ಇನ್ನೂ ಬಂದಿಲ್ಲ ಆಂಗ್ಲ ಪುಸ್ತಕ-ಸಮವಸ್ತ್ರ

ಪೋಷಕರಲ್ಲಿ ಹೆಚ್ಚಿದ ಆತಂಕ-ಶಿಕ್ಷಕರಿಗೆ ಸಂಕಟ•ಜುಲೈನಿಂದ ಇಂಗ್ಲಿಷ್‌ ತರಗತಿ ಆರಂಭ

Team Udayavani, Jun 17, 2019, 9:43 AM IST

16-June-1

ಸಾಂದರ್ಭಿಕ ಚಿತ್ರ.

ರಂಗಪ್ಪ ಗಧಾರ
ಕಲಬುರಗಿ:
ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಇನ್ನು ಪಠ್ಯಪುಸ್ತಕ ಮತ್ತು ಸಮವಸ್ತ್ರ ಪೂರೈಕೆಯಾಗಿಲ್ಲ. ಇದರಿಂದ ಆಂಗ್ಲ ಮಾಧ್ಯಮ ಆಯ್ಕೆ ಮಾಡಿಕೊಂಡ ಪೋಷಕರಿಗೆ ಆತಂಕ ಶುರುವಾಗಿದ್ದರೆ, ಪೋಷಕರಿಗೆ ಏನು ಉತ್ತರ ಕೊಡಬೇಕೆಂಬ ಸಂಕಷ್ಟದಲ್ಲಿ ಶಿಕ್ಷಕರು ಸಿಲುಕಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ಆಯ್ದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗಿದೆ. ಜಿಲ್ಲೆಯಲ್ಲಿ 39 ಶಾಲೆಗಳಲ್ಲಿ ಆಂಗ್ಲ ಶಿಕ್ಷಣ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆಯೂ ವ್ಯಕ್ತವಾಗಿದೆ. ಮಕ್ಕಳಿಗೆ ಇಂಗ್ಲಿಷ್‌ ಬೋಧಿಸಲು ಪ್ರತಿ ಶಾಲೆಯ ಒಬ್ಬ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ. ಜತೆಗೆ ಹೆಚ್ಚುವರಿಯಾಗಿ 20 ಶಿಕ್ಷಕರಿಗೂ ತರಬೇತಿ ಕೊಡಲಾಗಿದೆ.

ಆಂಗ್ಲ ಮಾಧ್ಯಮ ಬೋಧನೆಗೆ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ಕೈದು ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರತಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ 30 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಪೋಷಕರು ಸ್ವ-ಇಚ್ಛೆಯಿಂದ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ವಿಭಾಗಕ್ಕೆ ದಾಖಲು ಮಾಡುತ್ತಿದ್ದಾರೆ. ಆದರೆ, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ಇನ್ನೂ ಸರಬರಾಜಾಗಿಲ್ಲ.

ಪೋಷಕರಿಗೆ ಆತಂಕ: ರಾಜ್ಯಾದ್ಯಂತ ಮೇ 29ರಂದು 2019-20ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭಗೊಂಡಿದ್ದರೆ, ಜಿಲ್ಲೆಯಲ್ಲಿ ಅಧಿಕ ತಾಪಮಾನದಿಂದಾಗಿ 10 ದಿನ ತಡವಾಗಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಶಾಲೆಗಳ ಆರಂಭದಿಂದಲೇ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಬೇಡಿಕೆ ಇದೆ. ಕೆಲ ಕಡೆಗಳಲ್ಲಿ ದಾಖಲಾತಿ ಆರಂಭಕ್ಕೂ ಮುನ್ನವೇ ಪೋಷಕರು ಅರ್ಜಿಗಳನ್ನು ಪಡೆದುಕೊಂಡು ಹೋಗಿರುವ ನಿದರ್ಶನಗಳು ಇವೆ.

