ಕೆಎಸ್ಸಾರ್ಟಿಸಿಯಿಂದ ಶೀಘ್ರದಲ್ಲೇ ‘ವಿಟಿಎಂಎಸ್‌’ ಆ್ಯಪ್‌

Team Udayavani, Jun 24, 2019, 11:13 AM IST

KSRTC

ಮಹಾನಗರ: ಕೆಎಸ್ಸಾರ್ಟಿಸಿ ಬಸ್‌ಗಳ ಚಲನ-ವಲನಗಳ ನಿಗಾ ಇಡುವ ಸಲುವಾಗಿ ‘ವೆಹಿಕಲ್ ಟ್ರಾಕಿಂಗ್‌ ಆ್ಯಂಡ್‌ ಮೋನಿಟರಿಂಗ್‌ ಸಿಸ್ಟಮ್‌’ (ವಿಟಿಎಂಎಸ್‌) ಆಧಾರಿತ ಆ್ಯಪ್‌ ತಯಾರಿಸಲು ನಿಗಮ ಮುಂದಾಗಿದೆ. ಆ್ಯಪ್‌ನಲ್ಲಿ ಅಳವಡಿಸಬೇಕಾದ ವೈಶಿಷ್ಟ ್ಯ, ಖರ್ಚು ಸಹಿತ ಸಾಧ್ಯಾ- ಸಾಧ್ಯತೆಗಳ ಬಗ್ಗೆ ನಿಗಮ ಚರ್ಚೆ ನಡೆಸುತ್ತಿದ್ದು, ಮುಂದಿನ ಕೆಲವು ತಿಂಗಳಿನಲ್ಲಿಯೇ ಟೆಂಡರ್‌ ಪ್ರಕ್ರಿಯೆ ಕೂಡ ನಡೆಯಲಿದೆ.

ಕೆಎಸ್ಸಾರ್ಟಿಸಿಯಲ್ಲಿ ಈಗಾಗಲೇ 84 ಘಟಕಗಳಿದ್ದು, 17 ವಿಭಾಗಗಳಿವೆ. ಒಟ್ಟಾರೆ 8,729 ಬಸ್‌ಗಳಿವೆ. ಇದರಲ್ಲಿ ಮಂಗಳೂರು, ಪುತ್ತೂರು, ಮೈಸೂರು ಗ್ರಾಮಾಂತರ, ರಾಮನಗರ ವಿಭಾಗಗಳ ಒಟ್ಟಾರೆ 2,000 ಬಸ್‌ಗಳಲ್ಲಿ ಮೊದಲನೇ ಹಂತವಾಗಿ ವಿಟಿಎಂಎಸ್‌ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಎರಡನೇ ಹಂತದ ಯೋಜನೆ ಸದ್ಯದಲ್ಲಿಯೇ ಆರಂಭಗೊಳ್ಳಲಿದ್ದು, ನಿಗಮದ ಎಲ್ಲ ಬಸ್‌ಗಳಿಗೂ ಈ ಸೌಲಭ್ಯ ವನ್ನು ಅಳವಡಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

ಈ ವ್ಯವಸ್ಥೆಯು ಸದ್ಯ ವಿಭಾಗಾವಾರು ಚಾಲ್ತಿಯಲ್ಲಿದ್ದು, ಬಸ್‌ ಯಾವ ಮಾರ್ಗ ದಲ್ಲಿ ತೆರಳುತ್ತಿದೆ, ಎಷ್ಟು ವೇಗದಲ್ಲಿದೆ, ಎಷ್ಟು ಸಮಯ ನಿಲ್ಲಿಸಲಾಗಿದೆ ಎಂಬ ಮಾಹಿತಿಯು ಸರ್ವರ್‌ ಮುಖೇನ ನಿಯಂತ್ರಣ ಕೊಠಡಿಗೆ ಬರುತ್ತಿದೆ.

ಬಸ್‌ಗಳಲ್ಲಿ ಜಿಪಿಆರ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿ ಯಾವ ಬಸ್‌ ಯಾವ ಭಾಗದಲ್ಲಿ ಸಂಚರಿಸುತ್ತಿದೆ ಎಂಬುದನ್ನು ಟ್ರ್ಯಾಕ್‌ ಮಾಡುವ ವಿಧಾನವೇ ವಿಟಿಎಂಎಸ್‌. ಜಿಪಿಆರ್‌ಎಸ್‌ ಮಾದರಿಯ ಯುನಿಟ್ ಅನ್ನು ಸಂಬಂಧಿತ ಬಸ್‌ನಲ್ಲಿ ಮೊದಲಿಗೆ ಅಳವಡಿಸಲಾಗುತ್ತದೆ. ಇದರಿಂದ ಬಸ್‌ ಎಲ್ಲಿದೆ, ನಿಗದಿತ ನಿಲ್ದಾಣಕ್ಕೆ ಎಷ್ಟು ಗಂಟೆಗೆ ಬರಲಿದೆ ಮಾಹಿತಿ ದೊರಕುತ್ತದೆ.

ವಿಟಿಎಂಎಸ್‌ ಎಂದರೇನು?

ಸದ್ಯದಲ್ಲೇ ಆ್ಯಪ್‌

ನಾಲ್ಕು ಕೆಎಸ್ಸಾರ್ಟಿಸಿ ವಿಭಾಗದ 2,000 ಬಸ್‌ಗಳಿಗೆ ಸದ್ಯ ವಿಟಿಎಂಎಸ್‌ ವ್ಯವಸ್ಥೆ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ತ್ವರಿತಗತಿಯಲ್ಲಿ ವಿಭಾಗದ ಎಲ್ಲ ಬಸ್‌ಗಳಿಗೂ ಈ ವ್ಯವಸ್ಥೆ ಅಳವಡಿಸುತ್ತೇವೆ. ವಿಟಿಎಂಎಸ್‌ ಆ್ಯಪ್‌ ವಿಚಾರವಾಗಿ ಸದ್ಯ ಚರ್ಚೆ ನಡೆಯುತ್ತಿದ್ದು, ಸದ್ಯದಲ್ಲೇ ಟೆಂಡರ್‌ ಕರೆದು ಆ್ಯಪ್‌ ಮುಖೇನ ಪ್ರಯಾಣಿಕ ಸ್ನೇಹಿ ಮಾಡುತ್ತೇವೆ.
– ಶಿವಯೋಗಿ ಸಿ. ಕಳಸದ್‌, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ
ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.