ನಿತೀಶ್‌ ಬಗ್ಗೆ ಆರ್‌ಜೆಡಿ ಮೃದು ಧೋರಣೆ

ಮೈತ್ರಿಕೂಟಕ್ಕೆ ಬರುವುದಿದ್ದರೆ ಬರಲಿ: ಆರ್‌ಜೆಡಿ ನಾಯಕರಿಂದ ಆಹ್ವಾನ

Team Udayavani, Jun 5, 2019, 6:00 AM IST

e-26

ಪಾಟ್ನಾ: ಕೇಂದ್ರ ಸಂಪುಟದಲ್ಲಿ ನಿರೀಕ್ಷಿತ ಸ್ಥಾನ ಸಿಗದೆ ಇದ್ದ ಕಾರಣಕ್ಕೆ ಬಿಜೆಪಿ ಜತೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕ್ರುದ್ಧರಾಗಿರುವುದು ಈಗ ಬಹಿರಂಗ ಸತ್ಯ. ಮಂಗಳವಾರ ನಡೆದ ಬೆಳವಣಿಗೆಯಲ್ಲಿ ನಿತೀಶ್‌ ಕುಮಾರ್‌ ಮಹಾಮೈತ್ರಿಕೂಟಕ್ಕೆ ಸೇರ್ಪಡೆಯಾಗುವುದಿದ್ದರೆ ಸ್ವಾಗತವಿದೆ ಎಂಬ ಆಹ್ವಾನ ರವಾನೆಯಾಗಿದೆ. ಆರ್‌ಜೆಡಿಯ ಹಿರಿಯ ನಾಯಕ ರಘುವಂಶ ಪ್ರಸಾದ್‌ ಸಿಂಗ್‌ ಮತ್ತು ಬಿಹಾರದ ಮಾಜಿ ಸಿಎಂ ರಾಬ್ಡಿ ದೇವಿ ಈ ಆಹ್ವಾನ ನೀಡಿದ್ದಾರೆ.

“ಬಿಜೆಪಿಯೇತರ ಪಕ್ಷಗಳು ಅದು ನಿತೀಶ್‌ ಕುಮಾರ್‌ ಅಥವಾ ಇನ್ನು ಯಾರೇ ಇರಲಿ, ಅವರು ಒಂದೇ ವೇದಿಕೆಯಲ್ಲಿ ಸೇರಿಕೊಳ್ಳಬೇಕು. ಈ ಮೂಲಕ ದೇಶಕ್ಕೆ ಬದಲಿ ಆಯ್ಕೆ ನೀಡಬೇಕು. ನಾವು ಇಂಥವರು ಬೇಕು ಬೇಡ ಎಂಬ ಪಥ್ಯ ಹೊಂದಿಲ್ಲ’ ಎಂದಿದ್ದಾರೆ ರಘುವಂಶ ಸಿಂಗ್‌. 2020ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಅಂಶ ಮಹತ್ವದ್ದಾಗಿದೆ.

ಜೈಲಲ್ಲಿರುವ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರು ನಿತೀಶ್‌ ಕುಮಾರ್‌ ಮೈತ್ರಿಕೂಟಕ್ಕೆ ಬರುವಾದರೆ ಸೇರ್ಪಡೆಗೆ ಒಪ್ಪಿದ್ದಾರೆಯೇ ಎಂಬ ಪ್ರಶ್ನೆಗೆ, ಅವರು ತಮ್ಮ ಅಭಿಪ್ರಾಯವನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ. ಆರ್‌ಜೆಡಿ ನಾಯಕಿ ರಾಬಿx ದೇವಿ, ಹಿಂದುಸ್ತಾನ್‌ ಅವಾಮ್‌ ಮೋರ್ಚಾ (ಎಚ್‌ಎಎಂ) ನಾಯಕ ಜಿತನ್‌ ರಾಮ್‌ ಮಾಂಝಿ ಕೂಡ ನಿತೀಶ್‌ ಪರ ನಿಲುವು ವ್ಯಕ್ತಪಡಿಸಿದ್ದಾರೆ.

ಜೆಡಿಯು ನಾಯಕರು ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್‌ ರಾಂ ಮಾಂಝಿ ಭಾಗವಹಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಆರ್‌ಜೆಡಿ ನಾಯಕರಾದ ತೇಜ್‌ ಪ್ರತಾಪ್‌ ಯಾದವ್‌, ರಾಬಿx ದೇವಿ ಅವರು ಜಿತನ್‌ ರಾಂ ಮಾಂಝಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಬಿಹಾರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿ ನಾಯಕರಿಗೆ ಅವಕಾಶ ಕೊಡದೇ ಇರುವುದು ಮತ್ತು ಜಿತನ್‌ರಾಂ ಮಾಂಝಿ, ರಾಬ್ಡಿ ದೇವಿ ನಿತೀಶ್‌ ಪರವಾಗಿ ವಾದ ಮಂಡನೆ ಮಾಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ನಿತೀಶ್‌ಕುಮಾರ್‌ರನ್ನು ಮನವೊಲಿಸಲು ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮುಂದಾಗುವ ವರೆಗೆ ಬಿಹಾರದ ಬಗ್ಗೆ ಏನನ್ನೂ ಹೇಳುವಂತಿಲ್ಲ.

ಮೈತ್ರಿ ಬಿಡಲು ನಾವೂ ರೆಡಿ: ಅಖೀಲೇಶ್‌
ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಮಹಾಮೈತ್ರಿ ಬಹುತೇಕ ಮುರಿದುಬೀಳುವ ಹಂತಕ್ಕೆ ತಲುಪಿದೆ. ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿ ಘೋಷಿಸಿದ ಬೆನ್ನಲ್ಲೇ ಮಂಗಳವಾರ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಅವರೂ ಇದೇ ಮಾದರಿಯಲ್ಲಿ ಮಾತನಾಡಿದ್ದಾರೆ. ಬಿಎಸ್‌ಪಿ ಮೈತ್ರಿ ಮುರಿದುಕೊಂಡರೆ, ನಾವು ಕೂಡ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ ಎಂದು ಅವರು ತಿಳಿಸಿದ್ದಾರೆ. ಈ ನಡುವೆ, ಮಂಗಳವಾರ ತಮ್ಮ ನಿಲುವು ಸ್ವಲ್ಪಮಟ್ಟಿಗೆ ಸಡಿಲಿಸಿರುವ ಮಾಯಾವತಿ, “ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ, ಎಸ್‌ಪಿ ಜತೆಗಿನ ಮೈತ್ರಿಯನ್ನು ಶಾಶ್ವತವಾಗಿ ಕಡಿದುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.