ಟ್ರ್ಯಾಕ್ಟರ್‌ನಿಂದ ಬಿದ್ದು 2ವರ್ಷದ ಮಗು ಸಾವು

Team Udayavani, Jun 14, 2019, 1:09 PM IST

Udayavani Kannada Newspaper

ಬೆಂಗಳೂರು: ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ಎರಡು ವರ್ಷದ ಬಾಲಕ ಅಸುನೀಗಿದ ಘಟನೆ ಈಜಿಪುರ ಜಂಕ್ಷನ್‌ನಲ್ಲಿರುವ ರಕ್ಷಣಾ ಇಲಾಖೆ ಪ್ರದೇಶದ ಆವರಣದೊಳಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಕ್ಷಣಾ ಇಲಾಖೆ ಪ್ರದೇಶದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣದ ಕಾರ್ಮಿಕ ಸುರೇಶ್‌ ಸಿಂಗ್‌ ಪತ್ನಿ ಯಶೋಧ ಪುತ್ರ ಯಶಪಾಲ ಸಿಂಗ್‌(2) ಮೃತ ಬಾಲಕ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಆಗಮಿಸಿದ್ದ ರಾಜಸ್ಥಾನ ಮೂಲದ ದಂಪತಿ, ಎರಡು ವರ್ಷದ ಮಗನನ್ನು ಕಳೆದುಕೊಂಡು. ನೋವು ಮರೆಯಲು ಸ್ವಂತ ಊರಿಗೆ ತೆರಳಿದ್ದಾರೆ.

ಜೂನ್‌ 8ರಂದು ದಂಪತಿ ಎಂದಿನಂತೆ ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಶೆಡ್‌ನಿಂದ ಕೆಲಸದ ಸ್ಥಳಕ್ಕೆ ತೆರಳಲು ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದರು. ಈ ವೇಳೆ ಯಶೋಧ ಮಗು ಯಶಪಾಲ್ನನ್ನು ಜತೆಗೆ ಕೂರಿಸಿಕೊಂಡಿದ್ದರು. ಈ ವೇಳೆ ಮಗು ಯಶಪಾಲ್ ಆಯತಪ್ಪಿ ಟ್ರ್ಯಾಕ್ಟರ್‌ನಿಂದ ಕೆಳಕ್ಕೆ ಬಿದ್ದಿದ್ದು ತಲೆಗೆ ಗಂಭೀರ ಪೆಟ್ಟಾಗಿದ್ದು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದಂಪತಿ ಕಟ್ಟಡ ನಿರ್ಮಾಣ ಹಂತದ ಕೆಲಸದಲ್ಲಿ ತೊಡಗಿದ್ದಾಗ ಮಗುವನ್ನು ಟ್ರ್ಯಾಕ್ಟರ್‌ ಡೈವರ್‌ ಸೀಟಿನ ಹಿಂಭಾಗವಿರುವ ಸೀಟ್‌ನಲ್ಲಿ ಕುಳ್ಳಿರಿಸಿದ್ದಾರೆ. ಮಗು ಕೆಲ ಸಮಯದ ಬಳಿಕ ಆಯ ತಪ್ಪಿ ಡಾಂಬರು ರಸ್ತೆಯ ಮೇಲೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದ್ದು ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದೆ. ಬಹುಶ: ಮಗು ನಿದ್ದೆ ಬಂದಾಂತಾಗಿ ಕೆಳಗೆ ಬಿದ್ದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಸುರೇಶ್‌ ಸಿಂಗ್‌, ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಮಗುವಿನ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಬಿಲ್ಡಿಂಗ್‌ ಕಂಟ್ರಾಕ್ಟರ್‌ ಪಂಕಜ್‌ ಶೆಟ್ಟಿ ಹಾಗೂ ಕೂಲಿ ಕಾರ್ಮಿಕರ ಕಂಟ್ರಾಕ್ಟರ್‌ ಲಕ್ಷ್ಮಣ್‌ ಸಿಂಗ್‌ ವಿರುದ್ಧ ವಿವೇಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪಂಕಜ್‌ಶೆಟ್ಟಿ ಹಾಗೂ ಲಕ್ಷ್ಮಣ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ದಂಪತಿ ಇಬ್ಬರು ರಾಜಸ್ಥಾನಕ್ಕೆ ತೆರಳಿದ್ದು, ಅವರು ಬಂದ ಬಳಿಕ ಹೇಳಿಕೆ ದಾಖಲಿಸಿಕೊಳ್ಳಲಾಗುವುದು. ಸದ್ಯ, ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.