ಕೊನೆಗೂ ನನಸಾದ ಕುಂತೂರು ಸಂಪರ್ಕ ಸೇತು

ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಮುಖ್ಯಮಂತ್ರಿಗೆ ಅಭಿನಂದನೆ

Team Udayavani, Jun 12, 2019, 10:18 AM IST

setuve

ಆಲಂಕಾರು: ಮುಖ್ಯಮಂತ್ರಿ ಶಾಲಾ ಸಂಪರ್ಕ ಸೇತು ಯೋಜನೆಯಡಿ ತಾವು ಶಾಲೆಗೆ ಹೋಗುವ ದಾರಿಯಲ್ಲಿ ಸಿಗುವ ತೊರೆಗೆ ಸೇತುವೆ ನಿರ್ಮಿಸಿ ಕೊಟ್ಟದ್ದಕ್ಕಾಗಿ ಪುತ್ತೂರಿನ ಕುಂತೂರು ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಸಿಎಂ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಶಾಲಾ ಸಂಪರ್ಕ ಸೇತು ನಿರ್ಮಾಣವಾಗಿದ್ದು, ಇದರ ಅನುಷ್ಠಾನದ ಕುರಿತು ಸ್ಥಳೀಯರ ಅಭಿಪ್ರಾಯ ತಿಳಿಯುವ ನಿಟ್ಟಿನಲ್ಲಿ ಮಂಗಳವಾರ ಸಿಎಂ ಅವರು ವಿದ್ಯಾರ್ಥಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಆಯೋಜಿಸಿದ್ದರು.

ಪುತ್ತೂರು ತಾಲೂಕಿನ (ಪ್ರಸ್ತುತ ಕಡಬ) ಪೆರಾಬೆ ಗ್ರಾ.ಪಂ. ವ್ಯಾಪ್ತಿಯ ಕುಂತೂರು ಉನ್ನತೀಕರಿಸಿದ ಹಿ.ಪ್ರಾ. ಶಾಲೆಗೆ ಸಂಬಂಧಿಸಿ ಕುಂತೂರು ಮಜಲು ಅರ್ಬಿಯಲ್ಲಿ 10.10 ಲಕ್ಷ ರೂ. ಅನುದಾನದಲ್ಲಿ ಕಾಲು ಸಂಕ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಆ ಶಾಲೆಯ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು. ಅರ್ಬಿ ಪ್ರದೇಶದಲ್ಲೇ ವಿಡಿಯೋ ಕಾನ್ಫರೆನ್ಸ್‌ ನಡೆಯಿತು. ವಿದ್ಯಾರ್ಥಿಗಳ ಪರವಾಗಿ ಶಿಕ್ಷಕ ಜಿ.ಪಿ. ಜಯಪ್ರಕಾಶ್‌ ರೈ ಅರ್ಬಿ ಸಿಎಂ ಜತೆ ಮಾತನಾಡಿದರು. ವಿದ್ಯಾರ್ಥಿನಿ ಪ್ರತೀಕ್ಷಾ, ಶಿಕ್ಷಕಿ ವಿದ್ಯಾ ಮಂಜುಳಾ ಅವರೂ ಅಭಿಪ್ರಾಯ ವ್ಯಕ್ತಪಡಿಸಿದರು.

ಅರ್ಬಿಯ ತೋಡು ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಮಕ್ಕಳಿಗೆ ಶಾಲೆಗೆ ಹೋಗಲು ಕಷ್ಟವಾಗು ತ್ತಿತ್ತು. ಈಗ ಕಾಲುಸಂಕ ನಿರ್ಮಾಣ ವಾಗಿರುವುದರಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತು ಸ್ಥಳೀಯರಿಗೆ ಅನುಕೂಲವಾಗಿದೆ. ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಾಲಯ, ಚರ್ಚ್‌, ಬೇಳ್ಪಾಡಿ ಮಸೀದಿ, ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತದೆ.

ತಮ್ಮ ವ್ಯಾಪ್ತಿಯಲ್ಲಿ ಬೇರೆ ಯಾವ ಸಮಸ್ಯೆ ಇದೆ ಎಂದು ಪ್ರಶ್ನಿಸಿ ಅದನ್ನು ನೋಟ್‌ ಮಾಡಿಟ್ಟುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದು, ಅದರಂತೆ ರಸ್ತೆ ಸಮಸ್ಯೆ ವಿವರಿಸುವ ವೇಳೆ ಸಂಪರ್ಕ ಕಡಿತಗೊಂಡಿತು ಎಂದು ಶಿಕ್ಷಕ ಜಯಪ್ರಕಾಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಈ ಸಂದರ್ಭ ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್‌ ಕಾನಿಷ್ಕ, ಕಿರಿಯ ಎಂಜಿನಿಯರ್‌ ರವಿಚಂದ್ರ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಜತೆ ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಇದ್ದರು.

ಸಿಎಂ ಜತೆ ಕಾನ್ಫರೆನ್ಸ್‌ಗೆ ವ್ಯವಸ್ಥೆ
ಶಾಲಾ ಸಂಪರ್ಕ ಸೇತು ಯೋಜನೆಯ ಕುರಿತು ನಮ್ಮ ಮೇಲಧಿಕಾರಿಗಳ ನಿರ್ದೇಶನದಂತೆ ಸಿಎಂ ಜತೆಗಿನ
ಕಾನ್ಫರೆನ್ಸ್‌ಗೆ ವ್ಯವಸ್ಥೆ ಮಾಡಿದ್ದೆವು. ಪೂರ್ವಾಹ್ನ 11.45ರ ವೇಳೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ಈ ಕಾಲುಸಂಕವು ಪುತ್ತೂರು ಉಪವಿಭಾಗದಿಂದ ಅನುಷ್ಠಾನಗೊಂಡಿತ್ತು. – ಕಾನಿಷ್ಕ, ಸಹಾಯಕ ಎಂಜಿನಿಯರ್‌, ಪಿಡಬ್ಲ್ಯುಡಿ, ಪುತ್ತೂರು

ಟಾಪ್ ನ್ಯೂಸ್

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.