ಮುಂಗಾರು ಕಣ್ಣಾಮುಚ್ಚಾಲೆ: ರೈತರಲ್ಲಿ ಆತಂಕ

ಪೂರ್ವ ಮುಂಗಾರು ಬರಲಿಲ್ಲ, ಭೂಮಿಗೆ ನೀರಿಲ್ಲ •ಮೋಡಗಳು ಸೃಷ್ಟಿಯಾದರೂ ಬಾರದ ಮಳೆ

Team Udayavani, Jun 17, 2019, 11:23 AM IST

mandya-tdy-1..

ಜಿಲ್ಲೆಯಲ್ಲಿ ಮಳೆಗಾಗಿ ಕಾದಿರುವ ಭೂಪ್ರದೇಶ.

ಮಂಡ್ಯ: ವಾಯು ಚಂಡಮಾರುತದ ಪರಿಣಾಮದಿಂದ ಮುಂಗಾರು ದುರ್ಬಲವಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಪೂರ್ವ ಮುಂಗಾರು ಕೊರತೆಯಿಂದ ರೈತರು ನಿರಾಸೆಗೊಳಗಾಗಿದ್ದಾರೆ. ಇದೀಗ ಮುಂಗಾರು ಕ್ಷೀಣಸಿರುವುದು ಅವರ ಆತಂಕವನ್ನು ಹೆಚ್ಚಿಸಿದೆ.

ಕೇರಳ ಹಾಗೂ ಕೊಡಗಿನಲ್ಲಿ ನಿರೀಕ್ಷೆಯಂತೆ ಮಳೆಯಾಗದಿರುವುದರಿಂದ ಕಾವೇರಿ ಕಣಿವೆ ಪ್ರದೇಶದಲ್ಲಿರುವ ಜಲಾಶಯಗಳಿಗೆ ಒಳಹರಿವೇ ಇಲ್ಲದಂತಾಗಿದೆ. ಕೃಷ್ಣರಾಜಸಾಗರ, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ನೀರಿನ ಮಟ್ಟ ತಳ ಸೇರಿದೆ. ಒಂದೆಡೆ ಮಳೆಯೂ ಇಲ್ಲದೆ, ಜಲಾಶಯಗಳಲ್ಲಿ ನೀರೂ ಇಲ್ಲದೆ ಭೂಮಿಯನ್ನು ಹದಗೊಳಿಸಲಾಗದೆ ರೈತರು ಕಂಗಾಲಾಗಿದ್ದಾರೆ. ಬರಗಾಲದ ಕರಿನೆರಳು ಜಿಲ್ಲೆಯನ್ನು ಆವರಿಸುವ ಭೀತಿ ಎದುರಾಗಿದೆ.

ಕಳೆದ ವರ್ಷ ಮುಂಗಾರು ಪೂರ್ವ ಮಳೆ ಮಾರ್ಚ್‌ನಿಂದ ಜೂನ್‌ವರೆಗೆ ಆಶಾದಾಯಕವಾಗಿತ್ತು. ಅದರ ಬೆನ್ನಲ್ಲೇ ಮುಂಗಾರು ಮಳೆಯೂ ನಿರೀಕ್ಷೆಗಿಂತ ಉತ್ತಮವಾಗಿ ಬಂದಿದ್ದರಿಂದ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದರು.

2018ರಲ್ಲಿ ಪೂರ್ವ ಮುಂಗಾರು ಆಶಾದಾಯಕವಾಗಿತ್ತು. ಮಾರ್ಚ್‌ನಲ್ಲಿ ವಾಡಿಕೆ ಮಳೆ 8.8 ಮಿ.ಮೀ.ಗೆ 27.3 ಮಿ.ಮೀ. ಮಳೆ, ಏಪ್ರಿಲ್ನಲ್ಲಿ 49.5 ಮಿ.ಮೀ. ವಾಡಿಕೆ ಮಳೆಗೆ 40.1 ಮಿ.ಮೀ., ಮೇ ತಿಂಗಳಲ್ಲಿ 118.7 ಮಿ.ಮೀ. ವಾಡಿಕೆ ಮಳೆಗೆ 223.3 ಮಿ.ಮೀ.ಮಳೆಯಾಗಿತ್ತು.

