು 75 ಲಕ್ಷ ರೂ. ಅನುದಾನದ ಅಗತ್ಯವಿರುವುದರಿಂದ ಒಂದಷ್ಟು ಸಮಯ ಬೇಕಾಗಬಹುದು ಎನ್ನುವುದು ಅವರ ಅಭಿಪ್ರಾಯ.

ಕಬ್ಬಿಣದ ರೋಪ್‌ ಅಳವಡಿಸಿ ನಿರ್ಮಿಸಲಾಗಿರುವ ಈ ಕಾಲು ಸಂಕದಲ್ಲಿ ಸಂಚರಿಸುವುದು ಅಪಾಯಕಾರಿಯೇ ಸೈ. ನಡೆದಾಡುವಾಗ ತೂಗುವ ಈ ಕಾಲು ಸಂಕದಲ್ಲಿ ಪರಿಣತರು ಮಾತ್ರ ಸಂಚರಿಸಲು ಸಾಧ್ಯ. ಮಕ್ಕಳು ಹಾಗೂ ವೃದ್ಧರು ದಾಟಬೇಕಾದರೆ ಬೇರೆಯವರ ಸಹಾಯ ಅತ್ಯಗತ್ಯ. ಈ ಹಿಂದೆ ಕೆಲವರು ಹೊಳೆಗೆ ಬಿದ್ದ ಘಟನೆಗಳೂ ವರದಿಯಾಗಿವೆ. ಬೇಸಗೆಯಲ್ಲಿ ವಾಹನಗಳನ್ನು ಪ್ರಯಾಸದಿಂದ ಹೊಳೆ ದಾಟಿಸಿ ಪ್ರಯಾಣಿಸುವ ಸ್ಥಳೀಯರು ಹೊಳೆಯ ಬದಿಯ ಶೆಡ್‌ಗಳಲ್ಲಿ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಮನೆ ತಲುಪುತ್ತಾರೆ.

 ಬೇಡಿಕೆ ಈಡೇರಿಸಿ
ಹಲವು ವರ್ಷಗಳಿಂದ ಭಾಗ್ಯ ಹೊಳಗೆ ಸರ್ವಋತು ನಿರ್ಮಿಸಬೇಕೆಂದು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು, ವೃದ್ಧರು ಈ ಕಾಲು ಸಂಕವನ್ನು ದಾಟಲು ಹರಸಾಹಸ ಪಡಬೇಕಾಗುತ್ತದೆ. ಅನಾರೋಗ್ಯ ಪೀಡಿತರನ್ನು ಕರೆದೊಯ್ಯುವುದೂ ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಇದೆ. ಆದುದರಿಂದ ಜನಪ್ರತಿನಿಧಿಗಳು ಜನರ ಬೇಡಿಕೆಯನ್ನು ಈಡೇರಿಸಬೇಕಿದೆ.
– ವಿಜಯಕುಮಾರ್‌ ಎರ್ಕ, ಸ್ಥಳೀಯ ಮುಂದಾಳು

ಮನವಿ ಬಂದಿಲ್ಲ
ಸೇತುವೆ ಇಲ್ಲದೇ ಇರುವುದರಿಂದ ಈ ಭಾಗದ ಜನರಿಗೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ. ಆದರೆ ಪಂಚಾಯತ್‌ಗೆ ಯಾವುದೇ ಮನವಿ ಸಲ್ಲಿಕೆಯಾಗಿಲ್ಲ. ಮಳೆಗಾಲದಲ್ಲಿ ತುರ್ತು ಸಂದರ್ಭಗಳಲ್ಲಿ ಜನರಿಗೆ ಸುತ್ತುಬಳಸಿ ಬರಲು ಕಚ್ಚಾ ರಸ್ತೆಯ ಸಂಪರ್ಕವಿದೆ. ಸೇತುವೆ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನ ಅಗತ್ಯವಿರುವುದರಿಂದ ಪಂಚಾಯತ್‌ ಮಟ್ಟದಲ್ಲಿ ಅದು ಸಾಧ್ಯವೂ ಇಲ್ಲ. ಜನರ ಬೇಡಿಕೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು.
– ಶೀನ ಎ. ಪ್ರಭಾರ ಪಿಡಿಒ, ಬಿಳಿನೆಲೆ ಗ್ರಾ.ಪಂ.

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಐಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.