ಬಜ-ಬಲಯೂರು ರಸ್ತೆಗೆ ವನ್‌ ಟೈಮ್‌ ಡೆವಲಪ್‌ಮೆಂಟ್ ಯೋಗ

Team Udayavani, Jun 10, 2019, 6:10 AM IST

balayooru

ಬಂಟ್ವಾಳ : ಕಳೆದ ಲೋಕಸಭಾ ಚುನಾವಣೆ ಸಂದರ್ಭ ಗ್ರಾಮಸ್ಥರಿಂದ ಚುನಾವಣ ಬಹಿಷ್ಕಾರ ಹೋರಾಟಕ್ಕೆ ವೇದಿಕೆಯಾಗಿದ್ದ ಸರ ಪಾಡಿ ಗ್ರಾ.ಪಂ. ವ್ಯಾಪ್ತಿಯ ಬಜ- ಬಲಯೂರು ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಂತೆ ಕಂಡು ಬರುತ್ತಿದ್ದು, ಲೋಕೋಪಯೋಗಿ ಇಲಾಖೆಯ ಒಂದು ಬಾರಿ ಅಭಿವೃದ್ಧಿ (ವನ್‌ ಟೈಮ್‌ ಡೆವಲಪ್‌ಮೆಂಟ್) ಯೋಜನೆ ಮೂಲಕ ರಸ್ತೆ ಅಭಿವೃದ್ಧಿ ಗೊಳ್ಳಲಿದೆ.

ಸುಮಾರು 2 ಕಿ.ಮೀ. ಉದ್ದದ ಈ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ ಸಂಚಾರವೇ ಅಸಾಧ್ಯ ಎಂಬಷ್ಟರ ಮಟ್ಟಿಗೆ ದುಸ್ತರವಾಗಿದೆ. ಕಳೆದ ಹಲವು ವರ್ಷಗಳಿಂದ ಈ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯ ಕೇಳಿ ಬರುತ್ತಿದ್ದರೂ ರಸ್ತೆ ಅಭಿವೃದ್ಧಿಗೊಂಡಿರಲಿಲ್ಲ.

ಕೆಲವು ಸಮಯಗಳ ಹಿಂದೆ ರಸ್ತೆಯ ಡಾಮರು ಕಿತ್ತು ಹೋಗಿ ಸಂಚಾರ ಅಸಾಧ್ಯವಾದ ಹಿನ್ನೆಲೆಯಲ್ಲಿ ಇದ್ದ ಅಲ್ಪಸಲ್ಪ ಡಾಮರನ್ನು ಕಿತ್ತು ಹಾಕಿ ಸಮತಟ್ಟುಗೊಳಿಸಲಾಗಿತ್ತು. ಈ ಹಿಂದೆ ಪೈಪ್‌ಲೈನ್‌ ಕಾಮಗಾರಿ ವೇಳೆ ರಸ್ತೆಗೆ ಪೂರ್ತಿ ಮಣ್ಣು ಬಿದ್ದು, ಧೂಳಿನಿಂದ ಸಂಚಾರಕ್ಕೆ ತೊಂದರೆಯಾಗಿದ್ದು, ಇದೀಗ ಮಳೆ ಬಿದ್ದು ರಸ್ತೆ ಸಂಪೂರ್ಣ ಕೆಸರುಮಯ ಸ್ಥಿತಿಗೆ ತಲುಪಿದೆ.

ವನ್‌ ಟೈಮ್‌ ಡೆವಲಪ್‌ಮೆಂಟ್

ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಾಗ ಅದನ್ನು ಜಿ.ಪಂ. ಅನುದಾನದಿಂದ ದುರಸ್ತಿ ಪಡಿಸುವುದು ಅಸಾಧ್ಯದ ಮಾತು. ಹೀಗಾಗಿ ಸರಕಾರವು ಲೋಕೋಪಯೋಗಿ ಇಲಾಖೆ ಮೂಲಕ ಒಂದು ಬಾರಿ ಅಭಿವೃದ್ಧಿ ಯೋಜನೆ ಮೂಲಕ ಅಭಿವೃದ್ಧಿಪಡಿಸಿ ಮತ್ತೆ ಜಿ.ಪಂ.ಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದೆ.

ಪ್ರಸ್ತುತ ರಸ್ತೆಗೆ ಮಂಜೂರಾದ ಅನು ದಾನದ ಟೆಂಡರ್‌ ಪ್ರಕ್ರಿಯೆ ಆರಂಭ ಗೊಂಡಿದ್ದು, ಲೋಕೋಪಯೋಗಿ ಇಲಾಖೆಯ ಮಂಗಳೂರು ಕಚೇರಿಯ ಮೂಲಕ ಟೆಂಡರ್‌ ಕಾರ್ಯ ನಡೆಯುತ್ತದೆ. ಅದಕ್ಕೆ ಬೆಂಗಳೂರಿನಲ್ಲಿ ಅನುಮೋದನೆ ಲಭಿಸಿದ ಬಳಿಕ ಕಾಮಗಾರಿಯ ಆದೇಶ ಪತ್ರ (ವರ್ಕ್‌ ಆರ್ಡರ್‌) ನೀಡಲಾಗುತ್ತದೆ. ಸುಮಾರು 1 ತಿಂಗಳಲ್ಲಿ ಈ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಪ್ರಸ್ತುತ ಅದರ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡರೂ ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಮಳೆಗೆ ಕಾಮಗಾರಿ ನಡೆಸುವುದು ಅಸಾಧ್ಯವಾಗಬಹುದು. ಆದರೆ ಮಳೆ ಬಾರದೇ ಇದ್ದರೆ ಕಾಮಗಾರಿ ವೇಗವನ್ನು ಪಡೆದುಕೊಳ್ಳಬಹುದು, ಇಲ್ಲದೇ ಇದ್ದರೆ ಮಳೆಗಾಲ ಮುಗಿದ ಬಳಿಕವೇ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ.

ಗ್ರಾಮಸ್ಥರ ಮನವೊಲಿಕೆ 50 ಲಕ್ಷ ರೂ.ಗಳಲ್ಲಿ ಅಭಿವೃದ್ಧಿ

ಈಗಾಗಲೇ ಟೆಂಡರು ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ತಿಂಗಳೊಳಗೆ ಪೂರ್ಣಗೊಳ್ಳುತ್ತದೆ. ಈ ಕುರಿತು ಯಾವುದೇ ಗೊಂದಲಗಳಿಲ್ಲ. ಒಂದು ಬಾರಿ ಅಭಿವೃದ್ಧಿ ಯೋಜನೆಯ ಮೂಲಕ 50 ಲಕ್ಷ ರೂ.ಗಳಲ್ಲಿ ರಸ್ತೆಯನ್ನು ಅಭಿವೃದ್ಧಿ ಪಡಿಸಿ ಜಿ.ಪಂ.ಗೆ ಹಸ್ತಾಂತರಿಸಲಾಗುವುದು.
– ಉಮೇಶ್‌ ಭಟ್, ಎಇಇ, ಲೋಕೋಪಯೋಗಿ ಇಲಾಖೆ, ಬಂಟ್ವಾಳ
– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.