ಸದ್ಯಕ್ಕಂತೂ ಪಾಲಕರು ಸರ್ಕಾರಿ ಶಾಲೆಯಲ್ಲೇ ಇಂಗ್ಲಿಷ ಶಿಕ್ಷಣ ಸಿಗುತ್ತಿದೆ ಎಂದು ತಮ್ಮ ಮಕ್ಕಳನ್ನು ದಾಖಲಿಸಲು ಶಾಲೆಗಳತ್ತ ದಾಂಗುಡಿ ಇಡುತ್ತಿದ್ದಾರೆ. ಆದರೆ, ಇಂಗ್ಲಿಷ ವಿಭಾಗದ ಮಕ್ಕಳಿಗೆ ಪಠ್ಯ-ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯ ಆಗುತ್ತಿಲ್ಲ. ಕನ್ನಡ ಮಾಧ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಶಾಲೆಗೆ ದಾಖಲಾದ ದಿನವೇ ಬಟ್ಟೆ ಹಾಗೂ ಪುಸ್ತಕ ದೊರೆಯುತ್ತಿದೆ. ಇದು ಸಹಜವಾಗಿಯೇ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮಕ್ಕೆ ದಾಖಲಿಸಿದ ಪೋಷಕರಲ್ಲಿ ಆಂತಕ ಸೃಷ್ಟಿಯಾಗಲು ಕಾರಣವಾಗಿದೆ.

ಶಿಕ್ಷಕರಿಗೆ ಸಂಕಟ: ಕನ್ನಡ ಮತ್ತು ಇಂಗ್ಲಿಷ ಮಾಧ್ಯಮ ವಿಭಾಗ ಎರಡಕ್ಕೂ ಒಟ್ಟಿಗೆ ದಾಖಲಾತಿ ನಡೆಯುತ್ತಿದೆ. ಕನ್ನಡ ಮಾಧ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲ ದಿನ ಬಟ್ಟೆ ಹಾಗೂ ಸಮವಸ್ತ್ರ ಸಿಗುತ್ತಿದ್ದರೆ, ಇಂಗ್ಲಿಷ ವಿಭಾಗದ ಮಕ್ಕಳಿಗೆ ಸಿಗುತ್ತಿಲ್ಲ. ನಮ್ಮ ಮಕ್ಕಳಿಗೆ ಯಾಕೆ ಬಟ್ಟೆ, ಪುಸ್ತಕ ಕೊಡುತ್ತಿಲ್ಲ ಎಂದು ಇಂಗ್ಲಿಷ ವಿಭಾಗಕ್ಕೆ ಮಕ್ಕಳನ್ನು ದಾಖಲಿಸಿದ ಪೋಷಕರು ನೇರವಾಗಿ ಶಿಕ್ಷಕರನ್ನು ಪ್ರಶ್ನಿಸುತ್ತಿದ್ದಾರೆ. ಪೋಷಕರಿಗೆ ಸಮಜಾಯಿಸಿ ಹೇಳುವುದೇ ಶಿಕ್ಷಕರಿಗೆ ಸವಾಲಾಗಿ ಪರಿಣಮಿಸಿದೆ.

