ನಾಡಿದ್ದು ಗದುಗಿನರಾಷ್ಟ್ರೀಯ ಹೆದ್ದಾರಿ ಬಂದ್‌

Team Udayavani, Jun 8, 2019, 2:50 PM IST

Udayavani Kannada Newspaper

ಗದಗ: ಯುಪಿಎ ಸರಕಾರ ಅನುಷ್ಠಾನಕ್ಕೆ ತಂದಿದ್ದ ಭೂಸ್ವಾಧೀನ ಕಾಯ್ದೆಗೆ ರಾಜ್ಯ ಸಮ್ಮಿಶ್ರ ಸರಕಾರ ತಿದ್ದುಪಡಿ ತರಲು ಮುಂದಾಗಿದೆ. ರೈತ ವಿರೋಧಿ ನಿರ್ಧಾರವನ್ನು ಖಂಡಿಸಿ ಜೂ. 10ರಂದು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಂದ್‌ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಟಿಪ್ಪು ಸುಲ್ತಾನ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಟಿಪ್ಪು ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಹೆದ್ದಾರಿ ಬಂದ್‌ ನಡೆಸಲಾಗುತ್ತದೆ ಎಂದು ತಿಳಿಸಿದರು. ಎಸ್‌ಇಝಡ್‌ ಕೈಗಾರಿಕೆಗಳು ಮತ್ತು ನಗರೀಕರಣದ ಹೆಸರಲ್ಲಿ ದೇಶಾದ್ಯಂತ ರೈತರ ಜಮೀನುಗಳನ್ನು ಬೇಕಾಬಿಟ್ಟಿ ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಯುಪಿಎ ಸರಕಾರ ಏ. 1, 2014ರಂದು ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಅಲ್ಲದೇ, ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರತಿಯಾಗಿ ರೈತರಿಗೆ ಗ್ರಾಮೀಣ ಭಾಗದಲ್ಲಿ ನಾಲ್ಕು ಪಟ್ಟು, ನಗರ ಪ್ರದೇಶದಲ್ಲಿ ಎರಡು ಪಟ್ಟು ಪರಿಹಾರ ನೀಡಬೇಕೆಂಬ ಷರತ್ತು ವಿಧಿಸಿದೆ. ಆದರೆ, ರಾಜ್ಯ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಜಿಲ್ಲಾಧಿಕಾರಿಗಳಿಗೆ ಇದರ ಸಂಪೂರ್ಣ ಅಧಿಕಾರವನ್ನು ವಹಿಸಿ, ಹಿಡಗಂಟು ಕೊಟ್ಟು ರೈತರ ಭೂಮಿಯನ್ನು ಖರೀದಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದರಿಂದ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ರೈತರು ಬೀದಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರಕಾರದ ಕುತಂತ್ರವನ್ನು ಖಂಡಿಸಿ ಜೂ. 10ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದಲ್ಲಿ ಜಿಲ್ಲೆಯ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸಂಘದ ಪ್ರಮುಖರಾದ ವಿಜಯಕುಮಾರ ಪಿ. ಸುಂಕದ, ವಿಠuಲ್ ಜಾದವ್‌, ರವಿ ಒಡಿಯರ್‌ ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.