ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ರಜತ ತುಲಾಭಾರ ಸಪ್ತಾಹಕ್ಕೆ ಚಾಲನೆ


Team Udayavani, Jun 25, 2019, 3:39 PM IST

2406MUM08

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ ಗೋಕುಲ, ಬಿಎಸ್‌ಕೆಬಿ ಅಸೋಸಿ ಯೇಶನ್‌ ಮುಂಬಯಿ, ಶ್ರೀ ಕೃಷ್ಣ ಭಕ್ತಾದಿಗಳು ಮತ್ತು ಶ್ರೀ ಪೇಜಾವರ ಮಠಾಧೀಶರ ಅಭಿಮಾನಿಗಳು ಹೊರನಾಡ ಮುಂಬಯಿಯಲ್ಲಿ ಕೈಗೊಂಡಿರುವ ಪೇಜಾವರ ಶ್ರೀಗಳ ರಜತ ತುಲಾಭಾರ ಸಪ್ತಾಹವು ಜೂ. 24ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಪ್ರಾರಂಭಗೊಂಡಿತು.

ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಸಪ್ತಾಹಕ್ಕೆ ಚಾಲನೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪ್ರಸಿದ್ಧ ಡ್ರಮ್‌ವಾದಕ ಆನಂದನ್‌ ಶಿವಮಣಿ ಅವರಿಂದ ಸಂಗೀತವಾದನ ಕಾರ್ಯಕ್ರಮ ನಡೆಯಿತು. ಶ್ರೀ ಅಂಬಿಕಾ ಮಹಾಗಣಪತಿ ದೇವಸ್ಥಾನ ವಿದ್ಯಾವಿಹಾರ್‌ ಇದರ ಪ್ರದಾನ ಅರ್ಚಕ, ಜಿಪಿಟಿ ವಿಶ್ವಸ್ಥ ಸದಸ್ಯ ವಿದ್ವಾನ್‌ ಪೆರ್ಣಂಕಿಲ ಹರಿದಾಸ್‌ ಭಟ್‌ ಸಂಯೋಜನೆಯಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಬಿಎಸ್‌ಕೆಬಿಎ ಮತ್ತು ಜಿಪಿಟಿ ಸಂಸ್ಥೆಗಳ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌. ಕಟೀಲು ಮತ್ತು ವಿಜಯಲಕ್ಷ್ಮೀ ಎಸ್‌. ರಾವ್‌ ದಂಪತಿ, ಉಭಯ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಂಸ್ಥೆಗಳ ಮುಖ್ಯಸ್ಥರನ್ನೊಳಗೊಂಡು ಶ್ರೀ ವಿಶ್ವೇಶತೀರ್ಥರ ಪ್ರಥಮ ರಜತ ತುಲಾಭಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಎಸ್‌ಕೆಬಿಎ ಸಂಸ್ಥೆಯ ಉಪಾಧ್ಯಕ್ಷರುಗಳಾದ ವಾಮನ ಹೊಳ್ಳ ಮತ್ತು ಶೈಲಿನಿ ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಎ. ಪಿ. ಕೆ ಪೋತಿ, ಗೌರವ ಕೋಶಾಧಿಕಾರಿ ಸಿಎ ಹರಿದಾಸ್‌ ಭಟ್‌, ಜೊತೆ ಕಾರ್ಯದರ್ಶಿಗಳಾದ ಪಿ.ಸಿ.