ಈ ಪ್ರೀತಿ ಬೇರೆ ರೀತಿ

ನೋವು ನಲಿವು, ಸುಖ ದುಃಖ

Team Udayavani, Jun 21, 2019, 5:00 AM IST

32

ಪ್ರೀತಿ… ಇದು ಎಲ್ಲರಿಗೂ ಅನ್ವಯಿಸುವ ಪದ. ಪ್ರೀತಿ ಎಂಬುದು ಒಂದಕ್ಕೆ ಸೀಮಿತವಾದುದಲ್ಲ. ಅದು ಹುಡುಗ, ಹುಡುಗಿಯ ಪ್ರೀತಿ, ಅಣ್ಣ, ತಮ್ಮನ, ಅಕ್ಕ, ತಂಗಿಯ, ಅಪ್ಪ, ಅಮ್ಮನ ಪ್ರೀತಿ ಹೀಗೆ ಎಲ್ಲಾ ಕಡೆಯೂ ಈ ಪ್ರೀತಿ ಇದ್ದೇ ಇರುತ್ತೆ. ಈಗ ಇಲ್ಲೇಕೆ ಪ್ರೀತಿ ಬಗ್ಗೆ ಇಷ್ಟೊಂದು ಪೀಠಿಕೆ ಎಂಬ ಪ್ರಶ್ನೆಗೆ ಕಾರಣ, “ಪ್ರೀತಿ ಇರಬಾರದೇ’ ಚಿತ್ರ. ಹೌದು, ಹೊಸಬರೇ ಸೇರಿ ಮಾಡಿದ ಚಿತ್ರವಿದು. ಈ ಚಿತ್ರಕ್ಕೆ ನವೀನ್‌ ನಯಾನಿ ನಿರ್ದೇಶಕರು. ಡಾ.ಲಿಂಗೇಶ್ವರ್‌ ನಿರ್ಮಾಣ ಮಾಡಿದ್ದಾರೆ. ಚಿತ್ರ ಪೂರ್ಣಗೊಂಡಿದ್ದು, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ವಿಶೇವೆಂದರೆ, ಇದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲೂ ತಯಾರಾಗಿದೆ. ಇತ್ತೀಚೆಗೆ ಚಿತ್ರದ ಬಗ್ಗೆ ಹೇಳಿಕೊಳ್ಳಲೆಂದೇ ಚಿತ್ರತಂಡ ಪತ್ರಕರ್ತರ ಮಂದೆ ಬಂದಿತ್ತು.

ನಿರ್ದೇಶಕ ನವೀನ್‌ ನಯಾನಿ ಅವರಿಗೆ ಈ ಚಿತ್ರ ಎಲ್ಲರಿಗೂ ಹೆಸರು ತಂದುಕೊಡುತ್ತದೆ ಎಂಬ ನಂಬಿಕೆ ಇದೆಯಂತೆ. ಇದು ಈಗಿನ ಟ್ರೆಂಡ್‌ ಕಥೆ. ಪ್ರೀತಿ ಇರಬಾರದೇ ಎಂಬ ಶೀರ್ಷಿಕೆಯಲ್ಲೇ ಎಲ್ಲಾ ಅರ್ಥವಿದೆ. ನವಿರಾದ ಲವ್‌ಸ್ಟೋರಿಯಲ್ಲಿ ಸಾಕಷ್ಟು ಏರಿಳಿತಗಳಿವೆ. ಅಷ್ಟೇ ಅಲ್ಲ, ನೋವು-ನಲಿವು ಸೇರಿದಂತೆ ಎಲ್ಲಾ ಅಂಶಗಳು ಕಥೆಗೆ ಪೂರಕವಾಗಿವೆ. ಟೀನೇಜ್‌ ಹುಡುಗ, ಹುಡುಗಿಯ ಪ್ರೀತಿ ಕಥೆ ಚಿತ್ರದ ಜೀವಾಳ. ಕೆ.ಕಲ್ಯಾಣ್‌ ಇಲ್ಲಿ ಏಳು ಹಾಡುಗಳನ್ನು ಬರೆದಿದ್ದಾರೆ. ಸಬೂ ವರ್ಗೀಸ್‌ ಒಳ್ಳೆಯ ಸಂಗೀತ ಕೊಟ್ಟಿದ್ದಾರೆ ಎಂದರು ನವೀನ್‌ ನಯಾನಿ.

ನಿರ್ಮಾಪಕ ಡಾ.ಲಿಂಗೇಶ್ವರ್‌ ಅವರಿಗೆ ಇದು ಮೊದಲ ಚಿತ್ರ. ಈ ಸಿನಿಮಾದಲ್ಲೊಂದು ಸಂದೇಶವಿದೆ. ತಂದೆ- ಮಗಳ ಕಥೆ ಹೈಲೈಟ್‌ ಆಗಿದೆ. ಸಮಾಜದಲ್ಲಿ ನಡೆಯುವ ಘಟನೆಗಳು ಚಿತ್ರದಲ್ಲಿವೆ. ಒಬ್ಬ ತಂದೆ, ಮಗಳ ಪ್ರೀತಿ ವಾತ್ಸಲ್ಯ ಹೇಗೆಲ್ಲಾ ಇರಬೇಕೆಂಬುದನ್ನು ಇಲ್ಲಿ ಹೇಳಲಾಗಿದೆ. ಹೊಸಬರ ಪ್ರಯತ್ನಕ್ಕೆ ಬೆಂಬಲ ಇರಲಿ ಎಂದರು ಅವರು.

ನಾಯಕ ತರುಣ್‌ ತೇಜ್‌ಗೆ ಅವಕಾಶ ಸಿಕ್ಕ ಖುಷಿಯಂತೆ. ಇಲ್ಲಿ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿರುವುದು ನನ್ನ ಅದೃಷ್ಟ. ನಿಮ್ಮೆಲ್ಲರ ಸಹಕಾರ ನಮಗೆ ಬೇಕು ಎಂದರು ತರುಣ್‌ ತೇಜ್‌. ನಾಯಕಿ ಲಾವಣ್ಯ ಅವರು ಅವಕಾಶ ಕೊಟ್ಟ ಎಲ್ಲರಿಗೂ ಥ್ಯಾಂಕ್ಸ್‌ ಎಂದಷ್ಟೇ ಹೇಳಿದರು. ಅಂದು ಹಾಡುಗಳ ಬಿಡುಗಡೆ ಕಾರ್ಯಕ್ರಮ ಇದ್ದುದರಿಂದ ಗೀತಸಾಹಿತಿ ನಾಗೇಂದ್ರಪ್ರಸಾದ್‌ ಅವರು, ಹೊಸಬರ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಇರಲಿ ಎಂದರು. ಅಂದು ಮಂಡಳಿಯ ಭಾ.ಮಹರೀಶ್‌, ಅವಿನಾಶ್‌, ಸಾಬು ವರ್ಗೀಸ್‌ ಇತರರು ಇದ್ದರು.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.