ಮಾನ್ವಿ ಅಭಿವೃದ್ಧಿ ಶಕೆ ಆರಂಭವಾಗುವುದೇ?

15 ವರ್ಷದಿಂದ ಅಭಿವೃದ್ದಿ ಸ್ಥಗಿತ •ಕುಡಿಯುವ ನೀರು-ನೀರಾವರಿ ಸಮಸ್ಯಗೆ ಬೇಕಿದೆ ಮುಕ್ತಿ

Team Udayavani, Jun 26, 2019, 11:16 AM IST

26-June-9

ಮಾನ್ವಿ: ನೀರು ಹರಿಯದೆ ಕಸದ ತೊಟ್ಟಿಗಳಾಗಿರುವ ತಾಲೂಕಿನ ಕಾಲುವೆಗಳು.

ಮಾನ್ವಿ: ಕಳೆದ 15 ವರ್ಷಗಳಿಂದ ಮಾನ್ವಿ ತಾಲೂಕು ಅಭಿವೃದ್ಧಿ ವಂಚಿತವಾಗಿದೆ. ತಾಲೂಕಿನಲ್ಲಿ ಅಧಿಕಾರಿಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಸುಧಾರಣೆ ಕಾಣದ ರಸ್ತೆಗಳು, ಬಗೆಹರಿಯದ ನೀರಾವರಿ ಸಮಸ್ಯೆ, ಅರ್ಹರಿಗೆ ತಲುಪದ ಯೋಜನೆಗಳು, ಮಿತಿ ಮೀರಿದ ಭ್ರಷ್ಟಾಚಾರ ಹೀಗೆ ಹತ್ತು ಹಲವು ಸಮಸ್ಯೆಗಳು ಕರೇಗುಡ್ಡ ಗ್ರಾಮಕ್ಕೆ ಆಗಮಿಸುತ್ತಿರುವ ಸಿಎಂ ಕುಮಾರಸ್ವಾಮಿ ಅವರನ್ನು ಸ್ವಾಗತಿಸುತ್ತಿವೆ.

ಮಾನ್ವಿ ಕ್ಷೇತ್ರದಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ತಲಾ ಎರಡು ಬಾರಿ ಕಾಂಗ್ರೆಸ್‌ನ ಎನ್‌.ಎಸ್‌. ಬೋಸರಾಜು ಮತ್ತು ಹಂಪಯ್ಯ ನಾಯಕ ಶಾಸಕರಾಗಿದ್ದರು. ಈಗ ಜೆಡಿಎಸ್‌ನ ರಾಜಾ ವೆಂಕಟಪ್ಪ ನಾಯಕ ಶಾಸಕರಾಗಿದ್ದಾರೆ. ಸುಮಾರು 10-15 ವರ್ಷಗಳಿಂದ ತಾಲೂಕಿನ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಅಭಿವೃದ್ಧಿ ಬಾಗಿಲು ತೆರೆದಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ನಾಡಿನ ದೊರೆ ಸಿಎಂ ಕುಮಾರಸ್ವಾಮಿ ಈ ಸಮಸ್ಯೆಗೆ ಪರಿಹಾರ ಒದಗಿಸಿ ಮಾನ್ವಿಯಲ್ಲಿ ಅಭಿವೃದ್ಧಿ ಶಕೆ ಆರಂಭಿಸುವರೇ ಎಂದು ಜನ ಕಾದಿದ್ದಾರೆ.

