ಬಂಡೀಪುರದಲ್ಲಿ ಹುಲಿ ಸಾವು
Team Udayavani, Jun 20, 2019, 3:00 AM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾದಾಟದಲ್ಲಿ ಗಾಯಗೊಂಡಿದ್ದ ಏಳು ವರ್ಷ ಪ್ರಾಯದ ಗಂಡು ಹುಲಿಯೊಂದು ಸಾವಿಗೀಡಾಗಿದೆ.
ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೊಳಪಡುವ ಮೂಲೆಹೊಳೆ ಅರಣ್ಯ ವಲಯದ ಚಿಕ್ಕನಹಳ್ಳ ಪ್ರದೇಶದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಹುಲಿಯ ಮೈಮೇಲೆ ಗಾಯಗಳಾಗಿರುವ ಗುರುತುಗಳಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದರು.
ಸುದ್ದಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹದ ಪರಿಶೀಲನೆ ನಡೆಸಿದರು. ಪಶು ವೈದ್ಯ ಡಾ.ನಾಗರಾಜು ಅವರಿಂದ ಮರಣೋತ್ತರ ಪರೀಕ್ಷೆ ಮಾಡಿಸಿದ ನಂತರ ಸ್ಥಳದಲ್ಲೇ ಮೃತದೇಹವನ್ನು ಸುಟ್ಟು ಹಾಕಲಾಯಿತು. ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ಬಲವಾಗಿ ಗಾಯಗೊಂಡು, ಹುಲಿ ಸಾವಿಗೀಡಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