ಮೇವು-ನೀರು ಸಮರ್ಪಕ ಪೂರೈಕೆಗೆ ಆಗ್ರಹ

•ಬಹುಗ್ರಾಮ ಕುಡಿಯುವ ನೀರು ಯೋಜನೆ ಪ್ರಾರಂಭಿಸಲು ಒತ್ತಾಯ•ದಾಖಲೆಗಳಲ್ಲಷ್ಟೇ ಮೇವು-ನೀರು

Team Udayavani, Jun 26, 2019, 10:12 AM IST

bg-tdy-02..

ಚಿಕ್ಕೋಡಿ: ಇಲ್ಲಿನ ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ ಮಾತನಾಡಿದರು.

ಚಿಕ್ಕೋಡಿ: ಬರಗಾಲ ಇರುವ ಪ್ರದೇಶದಲ್ಲಿ ತಾಲೂಕಾಡಳಿತ ಪೂರೈಕೆ ಮಾಡುತ್ತಿರುವ ನೀರು ಮತ್ತು ಮೇವು ಸಮರ್ಪಕವಾಗಿ ಜನರಿಗೆ ಲಭ್ಯವಾಗುತ್ತಿಲ್ಲ ಎಂದು ತಾಪಂ ಸದಸ್ಯರು ದೂರಿದರು.

ಇಲ್ಲಿನ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಮಂಗಳವಾರ ತಾಪಂ ಅಧ್ಯಕ್ಷ ಉರ್ಮಿಳಾ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬರಗಾಲ ಇರುವ ಗ್ರಾಮಗಳಲ್ಲಿ ನೀರು ಮತ್ತು ಮೇವು ಪೂರೈಕೆೆ ಮಾಡುತ್ತಿದೆಯೆಂದು ತಾಲೂಕಾಡಳಿತ ಅಧಿಕಾರಿಗಳು ಕೇವಲ ದಾಖಲೆಗಳಲ್ಲಿ ಮಾತ್ರ ತೋರಿಸುತ್ತಿದ್ದಾರೆ. ಆದರೆ ವಾಸ್ತವವಾಗಿ ಮಡ್ಡಿ ಪ್ರದೇಶದ ಜನರಿಗೆ ಸಮರ್ಪಕ ಮೇವು ಲಭ್ಯವಾಗುತ್ತಿಲ್ಲ ಎಂದು ವಡ್ರಾಳ ಮತ್ತು ಬಂಬಲವಾಡ ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಮಧ್ಯೆ ಪ್ರವೇಶಿಸಿದ ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ ಮಾತನಾಡಿ, ಚಿಕ್ಕೋಡಿ ತಾಲೂಕಿನ ಬರಪೀಡಿತ ಬಹುತೇಕ ಗ್ರಾಮಗಳಿಗೆ ಬೇಡಿಕೆ ಅನುಗುಣವಾಗಿ ಟ್ಯಾಂಕರ್‌ ಮೂಲಕ ನೀರು ಕೊಡಲಾಗುತ್ತಿದೆ. ಬೆಳಕೂಡ ಕ್ರಾಸ್‌ ಹತ್ತಿರ ಒಂದು ಮೇವು ಬ್ಯಾಂಕ ಸ್ಥಾಪನೆ ಮಾಡಿ ಅನುಕೂಲ ಕಲ್ಪಿಸಿದೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಡ್ರಾಳ ತಾಪಂ ಸದಸ್ಯ ರಾಜು ಪಾಟೀಲ, ಬೆಳಕೂಡ ಕ್ರಾಸ್‌ನಲ್ಲಿ ಮೇವು ಬ್ಯಾಂಕ್‌ ಸ್ಥಾಪನೆ ಮಾಡಿದರೆ ಜೈನಾಪುರ, ವಡ್ರಾಳ, ಮುಗಳಿ, ಹತ್ತರವಾಟ ಮತ್ತು ಕರೋಶಿ ಗ್ರಾಮದ ಜನರಿಗೆ ಮೇವು ತರುವುದು ಅಸಾಧ್ಯ. ಬೆಳಕೂಡ ಕ್ರಾಸ್‌ದಿಂದ ಜೈನಾಪುರ ಸುಮಾರು 10 ಕಿ.ಮೀ. ದೂರವಾಗುತ್ತದೆ. ರೈತರಿಗೆ ಅನುಕೂಲವಾಗುವ ಹಾಗೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದರು. ಜೈನಾಪುರ ಮತ್ತು ಮುಗಳಿ ಗ್ರಾಮದ ಎಷ್ಟು ಜನ ರೈತರು ಮೇವು ಪಡೆದುಕೊಂಡು ಹೋಗಿದ್ದಾರೆಂದು ದಾಖಲೆ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.