ನೀರಾವರಿ ಸೌಲಭ್ಯ: ತಾಲೂಕಿನ ಕೆಲ ಭಾಗ ನೀರಾವರಿಗೆ ಒಳಪಟ್ಟಿದ್ದರೂ ಸಮರ್ಪಕ ನೀರು ಹರಿಯುತ್ತಿಲ್ಲ. ತುಂಗಭದ್ರಾ ಎಡದಂಡೆ ಕಾಲುವೆ ಕೊನೆ ಭಾಗವಾದ ಇಲ್ಲಿಗೆ ನೀರು ಹರಿಯುವುದೇ ಅಪರೂಫ ಎಂಬಂತಾಗಿದೆ. ಮೇಲ್ಭಾಗದ ಗಂಗಾವತಿ ಮತ್ತು ಸಿಂಧನೂರು ತಾಲೂಕಿನಲ್ಲಿ ಅಕ್ರಮ ನೀರಾವರಿ ಹೆಚ್ಚುತ್ತಿರುವುದೆ ಇದಕ್ಕೆ ಕಾರಣವಾಗಿದೆ. ಹೀಗಾಗಿ ತಾಲೂಕಿನ ಕಾಲುವೆಗಳಲ್ಲಿ ನೀರು ಹರಿಯದೇ ಕಸದ ತೊಟ್ಟಿಗಳಂತಾಗಿವೆ. ಅಕ್ರಮ ನೀರಾವರಿಗೆ ಕಡಿವಾಣ ಇಲ್ಲದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಮಾತ್ರ ತಲೆಕಡಿಸಿಕೊಳ್ಳುತ್ತಿಲ್ಲ.

ಏತ ನೀರಾವರಿ ಯೋಜನೆ ಸ್ಥಗಿತ: ತಾಲೂಕಿನಾದ್ಯಂತ ನೀರಾವರಿ ಮತ್ತು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಅನೇಕ ಏತ ನೀರಾವರಿ ಯೋಜನೆಗಳು ಸ್ಥಗಿತಗೊಂಡಿವೆ. ದದ್ದಲ ಗೌರಮ್ಮ ಬಂಡೆ ಏತನೀರಾವರಿ, ಬಯಲ ಮರ್ಚೆಡ್‌, ಕಾತರಕಿ, ಗೋರ್ಕಲ್ನಲ್ಲಿ ಏತ ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಖರೀದಿಸಿದ್ದ ಉಪಕರಣಗಳಲ್ಲಿ ಕೆಲವು ತುಕ್ಕು ಹಿಡಿದಿದ್ದರೆ, ಮತ್ತೇ ಕೆಲವು ನಾಪತ್ತೆಯಾಗಿವೆ.

ಕುಡಿಯುವ ನೀರಿನ ಕೆರೆ: ಪಟ್ಟಣದ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ನಿರಂತರ ನೀರು ಒದಗಿಸಲು ತಾಲೂಕಿನ ರಬ್ಬಣಕಲ್ ಗ್ರಾಮದ ಹತ್ತಿರ ಬೃಹತ್‌ ಕರೆ ನಿರ್ಮಾಣ ಮಾಡಬೇಕೆಂಬುದು ಜನತೆಯ ದಶಕದ ಕೂಗಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 88 ಕೋಟಿ ರೂ. ವೆಚ್ಚದಲ್ಲಿ ಕೆರೆ ಕಾಮಗಾರಿ ಪ್ರಾರಂಭಿಸಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಈಗ ಶಾಸಕರಾಗಿ ಆಯ್ಕೆಯಾದ ರಾಜಾವೆಂಕಟಪ್ಪ ನಾಯಕರು ಕೆರೆ ಕಾಮಗಾರಿಯನ್ನು ಯಶಸ್ವಿಯಾಗಿ ಮುಗಿಸಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆಸಬೇಕಿದೆ.

ಮಿನಿ ವಿಧಾನಸೌಧ: ಪಟ್ಟಣ ತಾಲೂಕು ಕೇಂದ್ರವಾಗಿದ್ದರೂ ಮಿನಿ ವಿಧಾನಸೌಧ ಇಲ್ಲ. ಮಿನಿ ವಿಧಾನಸೌಧಕ್ಕೆ ಜಾಗೆ ಆಯ್ಕೆ ಗೊಂದಲವೇ ಮುಗಿದಿಲ್ಲ. ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿರುವ ಪಿಡಬ್ಲ್ಯೂಡಿ ಹಾಗೂ ನೀರಾವರಿ ಇಲಾಖೆಗೆ ಸಂಬಂಧಿಸಿದ ಜಾಗೆ ಇದೆ. ಅಲ್ಲಿ ಮಿನಿವಿಧಾನಸೌಧ ನಿರ್ಮಿಸಬೇಕೆಂಬ ಪ್ರಯತ್ನ ನಡೆದಿತ್ತು. ಆದರೆ ಪ್ರಕ್ರಿಯೆ ಎಲ್ಲಿಗೆ ಬಂದಿದೆ ಎಂಬ ಮಾಹಿತಿ ಇಲ್ಲ. ಅಲ್ಲದೆ ಪಟ್ಟಣದಲ್ಲಿ ಕೆಲ ಇಲಾಖೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಇನ್ನು ಕೆಲವು ಖಾಸಗಿ ಕಟ್ಟಡದಲ್ಲಿವೆ.