ಜೂನ್‌ ಆರಂಭದಲ್ಲೂ ಮಳೆ ನಿರೀಕ್ಷೆಯಂತೆ ಆಗಮಿಸಿತ್ತು. ಆ ತಿಂಗಳಲ್ಲಿ 54.1 ಮಿ.ಮೀ.ಗೆ 71.8 ಮಿ.ಮೀ., ಜುಲೈನಲ್ಲಿ 52.9 ಮಿ.ಮೀ.ಗೆ 31.5 ಮಿ.ಮೀ., ಆಗಸ್ಟ್‌ನಲ್ಲಿ 62.8 ಮಿ.ಮೀ.ಗೆ 37.4 ಮಿ.ಮೀ., ಸೆಪ್ಟೆಂಬರ್‌ನಲ್ಲಿ 133.8 ಮಿ.ಮೀ.ಗೆ 167.4 ಮಿ.ಮೀ., ಅಕ್ಟೋಬರ್‌ನಲ್ಲಿ 165.1 ಮಿ.ಮೀ.ಗೆ 128.2 ಮಿ.ಮೀ. ಮಳೆಯಾಗುವುದರೊಂದಿಗೆ ಬರಗಾಲವನ್ನು ದೂರ ಮಾಡಿತ್ತು.

ಹಿಂದಿನ ವರ್ಷವೂ ಜುಲೈ ನಲ್ಲಿ ಶೇ.41, ಆಗಸ್ಟ್‌ನಲ್ಲಿ ಶೇ.40, ಸೆಪ್ಟೆಂಬರ್‌ನಲ್ಲಿ ಶೇ.25, ಅಕ್ಟೋಬರ್‌ನಲ್ಲಿ ಶೇ.22, ನವೆಂಬರ್‌ನಲ್ಲಿ ಶೇ.75 ಹಾಗೂ ಡಿಸೆಂಬರ್‌ ತಿಂಗಳಲ್ಲಿ ಶೇ.71ರಷ್ಟು ಮಳೆ ಕೊರತೆಯನ್ನು ಜಿಲ್ಲೆ ಎದುರಿಸಿತ್ತು. ಆದರೆ, ಕೃಷ್ಣರಾಜಸಾಗರ ಜಲಾಶಯ ನಿಗದಿತ ಅವಧಿಗೂ ಮುನ್ನವೇ ಭರ್ತಿಯಾಗಿದ್ದರಿಂದ ಹಾಗೂ ಪ್ರವಾಹ ಸೃಷ್ಟಿಯಾಗಿದ್ದರಿಂದ ಮಳೆಯಾಶ್ರಿತ ಪ್ರದೇಶದ ಜನರನ್ನು ಹೊರತುಪಡಿಸಿ ನೀರಾವರಿ ಆಶ್ರಿತ ಪ್ರದೇಶದ ರೈತರನ್ನು ಬರ ಬಾಧಿಸಲಿಲ್ಲ.

2019ರಲ್ಲಿ ಪೂರ್ವ ಮುಂಗಾರು ನಿರೀಕ್ಷೆಯಂತೆ ಬರಲಿಲ್ಲ. ಬಿತ್ತನೆಗೆ ಅನುಕೂಲವಾಗುವಂತೆ ರೈತರು ಭೂಮಿಯನ್ನು ಹದಗೊಳಿಸುವುದಕ್ಕೆ ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಮುಂಗಾರು ಕಣ್ಣಾಮುಚ್ಚಾಲೆಯಾಡುತ್ತಿದೆ. ದಿನವಿಡೀ ಮೋಡ-ಬಿಸಿಲಿನ ಆಟ ನಡೆಯುತ್ತಿದೆಯೇ ವಿನಃ ಮಳೆ ಬೀಳುತ್ತಲೇ ಇಲ್ಲ. ಆಗಸದಲ್ಲಿ ಮೋಡಗಳು ಸೃಷ್ಟಿಯಾಗಿದ್ದರೂ ಮಳೆಯಾಗುತ್ತಿಲ್ಲ.

