ನೀರು ಬಿಡುವವರೆಗೂ ಹೋರಾಟ ನಿಲ್ಲದು

ರೈತರ ಸಂಕಷ್ಟ ಮನವರಿಕೆ ಮಾಡಿಕೊಟ್ಟು ನೀರು ಹರಿಸಿ • 3ನೇ ದಿನಕ್ಕೆ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

Team Udayavani, Jun 24, 2019, 11:36 AM IST

mandya-tdy-1..

ಮಂಡ್ಯ: ಕಾವೇರಿ ಜಲಾನಯನ ಪ್ರಾಂತ್ಯದ ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯದ ಎಲ್ಲಾ ನಾಲೆಗಳಿಗೆ ನೀರು ಹರಿಸಿ ಬೆಳೆದು ನಿಂತ ಬೆಳೆಗಳ ರಕ್ಷಣೆ ಮಾಡುವಂತೆ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ಮಧ್ಯೆ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ. ಕೆಆರ್‌ಎಸ್‌ನಲ್ಲಿರುವ ನೀರು ಕುಡಿಯುವ ನೀರಿಗಷ್ಟೇ ಮೀಸಲಿಡಲಾಗಿದೆ ಎಂದು ಜಿಲ್ಲಾಡಳಿತ ದೃಢವಾಗಿಹೇಳಿದೆ. ನೀರಿಗಾಗಿ ಜಿಲ್ಲಾಡಳಿತ ಹಾಗೂ ರೈತರ ನಡುವಿನ ಕದನ ದಿನೇ ದಿನೆ ಕಾವೇರುತ್ತಿದೆ.

ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು, ಸ್ಥಳದಲ್ಲೇ ಅಡುಗೆ ತಯಾರಿಸಿ, ಊಟ ಮಾಡಿ ಅಲ್ಲೇ ಮಲಗುವ ಮೂಲಕ ಧರಣಿಯನ್ನು ಮುಂದುವರಿಸಿದ್ದಾರೆ. ರೈತರು ನೀರಿನ ಬೇಡಿಕೆಯೊಂದಿಗೆ ಧರಣಿ ನಡೆಸುತ್ತಿರುವ ವಿಚಾರವನ್ನು ಈಗಾಗಲೇ ಜಿಲ್ಲಾಡಳಿತ, ಜನಪ್ರತಿನಿಧಿಗಳು ಸರ್ಕಾರ ಮತ್ತು ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಸದ್ಯಕ್ಕೆ ನೀರು ಬಿಡುಗಡೆ ಸಾಧ್ಯವಿಲ್ಲವೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ನಾಲೆಗಳಿಗೆ ನೀರು ಹರಿಸುವವರೆಗೂ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲವೆಂದು ರೈತರು ದೃಢ ನಿರ್ಧಾರ ಮಾಡಿದ್ದಾರೆ.

ಪ್ರತಿಭಟನೆ ನೇತೃತ್ವ ವಹಿಸಿರುವ ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕಾವೇರಿ ಜಲಾನಯನ ವ್ಯಾಪ್ತಿಯ ರಾಜ್ಯದ ಪಾಲಿನ ನೀರನ್ನು ಬಿಡುಗಡೆ ಮಾಡಲಾಗಿದೆ. ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ಹೆಚ್ಚುವರಿ ನೀರಿನ ಅಗತ್ಯತೆ ಇರುವುದರಿಂದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಏನೂ ಮಾಡಲಾಗದ ಸ್ಥಿತಿಯಲ್ಲಿದೆ. ಜೂ.25ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ರಾಜ್ಯದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರೈತರ ಸಂಕಷ್ಟವನ್ನು ಪ್ರಾಧಿಕಾರದ ಮುಂದೆ ಇಟ್ಟು ನೀರು ಬಿಡಿಸುವ ಬಗ್ಗೆ ಆಸಕ್ತಿ ವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಪ್ರಾಧಿಕಾರದ ಸಭೆ ನಡೆದು ನಾಲೆಗಳಲ್ಲಿ ನೀರು ಹರಿಸುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ. ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಒತ್ತಡ ಹೇರಿದ್ದರೂ ಅದನ್ನು ನಿರಾಕರಿಸಲಾಗಿದೆ. ನೀರು ಬಿಡುವವರೆಗೂ ಹೋರಾಟ ಮುಂದುವರೆಯುವುದು ನಿಶ್ಚಿತ ಎಂದು ಸ್ಪಷ್ಪಪಡಿಸಿದರು.

