ಜಿಲ್ಲೆಯ ಶೇ. 40ರಷ್ಟು ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ!


Team Udayavani, Jun 18, 2019, 5:33 AM IST

t-14

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯ ಶೇ.40ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಆಸುಪಾಸಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಈಗಲೂ ರಾಜಾರೋಷವಾಗಿ ನಡೆಯುತ್ತಿದೆ ಎಂಬುದಾಗಿ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕೋಟಾ³ ಕಾಯಿದೆಯಡಿ ಶಿಕ್ಷಣ ಸಂಸ್ಥೆ ಬಳಿಕ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಗೊಳಿಸಿ ಒಂದೂವರೆ ದಶಕ ಕಳೆದರೂ ಈ ಸ್ಥಿತಿ ಆಘಾತಕಾರಿ.

ನಗರ ಪ್ರದೇಶಗಳ ಶಾಲೆ-ಕಾಲೇಜು ವ್ಯಾಪ್ತಿಯಲ್ಲೇ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವುದು ಗಮನಾರ್ಹ. ಗ್ರಾಮೀಣ ಭಾಗದಲ್ಲಿ ಈ ವಲಯವನ್ನು ತಂಬಾಕು ಮುಕ್ತಗೊಳಿ ಸುವುದಕ್ಕೆ ಬಹ್ವಂಶ ಸಾಧ್ಯವಾಗಿದೆ.

ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಘಟಕವು ಒಂದು ವರ್ಷದಿಂದ ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕೋಟಾ³ ಅನುಷ್ಠಾನಕ್ಕೆ ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಶಾಲಾ ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದೆ. ಬಳಿಕ ಜಿಲ್ಲೆಯ ಎಲ್ಲ ತಾಲೂಕುಗಳ 800ಕ್ಕೂ ಹೆಚ್ಚು ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಮುನ್ಸೂಚನೆ ನೀಡದೆ ತೆರಳಿ ಸಮೀಕ್ಷೆ ನಡೆಸಲಾಗಿದ್ದು, ಈ ವೇಳೆ ಬಹುತೇಕ ಶಿಕ್ಷಣ ಸಂಸ್ಥೆಗಳಲ್ಲಿ ಕೋಟಾ³ ಕಾಯಿದೆ ಅಳವಡಿಕೆಯಾದರೆ, ಹಲವು ಸಂಸ್ಥೆಗಳಲ್ಲಿ ಆಗಿಲ್ಲ ಎಂಬುದು ಬೆಳಕಿಗೆ ಬಂದಿದೆ.

ಶಿಕ್ಷಣ ಸಂಸ್ಥೆಗಳ 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಬಾರದೆಂದು ಕಾಯಿದೆ ಹೇಳುತ್ತದೆ. ಆದರೆ ಶೇ.83.61ರಷ್ಟು ಶಾಲೆಗಳು ಮತ್ತು ಶೇ. 80ರಷ್ಟು ಕಾಲೇಜುಗಳಲ್ಲಿ ಇದರ ಅನುಷ್ಠಾನವಾದರೆ, ಉಳಿದ ಶೇ.20ಕ್ಕೂ ಹೆಚ್ಚು ಶಾಲೆ, ಶೇ.20ಕ್ಕೂ ಹೆಚ್ಚು ಕಾಲೇಜುಗಳ ವ್ಯಾಪ್ತಿಯಲ್ಲಿ ಆಗಿಲ್ಲ ಎಂದು ಸಮೀಕ್ಷೆ ವೇಳೆ ತಿಳಿದುಬಂದಿದೆ. ಸರ್ವೆಯ ಒಟ್ಟು ಫಲಿತಾಂಶ ಶೇಕಡಾವಾರು ಪ್ರಮಾಣದಲ್ಲಿರುವುದರಿಂದ ಒಟ್ಟು ಶಿಕ್ಷಣ ಸಂಸ್ಥೆಗಳ ಸಂಖ್ಯೆ ಲಭ್ಯವಾಗಿಲ್ಲ.

