ವಿವಿಧ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕಿ

ಮಾಶಾಸನ ವಿಳಂಬ, ಒತ್ತುವರಿ, ಮೂಲಸೌಲಭ್ಯಗಳ ಮಾಹಿತಿ ಸಂಗ್ರಹ

Team Udayavani, Jun 20, 2019, 2:13 PM IST

kolar-tdy-2..

ಬೇತಮಂಗಲ ಹೋಬಳಿ ವ್ಯಾಪ್ತಿಯ ಎನ್‌.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಸಕಿ ಎಂ.ರೂಪಕಲಾ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬೇತಮಂಗಲ: ಹೋಬಳಿಯಲ್ಲಿ ಶಾಸಕಿ ಎಂ.ರೂಪಕಲಾ ಗ್ರಾಮ ವೀಕ್ಷಣೆ ಹಾಗೂ ಸಾರ್ವಜನಿಕ ಸಂಪರ್ಕ ಅಭಿಯಾನ ನಡೆಸಿದರು. ಗ್ರಾಪಂ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಎನ್‌.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಬುಧವಾರ ಬೆಳಗ್ಗೆಯಿಂದ ಭೇಟಿ ನೀಡಿದ ಶಾಸಕಿಗೆ, ಹಲವು ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಸಮಸ್ಯೆ ಬಗೆಹರಿಸಿ: ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ 2-3 ತಿಂಗಳಾದರೂ ಬರುತ್ತಿಲ್ಲ ಎಂದು ವೃದ್ಧರ ಗಮನಕ್ಕೆ ತಂದರು. ಸ್ಥಳದಲ್ಲೇ ಇದ್ದ ಇಲಾಖೆ ಅಧಿಕಾರಿಗಳು ಉತ್ತರಿಸಿ, ಸರ್ಕಾರವು ನೇರವಾಗಿ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದ್ದು, ಕೆಲವು ತಾಂತ್ರಿಕ ಸಮಸ್ಯೆಗಳಿಂದ ತೊಂದರೆಯಾಗಿದೆ. ಈ ಕೂಡಲೇ ಸಮಸ್ಯೆ ಬಗೆಹರಿಸುವ ಬಗ್ಗೆ ಮಾಹಿತಿ ನೀಡಿದರು.

ಪರಿಹಾರ ಪಡೆದುಕೊಳ್ಳಿ: ಹಲವು ಗ್ರಾಮಗಳಲ್ಲಿ ಪಡಿತರ ಸಮಸ್ಯೆಗಳ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಗ್ರಾಪಂ ಮಟ್ಟದಲ್ಲಿ ಗುರುವಾರ ದಿನ ಪೂರ್ತಿ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ. ಎಲ್ಲರೂ ಪಡಿತರ ಸಮಸ್ಯೆ ಸ್ಥಳದಲ್ಲೇ ಪರಿಹಾರ ಮಾಡಿಕೊಳ್ಳುವಂತೆ ಶಾಸಕಿ ತಿಳಿಸಿದರು.

ಸ್ವಚ್ಛತೆ ಕಾಪಾಡದ್ದಕ್ಕೆ ಕಿಡಿ: ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ ಮಾಡದೆ ಗೊಬ್ಬು ನಾರುತ್ತಿರುವುದನ್ನು ಕಂಡು ಗ್ರಾಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕಿ, ಈ ಕೂಡಲೇ ಕಸ, ಕೊಳಚೆ ತೆರವು ಮಾಡುವಂತೆ ಸೂಚಿಸಿ, ಇನ್ನು ಮುಂದೆ ಈ ರೀತಿ ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಟ್ಯಾಂಕರ್‌ ಮೂಲಕ ಪೂರೈಸುವಂತೆ ಪಿಡಿಒಗೆ ಸೂಚನೆ ನೀಡಿದರು. ಸರ್ಕಾರಿ ಜಾಗ, ಸ್ಮಶಾನ, ಕೆರೆ ಒತ್ತುವರಿ, ವಸತಿ ಯೋಜನೆ, ವಿದ್ಯುತ್‌, ಶಾಲೆ, ಅಂಗನವಾಡಿ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು.

ಎನ್‌.ಜಿ ಹುಲ್ಕೂರು, ಲಕ್ಷ್ಮೀಸಾಗರ, ಕೊತ್ತೂರು, ಶ್ರೀನಿವಾಸಪುರ, ವೆಂಕಟಾಪುರ, ಸುನ್ನಕುಪ್ಪ, ಜೀಡಮಾಕನಹಳ್ಳಿ, ಪಂತನಹಳ್ಳಿ, ಬಲಿಜಪಲ್ಲಿ, ದಾದೇನಹಳ್ಳಿ ಗ್ರಾಮಗಳಲ್ಲಿ ಶಾಸಕಿ ಎಂ.ರೂಪಕಲಾ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಪಿಡಿಒ ಶ್ರೀರಾಮ್‌ರೆಡ್ಡಿ, ಕಾರ್ಯದರ್ಶಿ ರಾಘವೇಂದ್ರ, ತಹಶೀಲ್ದಾರ್‌ ಕೆ.ರಮೇಶ, ಕಂದಾಯ ಅಧಿಕಾರಿ ರಘುರಾಮ್‌ ಸಿಂಗ್‌, ಗ್ರಾಮ ಲೆಕ್ಕಿಗ ಸತೀಶ್‌, ಗ್ರಾಪಂ ಸದಸ್ಯ ದೊರಬಾಬು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಧಾಕೃಷ್ಣ ರೆಡ್ಡಿ, ವಕೀಲ ಪದ್ಮನಾಭರೆಡ್ಡಿ, ಯುವ ಮುಖಂಡ ನರೇಶ್‌, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.