“ಸಸಿಹಿತ್ಲು ಬೀಚ್‌ ಅಭಿವೃದ್ಧಿಗೆ ನೀಲನಕ್ಷೆ ‘

Team Udayavani, Jun 19, 2019, 5:00 AM IST

v-13

ಸಸಿಹಿತ್ಲು: ಕರಾವಳಿಯ ಪ್ರವಾಸಿ ಕೇಂದ್ರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಳೆಯಂ ಗಡಿ ಗ್ರಾ. ಪಂ.ನ ಸಸಿಹಿತ್ಲು ಮುಂಡ ಬೀಚ್‌ ಅಭಿವೃದ್ಧಿಗೆ 7 ಕೋ. ರೂ. ವೆಚ್ಚದಲ್ಲಿ ನೀಲನಕ್ಷೆ ಯನ್ನು ತಯಾರಿಸಿ ಅದರ ಬಗ್ಗೆ ಸಮಗ್ರ ಅಧ್ಯಯನ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಸಸಿಹಿತ್ಲು ಮುಂಡ ಬೀಚ್‌ಗೆ ಜನಪ್ರನಿಧಿಗಳು ಮತ್ತು ಅಧಿಕಾರಿಗಳ ಜತೆ ಭೇಟಿ ನೀಡಿ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ಕರಾವಳಿಯ ಮಲ್ಪೆಯಿಂದ ತಲಪಾಡಿಯವರೆಗೆ ಇರುವ ಬೀಚ್‌ಗಳನ್ನು ವಿವಿಧ ಅನುದಾನ ಹಾಗೂ ಕೇಂದ್ರ ಸರಕಾರದ ಸಹಕಾರದಲ್ಲಿ ರಾಜ್ಯ ಸರಕಾರವು ಯೋಜನೆಗಳನ್ನು ರೂಪಿಸಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಕರಾವಳಿ ಭಾಗದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮಹತ್ವ ಸಿಕ್ಕಂತಾಗುತ್ತದೆ ಎಂದರು.

ಬೀಚ್‌ ಅಭಿವೃದ್ಧಿಯ ಯೋಜ ನೆಗಳು ಮುಂದಿನ ಐವತ್ತು ವರ್ಷಕ್ಕಾಗುವಂತ ಹದ್ದಾಗಿರಬೇಕು, ಇದಕ್ಕೆ ಪೂರಕವಾಗಿ ಶಾಶ್ವತ ತಡೆಗೋಡೆ, ವಾಕಿಂಗ್‌ ಟ್ರಾಕ್‌ಗಳು, ವಿಹಂಗಮ ಪರಿಸರ, ಅಧುನಿಕ ಬೋಟಿಂಗ್‌, ಹಸುರು ಹೊದಿಕೆ, ಪ್ರವಾಸಿಗರಿಗೆ ಬೇಕಾದ ಮಾರಾಟ ಕೇಂದ್ರಗಳು, ಸಂಪರ್ಕ ರಸ್ತೆಗಳು ಅಭಿವೃದ್ಧಿ ಯೋಜನೆಯಲ್ಲಿ ಅಳವಡಿಸಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಹಳೆಯಂಗಡಿ ಗ್ರಾ.ಪಂ.ನ ಸಸಿಹಿತ್ಲು ಬೀಚ್‌ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಚ್‌. ವಸಂತ ಬೆರ್ನಾರ್ಡ್‌ ಅವರು ಅಳಿವೆಯಲ್ಲಿನ ನದಿ ಕೊರೆತ ಹಾಗೂ ಪಂಚಾಯತ್‌ ನಿರ್ಮಿಸಿದ ಅಂಗಡಿ ಕೊಠಡಿಗಳು ನದಿ ಪಾಲಾಗಿರುವ ಬಗ್ಗೆ, ಸಮುದ್ರಕ್ಕೆ ಹಾಕಲಾದ ಶಾಶ್ವತ ತಡೆಗೋಡೆಯಿಂದ ರಕ್ಷಣೆ ಹಾಗೂ ಅಭಿವೃದ್ಧಿ ಸಮಿತಿಯ ಮೂಲಕ ಕೈಗೊಂಡ ಕಾಮಗಾರಿಗಳನ್ನು ಯೋಜನೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಮುಂದಿನ ದಿನದಲ್ಲಿ ಅಗತ್ಯವಿರುವ ಯೋಜನೆಗಳನ್ನು ಸಹ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಮುಖ್ಯಮಂತ್ರಿಗಳ ಕಾರ್ಯದರ್ಶಿ ಐವನ್‌ ಡಿ’ಸೋಜಾ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಎಡಿಸಿ ಆರ್‌.ವೆಂಕಟಾಚಲಪತಿ, ಮೂಲ್ಕಿಯ ವಿಶೇಷ ತಹಶೀಲ್ದಾರ್‌ ಮಾಣಿಕ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಶಾ., ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ, ಚಂದ್ರಕುಮಾರ್‌, ಅನಿಲ್‌, ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು, ಮೂಲ್ಕಿ ನ.ಪಂ. ಸದಸ್ಯೆ ವಿಮಲಾ ಪೂಜಾರಿ, ರಾಜ್ಯ ಅಲ್ಪಸಂಖ್ಯಾಕ ಆಯೋಗದ ಎಂ.ಎ. ಗಫೂರ್‌, ಧನಂಜಯ ಸಸಿಹಿತ್ಲು, ಪಣಂಬೂರು ಬೀಚ್‌ ಅಭಿವೃದ್ಧಿ ಸಮಿತಿಯ ಯತೀಶ್‌ ಬೈಕಂಪಾಡಿ ಉಪಸ್ಥಿತರಿದ್ದರು.

ಆಯ್ಕೆ ವಿಸ್ತರಣೆ
ಅಕ್ರಮ ಸಕ್ರಮ ಅರ್ಜಿಗಳಾದ 94 ಸಿಸಿ ಹಕ್ಕುಪತ್ರದ ಫಲಾನುಭವಿಗಳ ಆಯ್ಕೆಯು ವಿಸ್ತರಣೆಯಾಗಲಿದೆ. ಜಿಲ್ಲಾ ಮಟ್ಟದ ಅಧಿಕಾರಿ ವರ್ಗ ಹಾಗೂ ಕಂದಾಯ ಇಲಾಖೆಯ ನಡುವಿನ ಸಂವಹನ ಹೆಚ್ಚಿಸಿಕೊಂಡು ಇದರ ವಿಸ್ತರಣೆಯನ್ನು ಮಾಡಲು ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಸಮಗ್ರ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳು ಇದರಲ್ಲಿ ಆಯ್ಕೆಯಾಗುತ್ತಾರೆ ಎಂದರು.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.