ಕಾರ್ಕಳ: ಖಾಸಗಿ ವೈದ್ಯರ ಸೇವೆ ಸ್ಥಗಿತ
Team Udayavani, Jun 18, 2019, 5:35 AM IST
ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗಿನ ವೇಳೆ ಕಂಡು ಬಂದ ದೃಶ್ಯ
ಕಾರ್ಕಳ: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲೂ ಖಾಸಗಿ ವೈದ್ಯರು ಮುಷ್ಕರ ನಡೆಸಿದರು.
ಸರಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು, ರೋಗಿಗಳ ಸಂಖ್ಯೆ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿತ್ತು. ಕಾರ್ಕಳದಲ್ಲಿ 5 ನರ್ಸಿಂಗ್ ಹೋಂ, 35 ಕ್ಲಿನಿಕ್, ಸುಮಾರು 77 ಮಂದಿ ಐಐಂಎ ಸದಸ್ಯರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಹೊರರೋಗಿಗಳ ಘಟಕ (ಒಪಿಡಿ) ಸೇವೆ ಬಹುತೇಕ ಸ್ಥಗಿತಗೊಂಡಿತ್ತು.
ರೋಗಿಗಳಿಗೆ ತೊಂದರೆಯಾಗಿಲ್ಲ
ಐಎಂಎ ಮುಸ್ಕರ ಘೋಷಿಸಿದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯರು ಜೂ| 17ರಂದು ರಜೆ ಮಾಡದಂತೆ ಸರಕಾರದಿಂದ ಸೂಚಿಸಲಾಗಿತ್ತು. ಹೀಗಾಗಿ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಾಯ ಕಂಡುಬಂದಿಲ್ಲ. ರೋಗಿಗಳಿಗೆ ತೊಂದರೆಯಾಗಿಲ್ಲ.
-ಡಾ| ಕೃಷ್ಣಾನಂದ,
ತಾಲೂಕು ಆರೋಗ್ಯಾಧಿಕಾರಿ, ಕಾರ್ಕಳ