ಏಕದಳ, ದ್ವಿದಳ ಧಾನ್ಯ ಬಿತ್ತನೆ: ಇತ್ತೀಚೆಗೆ ಬಿದ್ದ ಅಲ್ಪಸ್ವಲ್ಪ ಮಳೆಯಿಂದಾಗಿ ಮಳೆಯಾಶ್ರಿತ ಪ್ರದೇಶದಲ್ಲಿ ಹೆಸರು, ಅವರೆ, ಉದ್ದು ಸೇರಿದಂತೆ ದ್ವಿದಳ ಧಾನ್ಯಗಳನ್ನು ಭೂಮಿಗೆ ಚೆಲ್ಲಿದ್ದಾರೆ. ಭೂಮಿಯಲ್ಲಿರುವ ತೇವಾಂಶದಿಂದ ಮೊಳಕೆಯೊಡೆದು ನಿಂತಿವೆ. ಆದರೆ, ಈಗ ಮಳೆ ಬೀಳದಿದ್ದರೆ ಈ ಧಾನ್ಯಗಳೂ ರೈತರ ಕೈಸೇರದಂತಾಗುತ್ತದೆ. ಭೂಮಿ ಹದಗೊಳಿಸಲು, ಕಬ್ಬು ಬೆಳೆ ಉಳಿಸಿಕೊಳ್ಳಲು, ಏಕದಳ ಧಾನ್ಯಗಳು ಬೆಳವಣಿಗೆಗೆ ಮಳೆ ಅತ್ಯಂತ ಅವಶ್ಯಕವಾಗಿದೆ. ಆದರೆ, ವರುಣ ಮುನಿದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಒಣಗಿರುವ ಕೆರೆ-ಕಟ್ಟೆಗಳು: ಜಿಲ್ಲೆಯಲ್ಲಿರುವ ಕೆರೆ-ಕಟ್ಟೆಗಳು ನೀರಿಲ್ಲದೆ ಒಣಗಿಹೋಗಿವೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹಾಹಾಕಾರವೆದ್ದಿದೆ. ಜನ-ಜಾನುವಾರುಗಳು ನೀರಿಗೆ ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಮಳೆ ಬೀಳದಿದ್ದರೆ ಬದುಕೇ ಇಲ್ಲ ಎಂಬ ಪರಿಸ್ಥಿತಿ ನೆಲೆಸಿದೆ. ಇಂತಹ ಕಠಿಣ ಸನ್ನಿವೇಶದಲ್ಲೂ ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಾಟ ರೈತರನ್ನು ದಿಕ್ಕೆಡಿಸುವಂತೆ ಮಾಡಿದೆ.

ಮಳೆ ಇಲ್ಲದೆ ಕೊಳವೆ ಬಾವಿಗಳು ಬತ್ತಿವೆ. ಹೊಸ ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಅಂತರ್ಜಲ ಪಾತಾಳ ಸೇರಿಕೊಂಡಿದೆ. ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ಖರೀದಿಯೊಂದಿಗೆ ಕೃಷಿ ಚಟುವಟಿಕೆಗಳಿಗೆ ಚಾಲನೆ ಕೊಡುವುದಕ್ಕೆ ರೈತರು ಸಿದ್ಧತೆ ಮಾಡಿಕೊಂಡಿದ್ದರೂ ಮಳೆಯಿಲ್ಲದೆ ಭೂಮಿಯನ್ನು ಸಿದ್ಧಗೊಳಿಸಲಾಗುತ್ತಿಲ್ಲ, ಮಳೆ ಕೊರತೆಯಿಂದ ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿದೆ.

ರೈತರು ಮಳೆಗಾಗಿ ನಿರೀಕ್ಷೆಯಿಂದ ಆಗಸದತ್ತ ಎದುರುನೋಡುತ್ತಿದ್ದಾರೆ. ವರುಣ ದೇವನಿಗೆ ಪೂಜೆ-ಪುನಸ್ಕಾರ ನೆರವೇರಿಸಿ ಮಳೆಗಾಗಿ ಮೊರೆ ಇಟ್ಟಿದ್ದಾರೆ. ರಾಜ್ಯಸರ್ಕಾರವೂ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಪರ್ಜನ್ಯ ಜಪ ನೆರವೇರಿಸಿದೆ. ಆದರೆ, ಯಾರ ಮೊರೆಗೂ ವರುಣ ಕೃಪೆ ತೋರುತ್ತಿಲ್ಲ. ಮುಂದಿನ ದಿನಗಳಲ್ಲಿ ದುರ್ಬಲಗೊಂಡಿರುವ ಮುಂಗಾರು ಚುರುಕುಗೊಳ್ಳಬಹುದೆಂಬ ನಿರೀಕ್ಷೆ ಇದೆ. ಆದರೆ, ಮುಂಗಾರು ಚೇತರಿಕೆ ಕಾಣದಿದ್ದರೆ ಭೀಕರ ಬರಗಾಲದ ಕರಾಳತೆಗೆ ಜಿಲ್ಲೆ ಸಿಲುಕಿದಂತಾಗುತ್ತದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.