ಅಕ್ರಮ ಖಾತೆ ವಿರುದ್ಧ 4ನೇ ದಿನವೂ ಪ್ರತಿಭಟನೆ

ಮಾನವ ಹಕ್ಕುಗಳ ಮಿಷನ್‌ ಸಂಘಟನೆ ಮಾನವ ಸರಪಳಿ ರಚಿಸಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆ

Team Udayavani, Jun 14, 2019, 9:53 AM IST

mandya-tdy-2..

ನಿವೇಶನವನ್ನು ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ಕ್ರಮ ಖಂಡಿಸಿ ಮಾನವ ಹಕ್ಕುಗಳ ಮಿಷನ್‌ ಸಂಘಟನೆ ಪದಾಧಿಕಾರಿಗಳು ರಸ್ತೆತಡೆ ನಡೆಸಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಣಿಕಂಠ ಅವರ ಪ್ರತಿಕೃತಿ ದಹಿಸಿದರು.

ಮದ್ದೂರು: ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ಕ್ರಮ ಖಂಡಿಸಿ ಮಾನವ ಹಕ್ಕುಗಳ ಮಿಷನ್‌ ಸಂಘಟನೆಯ ಪದಾಧಿಕಾರಿಗಳು ನಡೆಸುತ್ತಿದ್ದ ಅಹೋರಾತ್ರಿ ಧರಣಿ ನಾಲ್ಕನೇ ದಿನ ಗುರುವಾರವೂ ಮುಂದುವರಿದಿದೆ.

ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿ ವೇಳೆ ಪ್ರತಿಭಟನಾನಿರತರು ಮಾನವ ಸರಪಳಿ ರಚಿಸಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದರಲ್ಲದೇ ತಾಪಂ ಇಒ ಮಣಿಕಂಠ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಂಚಾರ ಅಸ್ತವ್ಯಸ್ತ: ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆತಡೆಯಿಂದ ಮೈಸೂರು-ಬೆಂಗಳೂರು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತು. ಕಳೆದ ನಾಲ್ಕು ದಿನಗಳಿಂದಲೂ ಅಹೋರಾತ್ರಿ ಧರಣಿ ಕೈಗೊಂಡಿದ್ದರೂ ಜಿಲ್ಲಾಧಿಕಾರಿಗಳೂ ಸೇರಿದಂತೆ ತಹಶೀಲ್ದಾರ್‌ ಕೂಡ ಘಟನಾ ಸ್ಥಳಕ್ಕೆ ಆಗಮಿಸದೆ ನಿರ್ಲಕ್ಷ್ಯ ವಹಿಸಿರುವ ಕ್ರಮ ಖಂಡಿಸಿದರು.

ತಾಲೂಕು ಆಡಳಿತವೇ ಹೊಣೆ: ಕಳೆದ ಆರು ತಿಂಗಳಿಂದಲೂ ಅಕ್ರಮ ಖಾತೆ ಮಾಡಿಕೊಟ್ಟಿರುವುದನ್ನು ರದ್ಧುಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದು ಇದಕ್ಕೆ ಸಂಪೂರ್ಣ ತಾಲೂಕು ಆಡಳಿತವೇ ಹೊಣೆಯಾಗಲಿದೆ. ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿದರು.

ತಾಪಂ ಇಒಗೆ ತರಾಟೆ: ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಒ ಮಣಿಕಂಠ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಮುಂದಿನ 15 ದಿನದೊಳಗಾಗಿ ಅಕ್ರಮ ಖಾತೆ ಮಾಡಿಕೊಟ್ಟಿರುವ ಸಂಬಂಧ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದ ಮಣಿಕಂಠ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಕೂಡಲೇ ನಿವೇಶನಕ್ಕೆ ಖಾತೆ ಮಾಡಿಕೊಡುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು.

ಗೆಜ್ಜಲಗೆರೆ ಗ್ರಾಮದ ಸರ್ವೆ.ನಂ.267ರ ಜಮೀನನ್ನು ಪಿಡಿಒ ಹಾಗೂ ಹಿಂದಿನ ಗ್ರಾಪಂ ಅಧ್ಯಕ್ಷೆ ನಾಗಮ್ಮ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು ಇದನ್ನು ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ ವಹಿಸಿದ್ದಾರೆಂದು ದೂರಿದರು. ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಚಂದ್ರಕುಮಾರ್‌, ಪದಾಧಿಕಾರಿಗಳಾದ ಅಂಬುಜೀ, ರಮೇಶ್‌, ಆಕಾಶ್‌, ಜ್ಯೋತಿ, ಹನುಮ, ಕೃಷ್ಣ, ಬೋರಮ್ಮ, ಕೆಂಪಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.