ಎನ್‌ ರಾವ್‌, ಚಿತ್ರಾ ಮೇಲ್ಮನೆ, ಜೊತೆ ಕೋಶಾಧಿಕಾರಿ ಕುಸುಮಾ ಶ್ರೀನಿವಾಸ್‌, ಮಹಿಳಾ ವಿಭಾಗಧ್ಯಕ್ಷೆ ಐ. ಕೆ. ಪ್ರೇಮಾ ಎಸ್‌. ರಾವ್‌, ಜಿಪಿಟಿ ವಿಶ್ವಸ್ತ ಮಂಡಳಿ ಗೌ| ಪ್ರ| ಕಾರ್ಯದರ್ಶಿ ಎ. ಎಸ್‌. ರಾವ್‌, ವಿಶ್ವಸ್ಥ ಸದಸ್ಯರುಗಳಾದ ಬಿ. ರಮಾನಂದ ರಾವ್‌ ಬಡನಿಡಿಯೂರು, ಕೃಷ್ಣ ಆಚಾರ್ಯ ಮತ್ತು ಎ. ಎನ್‌. ಉಡುಪ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ವಿಷ್ಣುಮೂರ್ತಿ ಆಚಾರ್ಯ ಉಡುಪಿ, ವಿಕ್ರಾಂತ್‌ ಉರ್ವಾಳ್‌, ಡಾ| ಸುಧೀರ್‌ ಆರ್‌.ಎಲ್‌ ಶೆಟ್ಟಿ, ಡಾ| ಎಂ. ಎಸ್‌. ಶೆಟ್ಟಿ, ಪೇಜಾವರ ಮಠದ ಮುಂಬಯಿ ಶಾಖೆಯ ಆಡಳಿತಾಧಿಕಾರಿ ವಿದ್ವಾನ್‌ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ್‌ ಆಚಾರ್ಯ ರಾಮಕುಂಜ, ಶ್ರೀಹರಿ ಭಟ್‌ ಪುತ್ತಿಗೆ, ನಿರಂಜನ್‌ ಗೋಗೆr ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಸಪ್ತ ದಿನಗಳ ಕಾರ್ಯಕ್ರಮಗಳು
ಸಪ್ತದಿನಗಳಲ್ಲಿ ಪ್ರತಿದಿನ ಸಂಜೆ 6 ರಿಂದ ರಾತ್ರಿ 8ರ ವರೆಗೆ ಶ್ರೀಗಳ ರಜತ ತುಲಾಭಾರ ನಡೆಯಲಿದೆ. ಜೂ. 25ರಂದು ಶ್ರೀ ಅದಮಾರು ಮಠ ಇರ್ಲಾ ಅಂಧೇರಿ ಪಶ್ಚಿಮ, ಜೂ. 26ರಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನ ಜರಿಮರಿ, ಜೂ. 27 ರಂದು ಶ್ರೀ ಸುಬ್ರಹ್ಮಣ್ಯ ಮಠ, ಛೆಡ್ಡಾ ನಗರ್‌ ಚೆಂಬೂರು, ಜೂ.28 ರಂದು “ಆಶ್ರಯ’ ನೆರೂಲ್‌ ನವಿಮುಂಬಯಿ, ಜೂ. 29 ಮತ್ತು ಜೂ. 30ರಂದು ಶ್ರೀ ಪೇಜಾವರ ಮಠ ಸಾಂತಾಕ್ರೂಜ್‌ ಪೂರ್ವ ಇಲ್ಲಿ ನಡೆಯಲಿದೆ. ಜೂ. 30ರಂದು ಬೆಳಗ್ಗೆ 10ರಿಂದ ಗೋಕುಲ ನಿವೇಶನ ಸಾಯನ್‌ ಇಲ್ಲಿ ಪೇಜಾವರ ಶ್ರೀಗಳಿಂದ ಶ್ರೀ ಕೃಷ್ಣ ಮಂದಿರದ ಶಿಲಾನ್ಯಾಸ ಹಾಗೂ ಶ್ರೀಪಾದಂಗಳವ‌ರಿಗೆ ಪಟ್ಟದ ದೇವರ ಸಹಿತ ತುಲಾಭಾರ ಸೇವೆಯೊಂದಿಗೆ ಸಂಜೆ ಸಾಂತಾಕ್ರೂಜ್‌ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ತುಲಾಭಾರ ಸಪ್ತಾಹ ಸಮಾರೋಪ ನಡೆಸಲಾಗುವುದು ಎಂದು ಉಭಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ತುಲಾಭಾರ ಸಮಿತಿಯ ಸಂಚಾಲಕರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.