ಪ್ರೇಮ್ ಚಿತ್ರಕ್ಕೆ ರಚಿತಾರಾಮ್ ನಾಯಕಿ
ರಕ್ಷಿತಾ ನಿರ್ಮಾಣದ ಏಕಲವ್ಯದಲ್ಲಿ ರಾಣಾಗೆ ಜೋಡಿ
Team Udayavani, Jun 10, 2019, 3:00 AM IST
ನಟಿ ರಚಿತಾರಾಮ್ ಈಗ ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಸದ್ಯ ಒಂದೆರೆಡು ಚಿತ್ರಗಳಲ್ಲಿ ಬ್ಯುಝಿಯಾಗಿದ್ದಾರೆ. ಈ ನಡುವೆ ಅವರು ಉಪೇಂದ್ರ ಅವರ ಜೊತೆ ಅಭಿನಯಿಸಿರುವ “ಐ ಲವ್ ಯು’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಅದರ ಬೆನ್ನಲ್ಲೇ ಅವರು ಈಗ “ಜೋಗಿ’ ಪ್ರೇಮ್ ನಿರ್ದೇಶನದ ಮತ್ತು ರಕ್ಷಿತಾ ಪ್ರೇಮ್ ನಿರ್ಮಾಣದ “ಏಕಲವ್ಯ'(ಏಕ್ ಲವ್ ಯಾ) ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಈ ಚಿತ್ರದಲ್ಲಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ನಾಯಕರಾಗಿ ನಟಿಸುತ್ತಿದ್ದಾರೆ. ಇದು ಅವರ ಮೊದಲ ಚಿತ್ರ. ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿತ್ತು. ಆದರೆ, ಚಿತ್ರದ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ರಚಿತಾರಾಮ್ ಚಿತ್ರದ ವಿಶೇಷ ಪಾತ್ರದಲ್ಲಿ ಮಿಂಚಲಿದ್ದಾರೆ ಎನ್ನಲಾಗಿದ್ದು, ಅದೊಂದು ಟಾಮ್ಬಾಯ್ ರೀತಿಯ ಪಾತ್ರವಂತೆ.
ಈ ಹಿಂದೆ ರಚಿತಾರಾಮ್ ಅವರು ಪ್ರೇಮ್ ನಿರ್ದೇಶನದ “ದಿ ವಿಲನ್’ ಚಿತ್ರದ ಹಾಡೊಂದರಲ್ಲಿ ಹೆಜ್ಜೆ ಹಾಕಿದ್ದರು. ಆ ಸಮಯದಲ್ಲೇ ಪ್ರೇಮ್ ಜೊತೆ ಇನ್ನೊಂದು ಚಿತ್ರದಲ್ಲಿ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು ರಚಿತಾ. ಈಗ ರಕ್ಷಿತಾ ಪ್ರೇಮ್ ನಿರ್ಮಾಣದ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಅವರಿಗೆ ಇಲ್ಲೊಂದು ಹೊಸ ತರಹದ ಪಾತ್ರ ಸಿಕ್ಕಿರುವುದು ಸಹಜವಾಗಿಯೇ ಖುಷಿಯಾಗಿದೆಯಂತೆ.ಇನ್ನು, ಜೂನ್ ಅಂತ್ಯದಲ್ಲಿ ರಚಿತಾರಾಮ್ ಅವರು “ಏಕಲವ್ಯ'(ಏಕ್ ಲವ್ ಯಾ) ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