ನೀರಿಗಾಗಿ ಶೀಘ್ರ ಫಡ್ನವೀಸ್‌ ಭೇಟಿ

•ಶಾಸಕ ಕುಮಠಳ್ಳಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ನಿಯೋಗ

Team Udayavani, Jun 8, 2019, 1:31 PM IST

bg-tdy-3..

ಅಥಣಿ: ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ಕೃಷ್ಣಾ ನದಿ ನೀರು ಹೋರಾಟ ಸಮಿತಿಯಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಅಥಣಿ: ಶಾಶ್ವತ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮತ್ತು ಬತ್ತಿದ ಕೃಷ್ಣಾ ನದಿಗೆ ನೀರು ಬಿಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ ಕೃಷ್ಣಾ ಹೋರಾಟ ಸಮಿತಿ ಸದಸ್ಯರಿಗೆ ಸಕಾರಾತ್ಮಕವಾಗಿ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ.

ಎರಡು ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರು ಇಲ್ಲದೇ ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಇತರ ತಾಲೂಕುಗಳು ಮತ್ತು ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾದ ಪರಿಸ್ಥಿತಿ ಅಥಣಿ ಶಾಸಕ ಮಹೇಶ ಕುಮಠಳ್ಳಿಯವರಿಂದ ತಿಳಿದು ಬಂದಿದೆ. ಕೃಷ್ಣಾ ನದಿ ನೀರಿನ ವಿಷಯವನ್ನು ನಾನು ಕೂಡ ಗಂಭೀರವಾಗಿ ಪರಿಗಣಿಸಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಇವರೊಂದಿಗೆ ಚರ್ಚಿಸಲು ಸಮಯ ಕೇಳಲಾಗಿದೆ. ಮುಖ್ಯಮಂತ್ರಿಗಳು ಸಮಯ ಕೊಟ್ಟತಕ್ಷಣ ನನ್ನ ನೇತೃತ್ವದಲ್ಲಿ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಹಾಗೂ ಕೃಷ್ಣಾ ನದಿ ಪಾತ್ರದ ಎಲ್ಲ ಶಾಸಕರನ್ನು ಒಳಗೊಂಡ ನಿಯೋಗದಲ್ಲಿ ಭೇಟಿ ಮಾಡುವ ಕಾರ್ಯಕ್ಕೆ ನಾನು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.

ನಿಯೋಗದ ನೇತೃತ್ವ ವಹಿಸಿದ್ದ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಅಥಣಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಅವರಖೋಡ ಗ್ರಾಮದ ಹತ್ತಿರ ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ 25 ಅಡಿ ಎತ್ತರದ ಚಿಕ್ಕ ಡ್ಯಾಮ್‌(ತಡೆಗೋಡೆ) ಕಾಮಗಾರಿಗೆ ಇಷ್ಟರಲ್ಲಿಯೇ ಮಂಜೂರಾತಿ ದೊರಕಲಿದೆ. ಹಾಗೂ ಮಹಿಷವಾಡಗಿ ಗ್ರಾಮದ ಹತ್ತಿರ ಇರುವ ತಡೆಗೋಡೆ ಎತ್ತರಿಸುವ ಕಾಮಗಾರಿಯ ಮಂಜೂರಾತಿ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ ಅವರು, ಇದರಿಂದ ಶೇ.70 ರಷ್ಟು ಬೇಸಿಗೆ ಅವಧಿಯ ನೀರಿನ ಕೊರತೆ ನೀಗಿಸಲು ಸಾಧ್ಯವಾಗುತ್ತದೆ ಎಂದರು.

ಕೃಷ್ಣಾ ನದಿಯಲ್ಲಿ ನೀರು ಬತ್ತಿದ್ದರಿಂದ ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ, ಇತ್ತೀಚೆಗೆ ಶೇ.90ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿದ್ದರಿಂದ ಟ್ಯಾಂಕರ್‌ ಮೂಲಕವೂ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗುತ್ತಿಲ್ಲ, ಹೀಗಾಗಿ ತಕ್ಷಣವೇ ಮಾಹಾರಾಷ್ಟ್ರದ ಮುಖ್ಯಮಂತ್ರಿಯವರ ಸಮಯ ಪಡೆದು ಕೃಷ್ಣಾ ನದಿಗೆ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ ಈ ಭಾಗದ ಅತ್ಯಂತ ಕಷ್ಟದ ಪರಿಸ್ಥಿತಿ ಗಮನಸಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಕೆಪಿಸಿಸಿ ಸದಸ್ಯ ಕಿರಣಕುಮಾರ ಪಾಟೀಲ, ಬಿ.ಎಲ್.ಪಾಟೀಲ್ ಉಪಸ್ಥಿತರಿದ್ದರು.

ನಿಯೋಗದಲ್ಲಿ ಕರವೇ ಅಧ್ಯಕ್ಷ ಬಸನಗೌಡ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ, ರಮೇಶ ಬಾದವಾಡಗಿ, ವೆಂಕಟೇಶ ದೆಶಪಾಂಡೆ, ದೀಪಕ ಶಿಂಧೆ, ಮಂಜು ಹೊಳಿಕಟ್ಟಿ, ರಾಕೇಶ ಮೈಗೂರ, ದೀಪಕ ಕಾಂಬಳೆ, ಪ್ರಕಾಶ ಕಾಂಬಳೆ, ಗುತ್ತಿಗೆ ಪೌರಕಾರ್ಮಿಕ ಸಂಘದ ರವಿ ಕಾಂಬಳೆ, ಶ್ರೀಶೈಲ ಪೂಜಾರಿ, ಭಾರತೀಯ ಕಿಸಾನ ಸಂಘದ ಅಶೋಕ ದಾನಗೌಡರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.