ಆರಂಭದಿಂದಲೂ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಬೇಡಿಕೆ ಇದೆ. ಪಕ್ಕದ ಗ್ರಾಮದಿಂದ ಬಂದು ಮಕ್ಕಳನ್ನು ಇಂಗ್ಲಿಷ ಮಾಧ್ಯಮಕ್ಕೆ ಪೋಷಕರು ದಾಖಲಿಸುತ್ತಿದ್ದಾರೆ. ಆದರೆ, ಇಂಗ್ಲಿಷ ವಿಭಾಗಕ್ಕೆ ದಾಖಲಿಸಿದ ಪೋಷಕರು ಬಟ್ಟೆ ಮತ್ತು ಪಠ್ಯ ಪುಸ್ತಕ ಕೇಳುತ್ತಿದ್ದಾರೆ. ಪೂರೈಕೆಯಾಗಿಲ್ಲ ಎಂದು ತಿಳಿ ಹೇಳಿದಾಗ ಕೆಲ ಪೋಷಕರು ಅರ್ಥ ಮಾಡಿಕೊಂಡು ಸುಮ್ಮನೆ ಆಗಿದ್ದಾರೆ. ಆದರೆ, ಇನ್ನು ಕೆಲವರು ಕನ್ನಡ ವಿಭಾಗದ ಮಕ್ಕಳಿಗೆ ಕೊಟ್ಟಿದ್ದಿರಿ. ನಮ್ಮ ಮಕ್ಕಳಿಗೆ ಯಾಕೆ ಬಟ್ಟೆ ಮತ್ತು ಪಠ್ಯ-ಪುಸ್ತಕ ಕೊಡುತ್ತಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕರೊಬ್ಬರು ತಮ್ಮ ಸಂಕಟವನ್ನು ‘ಉದಯವಾಣಿ’ಗೆ ವಿವರಿಸಿದರು.

ಅಧಿಕಾರಿಗಳು ಹೇಳ್ಳೋದೇನು?: ಇಂಗ್ಲಿಷ ಮಾಧ್ಯಮ ಮಕ್ಕಳ ಪಠ್ಯ-ಪುಸ್ತಕ ಮತ್ತು ಸಮವಸ್ತ್ರ ಇನ್ನು ಮೇಲಿಂದಲೇ ಸರಬರಾಜು ಆಗಿಲ್ಲ. ತರಬೇತಿ ಪಡೆದ ಶಿಕ್ಷಕರ ಮೂಲಕ ಮಕ್ಕಳು ಸದಾ ಚಟುವಟಿಕೆಯಲ್ಲಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಹೀಗಾಗಿ ಯಾವುದೇ ಪೋಷಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಪಠ್ಯ ಹೇಗೆ ಇರುತ್ತದೆ: ಕನ್ನಡ ಮಾಧ್ಯಮದಂತೆ ಇಂಗ್ಲಿಷ ಮಾಧ್ಯಮದಲ್ಲೂ ನಾಲ್ಕು ವಿಷಯಗಳು ಇರುತ್ತವೆ. ಇಂಗ್ಲಿಷ ಪ್ರಥಮ ಭಾಷೆ ಮತ್ತು ಕನ್ನಡ ದ್ವಿತೀಯ ಭಾಷೆಯಾಗಿರುತ್ತದೆ. ಪರಿಸರ ಅಧ್ಯಯನ ಮತ್ತು ಗಣಿತ ವಿಷಯಗಳು ಇಂಗ್ಲಿಷ್‌ ಭಾಷೆಯಲ್ಲಿ ಇರುತ್ತವೆ.

ಆಂಗ್ಲ ಮಾಧ್ಯಮದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಪೂರೈಕೆಯಾಗಿಲ್ಲ. ಜುಲೈ ತಿಂಗಳಿಂದ ಇಂಗ್ಲಿಷ್‌ ಮಾಧ್ಯಮ ತರಗತಿಗಳು ಆರಂಭಗೊಳ್ಳಲಿವೆ. ಅಲ್ಲಿವರೆಗೆ ಮಕ್ಕಳಿಗೆ ಬೇಸಿಕ್‌ ಇಂಗ್ಲಿಷ್‌ ಬಗ್ಗೆ ಶಿಕ್ಷಕರು ಬೋಧಿಸುತ್ತಾ ಸದಾ ಚಟುವಟಿಕೆಯಲ್ಲಿ ಇರುವಂತೆ ನೋಡಿಕೊಳ್ಳುತ್ತಾರೆ.
ಶಾಂತಗೌಡ, ಉಪನಿರ್ದೇಶಕರು,
ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರಗಿ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.