ಒಳ್ಳೆಯ ಪಾತ್ರ ಬಂದರೆ ನಟಿಸಲು ಈಗಲೂ ರೆಡಿ

•ಜನರ ನಿರೀಕ್ಷೆ ಪೂರ್ಣಗೊಳಿಸಲು ಮೊದಲ ಆದ್ಯತೆ •ಮಂಡ್ಯ ಜನರಿಗೆ ದ್ರೋಹ ಬಗೆಯುವ ಕೆಲಸ ಮಾಡಲ್ಲ

Team Udayavani, Jun 16, 2019, 9:40 AM IST

hubali-tdy-6..

ಹುಬ್ಬಳ್ಳಿ: ಸಂವಾದದಲ್ಲಿ ಸಂಸದೆ ಸುಮಲತಾ ಅಂಬರೀಷ ಮಾತನಾಡಿದರು.

ಹುಬ್ಬಳ್ಳಿ: ಒಳ್ಳೆಯ ಪಾತ್ರಗಳು ಬಂದರೆ ಈಗಲೂ ನಟಿಸಲು ಸಿದ್ಧವಾಗಿದ್ದೇನೆ. ಆದರೆ ಜನರು ಹೊಸ ಜವಾಬ್ದಾರಿ ನೀಡಿರುವುದರಿಂದ ಅವರ ನಿರೀಕ್ಷೆ ಪೂರ್ಣಗೊಳಿಸುವುದು ನನ್ನ ಮುಂದಿರುವ ಮೊದಲ ಕರ್ತವ್ಯವಾಗಿದೆ ಎಂದು ಸಂಸದೆ ಸುಲಮತಾ ಅಂಬರೀಷ ಹೇಳಿದರು.

ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ‘ಅಮರ್‌’ ಚಿತ್ರದ ಪ್ರಚಾರಾರ್ಥ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಂಡ್ಯದ ಜನರು ನನ್ನ ಮೇಲೆ ಹಲವು ನಿರೀಕ್ಷೆಗಳನ್ನಿಟ್ಟುಕೊಂಡು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ. ಹೀಗಾಗಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನರ ಸೇವೆ ನನ್ನ ಮೊದಲ ಕಾರ್ಯವಾಗಿದೆ ಎಂದರು.

ಸಿನಿಮಾ ರಂಗಕ್ಕೆ ಆಗಮಿಸುತ್ತೇನೆ ಎನ್ನುವ ನಿರೀಕ್ಷೆ ಇರಲಿಲ್ಲ. ಆಕಸ್ಮಿಕವಾಗಿ 16ನೇ ವಯಸ್ಸಿನಲ್ಲಿ ಬಂದ ಅವಕಾಶದಿಂದ ಈ ಹಂತಕ್ಕೆ ಬಂದು ತಲುಪಿದ್ದೇನೆ. ಸಾರ್ವಜನಿಕ ಬದುಕನ್ನು ಆಯ್ದುಕೊಂಡಾಗ ಎಲ್ಲರಂತೆ ಸಾಮಾನ್ಯ ಜೀವನ ನಡೆಸುವುದು ಕಷ್ಟಸಾಧ್ಯ. ಆದರೆ ಜನರ ಪ್ರೀತಿಯಲ್ಲಿ ನಾವು ತ್ಯಾಗ ಮಾಡಿರುವುದು ಮರೆಯುತ್ತೇವೆ. ನಾವು ಆಯ್ದುಕೊಳ್ಳುವ ಕ್ಷೇತ್ರ ನಮ್ಮ ಬದುಕನ್ನು ರೂಪಿಸುತ್ತದೆ. ಇದೀಗ ರಾಜಕೀಯ ಕ್ಷೇತ್ರ ಆಯ್ದುಕೊಂಡಿದ್ದು, ಜನರ ಭಾವನೆ, ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದರು.

ಅಂಬರೀಷರ ಕನಸು: ಅಮರ ಚಿತ್ರ ಅಂಬರೀಶ ಅವರ ಕನಸಾಗಿತ್ತು. ಈ ಚಿತ್ರವನ್ನು ನೋಡಬೇಕು ಎನ್ನುವ ಆಸೆ ಅವರದ್ದಾಗಿತ್ತು. ಆದರೆ ಆ ಭಾಗ್ಯ ಅವರಿಗೆ ದೊರೆಯಲಿಲ್ಲ. ಚಿತ್ರರಂಗದಲ್ಲಿ ಅವರನ್ನು ಎತ್ತರಕ್ಕೆ ಬೆಳೆಸಿದ ನಾಡಿನ ಜನರು ಈ ಚಿತ್ರ ವೀಕ್ಷಿಸಿ ಅಭಿಷೇಕಗೆ ಆಶೀರ್ವಾದ ಮಾಡುವ ಮೂಲಕ ಅಂಬರೀಷ ಅವರ ಕೊನೆ ಆಸೆ ಈಡೇರಿಸಬೇಕು. ಪರಿಸರದ ಕುರಿತಾಗಿ ಉತ್ತಮ ಸಂದೇಶವನ್ನು ಇಟ್ಟುಕೊಂಡು ಈ ಚಿತ್ರ ನಿರ್ಮಿಸಲಾಗಿದೆ ಎಂದರು.

ನಾಯಕ ನಟ ಅಭಿಷೇಕ ಅಂಬರೀಶ ಮಾತನಾಡಿ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಚಿತ್ರಗಳಲ್ಲಿ ನಟಿಸಬೇಕು ಎಂಬುದು ನನ್ನ ಆಸೆ. ಎರಡು ಗಂಟೆಯ ಚಿತ್ರದಲ್ಲಿ ಇಡೀ ಜೀವನ ತೋರಿಸಲಾಗುತ್ತದೆ. ಕೊನೆಗೆ ಸತ್ಯಕ್ಕೆ ಮಾತ್ರ ಜಯ ಎಂಬುದು ತಿರುಳಾಗಿರುತ್ತದೆ. ನಮ್ಮ ಜೀವನಕ್ಕೆ ಪ್ರೇರಣೆ ನೀಡುವಂತಹ ವಿಷಯಗಳನ್ನು ಮಾತ್ರ ಸಿನಿಮಾಗಳಿಂದ ಸ್ವೀಕರಿಸಬೇಕು. ಜೀವನದಲ್ಲಿ ತಂದೆ ಗುಣ ಹಾಗೂ ತಾಯಿಯ ಶಿಸ್ತು ರೂಢಿಸಿಕೊಂಡಿದ್ದೇನೆ. ನನ್ನ ಮೊದಲ ಸಿನಿಮಾ ವೀಕ್ಷಿಸಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಚಿತ್ರದ ನಿರ್ದೇಶಕ ನಾಗಶೇಖರ, ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ, ನಿರ್ದೇಶಕ ಯೋಗರಾಜ ಭಟ್ಟ ಇನ್ನಿತರರಿದ್ದರು.

ಟಾಪ್ ನ್ಯೂಸ್

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.