ಮನೆಯಿಂದಲೇ ಪರಿಸರ ಜಾಗೃತಿ ಆರಂಭವಾಗಲಿ

Team Udayavani, Jun 6, 2019, 9:43 AM IST

bg-tdy-2..

ಚಿಕ್ಕೋಡಿ: ನ್ಯಾಯಾಲಯದ ಮುಂಭಾಗದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಮಕ್ಕಳಿಗೆ ಸಸಿ ವಿತರಿಸಿದರು.

ಚಿಕ್ಕೋಡಿ: ಪರಿಸರ ರಕ್ಷಣೆಯ ಮಹತ್ವದ ಅರಿವು ಮೂಡಿಸುವ ಕಾರ್ಯ ಮನೆಯಿಂದಲೇ ಆರಂಭವಾದಾಗ ಮಾತ್ರ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು. ಮನೆಯ ಯಜಮಾನ ತನ್ನ ಕುಟುಂಬಕ್ಕೆ ಪರಿಸರದ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿದ ಮೇಲೆ ಉಳಿದ ಸಂಘ-ಸಂಸ್ಥೆಗಳು ಅದನ್ನು ನಿಭಾಯಿಸಿಕೊಂಡು ಹೋಗಲು ಸಾಧ್ಯ ಎಂದು ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಮಹಾಂತಪ್ಪ ಎ.ಡಿ.ಹೇಳಿದರು.

ಇಲ್ಲಿನ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಸಿ ವಿತರಿಸಿ ಅವರು ಮಾತನಾಡಿದರು.

ಇಂದು ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಮಳೆ ಕಡಿಮೆ ಆಗುತ್ತಿದೆ. ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡು ಪ್ಲಾಸ್ಟಿಕ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧ ಮಾಡಬೇಕು. ಇದರಿಂದ ನೀರಿನ ಸದ್ಬಳಕೆ ಸಾಧ್ಯವಾಗುತ್ತದೆ. ನೀರಿನ ಸೆಲೆಗಳು ಇಂದು ಮಂಗಮಾಯವಾಗುತ್ತಿವೆ. ಗ್ರಾಮಗಳಲ್ಲಿರುವ ಕೆರೆ ಕಟ್ಟೆಗಳು ನೋಡಲು ಹೋದರೆ ಸಿಗುವುದಿಲ್ಲ, ನೀರಿನ ಸೆಲೆಗಳು ಇದ್ದರೆ ಮಾತ್ರ ನೀರಿನ ಜಲಮೂಲಗಳು ಸಿಗಲು ಸಾಧ್ಯ. ಸರ್ಕಾರ ಅನವಶ್ಯಕವಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಅದನ್ನೆಲ್ಲ ಬಿಟ್ಟು ಹಳ್ಳಿಯಲ್ಲಿರುವ ಕೆರೆಗಳನ್ನು ಪುನಶ್ಚೇತನಗೊಳಿಸಿದರೆ ರೈತರಿಗೆ ವರದಾನವಾಗುತ್ತದೆ ಎಂದರು.

ಕಾಲಕ್ಕೆ ತಕ್ಕಂತೆ ಮಳೆಯಾಗಲು ಸರ್ಕಾರ ಪ್ಲಾಸ್ಟಿಕ್‌ ಕಡ್ಡಾಯ ನಿಷೇಧ ಮಾಡಿದರೆ ವಾಯು ಮಾಲಿನ್ಯ, ಜಲಮಾಲಿನ್ಯ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದ ಅವರು, ಸ್ವಚ್ಛ ಸುಂದರ ಮತ್ತು ಹಚ್ಚ ಹಸಿರಿನ ನಗರ ನಿರ್ಮಾಣ ಮಾಡಲು ಪ್ರತಿಯೊಬ್ಬ ನಾಗರಿಕನು ಮನೆ ಮುಂದೆ ಒಂದೊಂದು ಗಿಡ ನೆಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಎಸ್‌.ಎಲ್.ಚವಾಣ ಮಾತನಾಡಿ, ಬೆಳೆದ ಗಿಡಗಳನ್ನು ಮಾನವ ಕಡಿದು ಹಾಕಿರುವು‌ದರಿಂದ ಇಂದು ಸಮರ್ಪಕ ಮಳೆ ಆಗುತ್ತಿಲ್ಲ, ಭೂಮಿಯಲ್ಲಿ ಬೆಳೆ ಬರುತ್ತಿಲ್ಲ, ಆದ್ದರಿಂದ ಮಳೆ ಬೆಳೆ ಚೆನ್ನಾಗಿ ಆಗಬೇಕಾದರೆ ಮರಗಳನ್ನು ಬೆಳೆಸುವುದು ಅತೀ ಅವಶ್ಯಕ ಎಂದರು. ಇದೇ ಸಂದರ್ಭದಲ್ಲಿ ನ್ಯಾಯಾಲಯದಿಂದ ಸಿಎಲ್ಇ ಸಂಸ್ಥೆಯವರಿಗೆ ಪರಿಸರ ಕುರಿತು ಜಾಗೃತಿ ಜಾಥಾ ನಡೆಯಿತು. ನ್ಯಾಯಾಲಯದ ಮುಂಭಾಗದಲ್ಲಿ ಸಸಿ ನೆಡಲಾಯಿತು.

ವೇದಿಕೆ ಮೇಲೆ ಪ್ರಧಾನ ದಿವಾಣಿ ನ್ಯಾಯಾಧಿಧೀಶ ವಿಜಯಕುಮಾರ ಬಾಗಡೆ, ಒಂದನೆ ಹೆಚ್ಚುವರಿ ದಿವಾಣಿ ನ್ಯಾಯಾಧೀಶ, ಮಂಜುಳ ಬಿ. ಎರಡನೆ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಯೋಗೇಶ ಕೆ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗೇಶ ಕಿವಡ, ಪರಿಸರ ಅಧಿಕಾರಿ ಐ.ಎಚ್.ಜಗದೀಶ, ವಲಯ ಅರಣ್ಯಾಧಿಕಾರಿ ಎಂ.ಬಿ.ಗಣಾಚಾರಿ, ನ್ಯಾಯವಾದಿ ಎಂ.ಬಿ.ಪಾಟೀಲ, ಎಸ್‌.ಜಿ.ಹಿರೇಮಠ, ಪ್ರಿಯಂಕಾ ವಿನಾಯಕ ಮುಂತಾದವರು ಇದ್ದರು. ನ್ಯಾಯವಾದಿ ಕಲ್ಮೇಶ ಕಿವಡ ಸ್ವಾಗತಿಸಿದರು. ಪ್ರಾಚಾರ್ಯ ಸುರೇಶ ಉಕ್ಕಲಿ ನಿರೂಪಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.