ಜೈ ಜಗದೀಶ್‌ ದಂಪತಿ ಪುತ್ರಿಯರ “ಯಾನ’ ರೆಡಿ

ಜು.12 ರಿಂದ ಕಲರ್‌ಫ‌ುಲ್‌ ಜರ್ನಿಯತ್ತ ಬೆಡಗಿಯರು

Team Udayavani, Jun 24, 2019, 3:00 AM IST

yaana

ಹಿರಿಯ ನಟ ಜೈಜಗದೀಶ್‌ ಮತ್ತು ವಿಜಯಲಕ್ಷ್ಮೀ ಸಿಂಗ್‌ ಅವರ ಪುತ್ರಿಯರಾದ ವೈಭವಿ, ವೈನಿಧಿ, ವೈಸಿರಿ ಅವರುಗಳು ನಾಯಕಿಯರಾಗಿ ಎಂಟ್ರಿಕೊಟ್ಟಿರುವುದು ಗೊತ್ತೇ ಇದೆ. ಈ ಮೂವರು ಸಹೋದರಿಯರು “ಯಾನ’ ಚಿತ್ರದ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿರುವುದು ಸಹ ಎಲ್ಲರಿಗೂ ಗೊತ್ತು. ಈಗ ಹೊಸ ಸುದ್ದಿಯೆಂದರೆ, “ಯಾನ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಹೌದು, ಈಗಾಗಲೇ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಯಾನ’, ಜುಲೈ 12 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಯ ಹಾದಿಯನ್ನು ಸುಗಮಗೊಳಿಸಿದೆ.

“ಆಕ್ಮೆ ಮೂವೀಸ್‌ ಇಂಟರ್‌ ನ್ಯಾಷನಲ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಹರೀಶ್‌ ಶೇರಿಗಾರ್‌, ಶರ್ಮಿಳಾ ಶೇರಿಗಾರ್‌ ನಿರ್ಮಿಸಿದ್ದಾರೆ. ಸಿನಿಮಾ ಹಿನ್ನೆಲೆಯಿರುವ ಕುಟುಂಬದ ಮೂವರು ಸಹೋದರಿಯರು ನಟಿಸಿರುವುದು ಹೊಸದೇನಲ್ಲ. ಆದರೆ, ಮೂವರು ಸಹೋದರಿಯರು ಒಂದೇ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ.

ಅದರಲ್ಲೂ ತಾಯಿ ನಿರ್ದೇಶನದಲ್ಲಿ ಕ್ಯಾಮೆರಾ ಮುಂದೆ ನಿಲ್ಲುತ್ತಿರುವುದು ಬಹುಶಃ ಭಾರತೀಯ ಚಿತ್ರರಂಗದಲ್ಲೇ ದಾಖಲೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಜರ್ನಿ ಕುರಿತಾದ ಕಥೆ ಎಂಬುದು ನಿರ್ದೇಶಕರ ಮಾತು. “ಯಾನ’ ಬಗ್ಗೆ ಹೇಳುವುದಾದರೆ, ಇದೊಂದು ಜನಿರ ಕಥೆ. ಬೆಂಗಳೂರಿನಿಂದ ಗೋವಾದವರೆಗೆ ಕಥೆ ನಡೆಯುತ್ತೆ.

ದಾರಿ ಮಧ್ಯೆ ಸಿಗುವ ಚಿತ್ರದುರ್ಗ, ದಾವಣಗೆರೆ ಹೀಗೆ ಕೆಲ ಸ್ಥಳಗಳಲ್ಲೂ ಚಿತ್ರ ಸಾಗುತ್ತದೆ. ಚಿತ್ರದಲ್ಲಿ ಮನರಂಜನೆ ಇರುತ್ತೆ. ಅದಕ್ಕಿಂತ ಹೆಚ್ಚಾಗಿ ಈ ವಯಸ್ಸಿನ ಹುಡುಗಿಯರು ಏನಿಷ್ಟ ಪಡ್ತಾರೆ, ಎಂಥಾ ಕಷ್ಟಪಡ್ತಾರೆ, ಏನೆಲ್ಲಾ ತೊಂದರೆ ಅನುಭವಿಸ್ತಾರೆ ಎಂಬುದನ್ನು ಹೇಳುತ್ತಿದ್ದಾರಂತೆ ಅವರು. ಚಿತ್ರಕ್ಕೆ ಸುಹಾಸ್‌ ಗಂಗಾಧರ್‌ ಹಾಗೂ ವಿಜಯಲಕ್ಷ್ಮಿ ಸಿಂಗ್‌ ಚಿತ್ರಕಥೆ ಬರೆದರೆ, ಸಿಂಪಲ್‌ ಸುನಿ ಹಾಗೂ ಅಭಿಷೇಕ್‌ ಅವರು ಚಿತ್ರಕ್ಕೆ ಮಾತುಗಳನ್ನು ಪೋಣಿಸಿದ್ದಾರೆ.

ಚಿತ್ರದ ಹಾಡುಗಳಿಗೆ ಜೋಶ್ವಾ ಶ್ರೀಧರ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ದೃಶ್ಯಗಳನ್ನು ಕರಮ್‌ ಚಾವ್ಲಾ ಅವರು ಛಾಯಾಗ್ರಹಣ ಮಾಡಿದ್ದಾರೆ. “ಯಾನ’ ಚಿತ್ರದಲ್ಲಿ ವೈಭವಿ, ವೈನಿಧಿ, ವೈಸಿರಿ ಅವರೊಂದಿಗೆ ಚಕ್ರವರ್ತಿ, ಸುಮುಖ, ಅಭಿಷೇಕ್‌, ಅನಂತನಾಗ್‌, ಸುಹಾಸಿನಿ, ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರ ರಾಜ್‌, ಸುಂದರ್‌, ವೀಣಾಸುಂದರ್‌, ಎಂ.ಎನ್‌.ಲಕ್ಷ್ಮೀದೇವಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.