ಬಸ್‌ ನಿಲ್ದಾಣ ಸ್ಥಳಾಂತರ: ಪಟ್ಟಣದಲ್ಲಿನ ಬಸ್‌ ನಿಲ್ದಾಣ ಜಿಲ್ಲೆಯಲ್ಲೇ ಅತ್ಯಂತ ಚಿಕ್ಕದಾಗಿದೆ. ಬಸ್‌ಗಳ ನಿಲುಗಡೆಗೂ ಜಾಗ ಇಲ್ಲದ್ದರಿಂದ ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರೂ ತೊಂದರೆ ಅನುಭವಿಸುವಂತಾಗಿದೆ. ಬಸ್‌ ನಿಲ್ದಾಣ ಸ್ಥಳಾಂತರಿಸಬೇಕಿದೆ.

ರಸ್ತೆ ಮತ್ತು ಸೇತುವೆ: ದದ್ದಲ, ಉಮಳಿಪನ್ನೂರು, ಹರನಹಳ್ಳಿ, ಜಾನೇಕಲ್, ಸುಂಕೇಶ್ವರ ಗ್ರಾಮದ ರಸ್ತೆಗಳು ಹದಗೆಟ್ಟಿವೆ. ತಾಲೂಕಿನ ಮುಸ್ಟೂರು ಗ್ರಾಮದ ಹಳ್ಳದಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ದಶಕದ ಹಿಂದೆಯೇ ಅರ್ಧಕ್ಕೆ ನಿಂತಿದೆ. ಮಾನ್ವಿಯಿಂದ ಆಂಧ್ರಕ್ಕೆ ಸಂಪರ್ಕ ಕಲ್ಪಿಸಲು ಚೀಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣ ಮಾಡಬೇಕು ಎನ್ನವುದು ಸಹ ಬಹುಜನರ ಬೇಡಿಕೆಯಾಗಿದೆ. ಈ ಸೇತುವೆ ನಿರ್ಮಾಣ ಆದಲ್ಲಿ ವ್ಯಾಪಾರ ವಹಿವಾಟು ವೃದ್ಧಿಗೆ ಸಹಕಾರಿ ಆಗಲಿದೆ.

ಶೈಕ್ಷಣಿಕ ಸಮಸ್ಯೆ: ಡಿಪ್ಲೋಮಾ, ನರ್ಸಿಂಗ್‌, ಪಾಲಿಟೆಕ್ನಿಕ್‌ ಸೇರಿದಂತೆ ವೃತ್ತಿಪರ ಕಾಲೇಜುಗಳನ್ನು ಸ್ಥಾಪಿಸಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿದೆ. ರೈಲ್ವೆ ಲೈನ್‌ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಪಟ್ಟಣದಲ್ಲಿ ಸುವ್ಯವಸ್ಥಿತ ಕ್ರೀಡಾಂಗಣ ಇಲ್ಲ. ಈ ಎಲ್ಲ ಸಮಸ್ಯೆಗಳಿಗೆ ಸಿಎಂ ಕುಮಾರಸ್ವಾಮಿ ಪರಿಹಾರ ಕಲ್ಪಿಸಲಿ ಎಂಬುದು ತಾಲೂಕಿನ ಜನರ ಆಶಯವಾಗಿದೆ.

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.