ಬಂಬಲವಾಡ ತಾಪಂ ಸದಸ್ಯ ಕಾಶಿನಾಥ ಕುರಣಿ ಮಾತನಾಡಿ, ಮಾರ್ಚ್‌ ತಿಂಗಳಿಂದ ತಾಲೂಕಾಡಳಿತ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದೆ. ಟ್ಯಾಂಕರ ಆರಂಭವಾದಾಗಿನಿಂದ ಇಲ್ಲಿಯವರಿಗೆ ಜಿಪಿಎಸ್‌ ಅಳವಡಿಸದ ಮಾಲಿಕರು ಈಗ ಏಕೆ ಜಿಪಿಎಸ್‌ ಅಳವಡಿಸಿದ್ದಾರೆ. ಜಿಪಿಎಸ್‌ ಅಳವಡಿಸದೇ ನೀರು ಪೂರೈಕೆ ಮಾಡಿ ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಸಂಶಯ ಮೂಡಿದೆ. ಇದು ತನಿಖೆ ಆಗಬೇಕು ಎಂದರು ಒತ್ತಾಯಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಜನರಿಗೆ ತಕ್ಷಣ ನೀರು ಕೊಡಬೇಕು. ಆ ದಿಸೆಯಲ್ಲಿ ಟೆಂಡರ್‌ ಕರೆದು ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಿದೆ. ಕೂಡಲೇ ಜಿಪಿಎಸ್‌ ಅಳವಡಿಸಿಕೊಳ್ಳಬೇಕೆಂದು ಸೂಚನೆ ನೀಡಿದರೂ ಸ್ವಲ್ಪ ವಿಳಂಬವಾಗಿದೆ. ಸರ್ಕಾರದ ಹಣ ದುರುಪಯೋಗವಾಗಲು ಬಿಡುವುದಿಲ್ಲ, ಆಯಾ ಗ್ರಾಪಂ ಪಿಡಿಒ, ತಾಪಂ ಇಒ ಮತ್ತು ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾರ್ಯಕಾರಿ ಅಭಿಯಂತರ ಸಹಿ ಮಾಡಿದಾಗ ಮಾತ್ರ ನಾನು ಹಣ ಬಿಡುಗಡೆ ಮಾಡುತ್ತೇನೆಂದು ತಹಶೀಲ್ದಾರ್‌ ಬಿರಾದಾರ ಸ್ಪಷ್ಟಪಡಿಸಿದರು.

ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭಿಸಬೇಕು. ಹಾಳಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಜನರಿಗೆ ನೀರು ಕೊಡಬೇಕೆಂದು ತಾಪಂ ಸದಸ್ಯ ರವೀಂದ್ರ ಮಿರ್ಜೆ ಒತ್ತಾಯಕ್ಕೆ ತಾಲೂಕಿನಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸರ್ವೇ ಮಾಡಿ ಅವುಗಳನ್ನು ದುರಸ್ತಿಗೊಳಿಸಲು ಸರ್ಕಾರ ಅನುದಾನ ನೀಡಿದ್ದು, ಶೀಘ್ರ ದುರಸ್ತಿ ಮಾಡಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾರ್ಯನಿರ್ವಾಹಕ ಅಭಿಯಂತ ಎಸ್‌.ಬಿ. ಬಣಕಾರ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷೆ ಉರ್ಮಿಳಾ ಪಾಟೀಲ ಮಾತನಾಡಿ, ತಾಲೂಕಾ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ತಾಪಂ ಸಭೆಯಲ್ಲಿ ಚರ್ಚೆ ಮಾಡಿರುವ ವಿಷಯಗಳನ್ನು ಶೀಘ್ರ ಇತ್ಯರ್ಥಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷರಾದ ಮಹಾದೇವಿ ನಾಯಿಕ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ವಿರೇಂದ್ರ ಪಾಟೀಲ, ಅಚ್ಚುತ್‌ ಮಾನೆ, ಪ್ರಕಾಶ ರಾಚನ್ನವರ,ಪಾಂಡುರಂಗ ಕೋಳಿ, ಸುರೇಶ ನಸಲಾಪುರೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.