ಸೆಕ್ಷನ್‌ 6ಬಿ ಅನುಷ್ಠಾನ
ಬಿ-ಕೋಟಾ³ ಕಾಯಿದೆಯಡಿ ಬರುವ ಸೆಕ್ಷನ್‌ 6ಬಿ ಪ್ರಕಾರ, “ಈ ವಿದ್ಯಾಸಂಸ್ಥೆಯಲ್ಲಿ ಧೂಮಪಾನ ಮಾಡಬಾರದು’ ಎಂಬುದಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೂಚನಾಫಲಕ ಅಳವಡಿಸಬೇಕು. ಆದರೆ ಶೇ.80.33ರಷ್ಟು ಶಾಲೆ ಮತ್ತು ಶೇ. 47.5ರಷ್ಟು ಶಾಲೆಗಳಲ್ಲಿ ಮಾತ್ರ ಇದು ಅಳವಡಿಕೆಯಾಗಿದೆ. ಕಾಲೇಜುಗಳಲ್ಲಿ ಅರ್ಧದಷ್ಟೂ ಕಾರ್ಯ ಸಾಧನೆಯಾಗದಿರುವುದು ವಾಸ್ತವ. ಸೆಕ್ಷನ್‌-4 ಪ್ರಕಾರ, “ಈ ಪ್ರದೇಶದಲ್ಲಿ ಧೂಮಪಾನ ಮಾಡಿದರೆ ದಂಡ ವಿಧಿಸಲಾಗುತ್ತದೆ’ ಎಂಬ ಜಾಗೃತಿ ಫಲಕ ಅಳವಡಿಸಬೇಕು. ಆದರೆ ಶೇ.73.77ರಷ್ಟು ಶಾಲೆಗಳ ಮತ್ತು ಶೇ. 60ರಷ್ಟು ಕಾಲೇಜುಗಳ ವ್ಯಾಪ್ತಿಯಲ್ಲಷ್ಟೇ ಇದು ಇದೆ.

ನೋ ಸ್ಮೋಕಿಂಗ್‌ ವಲಯ
ಶೇ. 98.36ರಷ್ಟು ಶಾಲೆ ಮತ್ತು ಶೇ. 97.5ರಷ್ಟು ಕಾಲೇಜುಗಳಲ್ಲಿ ನೋ ಸ್ಮೋಕಿಂಗ್‌ ವಲಯವನ್ನು ಮಾಡಲಾಗಿದ್ದು, ಮಟ್ಟಿಗೆ ಸ್ವಲ್ಪ ಭರವಸೆ ಮೂಡಿಸಿದೆ. ಘಟಕವು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಕಾರ್ನರ್‌ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿದೆ. ವಿನೂತನವಾಗಿ ಡಿಸೈನ್‌ ಮಾಡಲಾದ ತಂಬಾಕು ಸೇವನೆ ಪರಿಣಾಮಗಳ ಕುರಿತು ಕಿರುಚಿತ್ರಗಳನ್ನು ತೋರಿಸುವುದು, ಜಾಗೃತಿ ಮೂಡಿಸುವುದು ಈ ಕಾರ್ನರ್‌ನ ಉದ್ದೇಶ.

ನಗರದಲ್ಲೇ ಹೆಚ್ಚು!
ಜಿಲ್ಲಾ ತಂಬಾಕು ನಿಯಂತ್ರಣ ಘಟಕವು 800ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಸರ್ವೆ ನಡೆಸಿದ್ದು, ಈ ಪೈಕಿ ತಂಬಾಕು ಉತ್ಪನ್ನ ಮಾರಾಟ ಸೇರಿದಂತೆ ಎಲ್ಲವೂ ಮಂಗಳೂರು ನಗರ ಭಾಗದ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲೇ ಕಂಡುಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದ್ದು, ಅಲ್ಲೆಲ್ಲ ತಂಬಾಕು ಮುಕ್ತ ಪರಿಸರವಿದೆ ಎನ್ನುತ್ತಾರೆ ಘಟಕದ ಅಧಿಕಾರಿಗಳು.

 ನೋಟಿಸ್‌ ನೀಡಿದ್ದೇವೆ
2003ರಲ್ಲೇ ಕೋಟ್ಪಾ ಕಾಯಿದೆ ಜಾರಿಗೆ ಬಂದರೂ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನ ಶೂನ್ಯವಿತ್ತು. ಘಟಕದ ನಿರಂತರ ಶ್ರಮದ ಬಳಿಕ ಬಹುತೇಕ ಸಾಧನೆಯಾಗಿದೆ. ಸರ್ವೆ ಮಾಡಿದ ವೇಳೆ ಬಹುತೇಕ ಶಾಲೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿಲ್ಲ. ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ನೋಟಿಸ್‌ ನೀಡಿದ್ದೇವೆ. ಉತ್ತರಿಸದಿದ್ದಲ್ಲಿ ಅವರ ಮೇಲೆ ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ.
 - ಡಾ| ಪ್ರೀತಾ, ಜಿಲ್ಲಾ ಸಲಹೆಗಾರರು,
ತಂಬಾಕು ನಿಯಂತ್ರಣ ಘಟಕ, ದ.ಕ. ಜಿಲ್ಲೆ

- ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.