ಡಾ.ರವೀಂದ್ರ, ಸಿದ್ದರಾಮಯ್ಯ ಬೆಂಬಲ: ರೈತರ ಅಹೋರಾತ್ರಿ ಧರಣಿಗೆ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ. ರವೀಂದ್ರ ಹಾಗೂ ಜಿಲ್ಲಾ ಬಿಜೆಪಿ ಮುಖಂಡ ಡಾ. ಸಿದ್ದರಾಮಯ್ಯ ಅವರು ಮೂರನೇ ದಿನದ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

ಈ ಸಂದರ್ಭ ಮಾತನಾಡಿದ ಡಾ. ಸಿದ್ದರಾಮಯ್ಯ ಅವರು, ಇದು ಜಿಲ್ಲೆಯ ರೈತರ ಜೀವನ್ಮರಣದ ಪ್ರಶ್ನೆಯಾಗಿದೆ. ಜಿಲ್ಲೆಯಲ್ಲಿ 60 ಲಕ್ಷ ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆದು ನಿಂತಿದೆ. ತಕ್ಷಣ ನೀರು ಒದಗಿಸದಿದ್ದಲ್ಲಿ ಒಣಗುವ ಸಾಧ್ಯತೆ ಇದೆ. ಈಗಾಗಲೇ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಬೆಳೆಗಳಿಗೆ ನೀರು ಒದಗಿಸದಿದ್ದಲ್ಲಿ ಕಬ್ಬು ಒಣಗಿ ಭಾರೀ ನಷ್ಟ ಉಂಟಾಗುವ ಸಾಧ್ಯತೆಗಳಿವೆ. ತಕ್ಷಣವೇ ನಾಲೆಗಳಲ್ಲಿ ನೀರು ಹರಿಸುವ ಮೂಲಕ ರೈತರನ್ನು ಉಳಿಸುವ ಅಗತ್ಯವಿದೆ. ಇಲ್ಲದಿದ್ದಲ್ಲಿ ರೈತರ ಸಾಮೂಹಿಕ ಆತ್ಮಹತ್ಯೆಗಳು ನಡೆಯುವ ಸಂಭವವಿದೆ ಎಂದು ಎಚ್ಚರಿಸಿದರು.

ಡಾ. ರವೀಂದ್ರ ಅವರು ಮಾತನಾಡಿ, ಈ ಹಿಂದೆ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಚಳವಳಿಗಳು ನಡೆದಾಗ ತಕ್ಷಣ ಎಚ್ಚೆತ್ತುಕೊಳ್ಳುತ್ತಿದ್ದ ಸರ್ಕಾರಗಳು ನಾಲೆಗಳಲ್ಲಿ ನೀರು ಹರಿಸುವ ಮೂಲಕ ರೈತರ ನೆರವಿಗೆ ಧಾವಿಸುತ್ತಿದ್ದವು. ಆದರೆ, ರಾಜ್ಯದ ಮೈತ್ರಿ ಸರ್ಕಾರ ಈಬಗ್ಗೆ ಯಾವುದೇ ನಿಲುವನ್ನು ತಾಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಜಿಲ್ಲೆಯ ಜೀವನಾಡಿಯಾಗಿರುವ ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆಗಳನ್ನು ಪ್ರಾರಂಭಿಸುವ ಕೆಲಸ ಶೀಘ್ರ ಆಗಬೇಕಿದೆ ಎಂದರು. ಶಂಭೂನಹಳ್ಳಿ ಸುರೇಶ್‌, ಲಿಂಗಪ್ಪಾಜಿ, ರಾಮಕೃಷ್ಣಯ್ಯ, ವಿಜಯಕುಮಾರ್‌, ಅಶೋಕ, ನಾಗರಾಜು, ಲತಾ ಶಂಕರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.