ರಾಜಯೋಗ

Team Udayavani, Jun 24, 2019, 5:05 AM IST

New-Doc-2018-11-15-08.23.25_8

ಕೃಷಿಯಿಂದ ಏನು ಸಾಧ್ಯ? ಜೀವನ ನಡೆಸೋಕೆ ಆಗುತ್ತಾ ಅಂತ ಮೂಗು ಮುರಿಯೋರಿಗೆ, ರಾಜ್‌ಕುಮಾರರ ಬದುಕೇ ಸಾಕ್ಷಿ. ಬಹುಬೆಳೆ ಪದ್ಧತಿಯಿಂದ ವಾರ್ಷಿಕ ಇವರಿಗೆ 10 ಲಕ್ಷ ಆದಾಯ ಬರುತ್ತಿದೆ. ಅದು ಹೇಗೆ ಅನ್ನೋದರ ಮಾಹಿತಿ ಇಲ್ಲಿದೆ.

ಬೀದರ ತಾಲೂಕಿನ ನಾಗೋರಾ ಗ್ರಾಮದ ರಾಜಕುಮಾರ ರಾಯಗೊಂಡ ಅವರದು ಕೃಷಿ ಕುಟುಂಬ. ತಂದೆ ಅಡಿವೆಪ್ಪ 15 ವರ್ಷದ ಹಿಂದೆ ತೀರಿಕೊಂಡ ಬಳಿಕ, ಮೊದಲನೇ ವರ್ಷದ ಪಿ.ಯು.ಸಿಯಲ್ಲೇ ಓದನ್ನು ಮೊಟಕುಗೊಳಿಸಿದ ಈತ ತಮ್ಮ ಕೆಂಪು-ಕಪ್ಪು ಮಿಶ್ರಿತ ಜಮೀನಿನಲ್ಲಿಯೇ ಬಹುಬೆಳೆ ಪದ್ಧತಿಯಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಕೈಗೊಂಡರು.

ಒಟ್ಟು 12 ಎಕರೆ ಜಮೀನಿದೆ. ಏಳು ಎಕರೆಗೆ ಹೊಸದಾಗಿ ಮೂರು ಕೊಳವೆಬಾವಿ ತೋಡಿಸಿ ಹನಿ ನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಎಕರೆಯಲ್ಲಿ ಪ್ರತಿಭಾ ತಳಿಯ ನಾಟಿ ಅರಿಷಿಣ ಗಡ್ಡೆ ಆಳೆತ್ತರಕ್ಕೆ ಸಮೃದ್ಧವಾಗಿ ಬೆಳೆದು ನಿಂತಿದೆ. ಇನ್ನುಳಿದ 5 ಎಕರೆಯಲ್ಲಿ ಕಳೆದ ಆರು ವರ್ಷಗಳಿಂದ ರೆಡ್‌ಲೇಡಿ ಪಪ್ಪಾಯ, ಜಿ-9 ಬಾಳೆ, ಕೇರಳ ಶುಂಠಿ, ಹೈಬ್ರಿಡ್‌ ಟೊಮೆಟೊ ಮತ್ತು ಗುಂಟೂರು ಮೆಣಸಿನಕಾಯಿಯನ್ನು ಬೆಳೆಯುತ್ತಿದ್ದಾರೆ.

ಹನಿ ನೀರಾವರಿ ಪದ್ಧತಿಯಿಂದ ಎಲ್ಲ ಬೆಳೆಗಳೂ ಉಳಿದಿವೆ. ಸಾವಯವ ಕೃಷಿ ಪದ್ಧತಿಗೆ ಆದ್ಯತೆ ನೀಡಿರುವುದರಿಂದ, ಹತ್ತು ಎಮ್ಮೆ, ಕೋಳಿ, ಪಾರಿವಾಳ, 2 ಆಡು ಮತ್ತು ಕುರಿ ಸಾಕಣೆ ಮಾಡಿ, ತೋಟಕ್ಕೆ ಬೇಕಾಗುವಷ್ಟು ತಿಪ್ಪೆಗೊಬ್ಬರ ಉತ್ಪಾದಿಸಿಕೊಳ್ಳುತ್ತಿದ್ದಾರೆ. ಬೆಳೆಗಳ ಕೀಟ ರೋಗ‌ ಬಾಧೆಯ ಹತೋಟಿಗಾಗಿ ಜೀವಾಮೃತ ಮತ್ತು ಬೆಳ್ಳುಳ್ಳಿ, ಮೆಣಸಿನಕಾಯಿ ಕಷಾಯವನ್ನು ಬಳಸುತ್ತಿದ್ದಾರೆ.

ಇವರಲ್ಲಿ ಎರೆಹುಳುವಿನ 4 ತೊಟ್ಟಿಗಳಿವೆ. ಇದರಿಂದ ವರ್ಷಕ್ಕೆ 20 ಟನ್‌ ಎರೆಹುಳು ಗೊಬ್ಬರ ದೊರೆಯುತ್ತಿದೆ. ಒಂದು ಎಕರೆಯಲ್ಲಿ ಮಣ್ಣಿಲ್ಲದೆ ಹಣ್ಣು, ತರಕಾರಿಗಳನ್ನು ಪೋಷಕಾಂಶವುಳ್ಳ ನೀರಿನಲ್ಲಿಯೇ ಬೆಳೆಸಬಹುದಾದ ಹೈಡ್ರೋಪೋನಿಕ್ಸ್‌ ಪದ್ಧತಿಯಲ್ಲಿ ಮೇವು ಬೆಳೆಯುತ್ತಿದ್ದಾರೆ. ಕಳೆ ತೆಗೆಯುವ ಯಂತ್ರ, ಸೌರವಿದ್ಯುತ್‌ ಚಾಲಿತ ಪಂಪ್‌ಸೆಟ್‌, ಕೀಟ ನಿಯಂತ್ರಣಕ್ಕೆ ಸೋಲಾರ್‌ ಲೈಟ್‌ ಟ್ರ್ಯಾಪ್‌, ಹಂದಿಗಳನ್ನು ಓಡಿಸಲು ಗಾಳಿಯಂತ್ರ ಮುಂತಾದ ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ಕೂಲಿ ಆಳುಗಳ ಕೊರತೆ ಕಾಡಿಲ್ಲ. ರಾಜಕುಮಾರರ ವಾರ್ಷಿಕ ಆದಾಯ 10 ಲಕ್ಷ ದಾಟಿದೆ. ಕೃಷಿಯಿಂದ ಲಾಭ ಇಲ್ಲ ಅನ್ನುವವರು ಇವರನ್ನು ನೋಡಿ ಕಲಿಯಬೇಕು. ಕೃಷಿಯ ಆದಾಯದಿಂದಲೇ ನನ್ನ ಮಕ್ಕಳಿಗೆ ಅತ್ಯುತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದೇನೆ. ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ ಎಂದು ಹೆಮ್ಮೆಯಿಂದ ಹೇಳುವ ರಾಜ್‌ಕುಮಾರರಿಗೆ, ಬಾಗಲಕೋಟೆಯ ತೋಟಗಾರಿಕೆ ವಿವಿಯ ಶ್ರೇಷ್ಠ ತೋಟಗಾರಿಕೆ ರೈತ ಪ್ರಶಸ್ತಿ ದೊರೆತಿದೆ.

-ಚಂದ್ರಕಾಂತ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.