ಕುಡಿವ ನೀರಿಗೆ 323 ಕೋಟಿ ಹಂಚಿಕೆ

•ಟ್ಯಾಂಕರ್‌ ನೀರಿನ ಬಾಕಿ 15 ದಿನದಲ್ಲಿ ಪಾವತಿ•ಬಹುಗ್ರಾಮ ಯೋಜನೆ ಸ್ಥಳಕ್ಕೆ ಸಚಿವರ ಭೇಟಿ

Team Udayavani, Jun 28, 2019, 11:30 AM IST

kopala-tdy-1..

ಕೊಪ್ಪಳ: ಗ್ರಾಮಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನಗರದ ಜಿಪಂ ಸಭಾಂಗಣದಲ್ಲಿ ಗ್ರಾಮಾಭಿವೃದ್ಧಿ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಕೊಪ್ಪಳ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಇತರೆ ಯೋಜನೆಗಳಿಗೆ ಈ ವರ್ಷ 323 ಕೋಟಿ ರೂ. ಅನುದಾನವನ್ನ ಹಂಚಿಕೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಲಬುರ್ಗಾ ಹಾಗೂ ಕುಷ್ಟಗಿ ತಾಲೂಕಿನಲ್ಲಿ 700 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಉಳಿದಂತೆ ಜಿಲ್ಲೆಯ ಇತರೆ ಕುಡಿಯುವ ನೀರಿನ ಯೋಜನೆಗಳಿಗೆ 323 ಕೋಟಿ ಅನುದಾನ ಹಂಚಿಕೆ ಮಾಡಿದೆ. ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳಬೇಕು. ಕಾಮಗಾರಿಗಳ ಪ್ರಗತಿ ವೇಗವಾಗಿ ನಡೆಯಬೇಕೆಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಬರದ ಪರಿಸ್ಥಿತಿಯಿಂದ ಕುಡಿಯುವ ನೀರು ಮತ್ತು ಬರ ನಿರ್ವಹಣೆಗೆ ನಾವು ಅನುದಾನ ಅತಿ ವೇಗವಾಗಿ ಬಿಡುಗಡೆ ಮಾಡುತ್ತಿದ್ದೇವೆ. ಕ್ರಿಯಾಯೋಜನೆಗೆ ತಕ್ಕಂತೆ ಹೆಚ್ಚಿನ ಅನುದಾನದ ನೆರವು ಬೇಕಿದ್ದರೂ ಪ್ರಸ್ತಾವನೆ ಸಲ್ಲಿಸಿದರೆ ವಾರದೊಳಗೆ ನಾವು ಕ್ರಮ ಕೈಗೊಂಡು ಬಿಡುಗಡೆ ಮಾಡುತ್ತಿದ್ದೇವೆ. ಪ್ರತಿ ವಾರ ವಿಧಿಸಿ ನಡೆಸಿ ಚರ್ಚೆ ನಡೆಸುತ್ತಿದ್ದೇವೆ. ಅದರಲ್ಲೂ ಟ್ಯಾಂಕರ್‌ ನೀರು ಪೂರೈಕೆ ಮಾಡುವ ಬಾಡಿಗೆ ಹಣವನ್ನು ಬಾಕಿ ಉಳಿಸಿಕೊಳ್ಳದೇ ಈ ವರ್ಷ ತಿಂಗಳು ಬದಲಿಗೆ 15 ದಿನದೊಳಗೆ ಪಾವತಿಗೆ ಕ್ರಮ ಕೈಗೊಂಡಿದ್ದೇವೆ. ಅನುಮತಿ ಪಡೆದು ಬೋರ್‌ವೆಲ್ ಕೊರೆಸಿದ ಕಾಮಗಾರಿಗಳಿಗೆ ಮಾತ್ರ ನಾವು ಅನುದಾನ ಮೀಸಲಿಡುತ್ತೇವೆ ಎಂದರು.

ಜಿಪಂ ಸಿಇಒ ಪೆದ್ದಪ್ಪಯ್ಯ ಹಾಗೂ ಜಿಲ್ಲಾಧಿಕಾರಿ ಸುನೀಲ್ಕುಮಾರ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಟಾಸ್ಕ್ ಫೋರ್ಸ್‌ ಹಾಗೂ ಜಿಲ್ಲಾಧಿಕಾರಿ ಖಾತೆಯಿಂದ ಅನುದಾನ ನೀಡುತ್ತಿದ್ದೇವೆ. ಪ್ರತಿ ತಾಲೂಕಿಗೆ 1.50 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ ಎಂದರು.

ಸಚಿವರು ಮಾತನಾಡಿ, ಕುಡಿಯುವ ನೀರಿನ ಯಾವುದೇ ಬಿಲ್ಗಳನ್ನು ಪೆಂಡಿಂಗ್‌ ಇಡುವುಂತಿಲ್ಲ. ಕೂಡಲೇ ಪಾವತಿ ಮಾಡಬೇಕು. ವಾರಕ್ಕೊಮ್ಮೆ ನಾವು ಬರಗಾಲಕ್ಕೆ ಅನುದಾನ ಬಿಡುಗಡೆ ಮಾಡುತ್ತಿದ್ದೇವೆ. ಹಣದ ಅವಶ್ಯಕತೆ ಇದ್ದವರು ಬೇಗನೆ ಬಿಲ್ ಪಾವತಿಸಿ ಕ್ಲಿಯರ್‌ ಮಾಡಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಮುಂದುವರಿದರೆ ಅನುದಾನದ ಅವಶ್ಯಕತೆಯಿದ್ದರೆ ಕೂಡಲೇ ರಾಜ್ಯ ಕಚೇರಿಗೆ ಪತ್ರ ಬರೆದು ಇಲ್ಲಿನ ಬರದ ಪರಿಸ್ಥಿತಿ ತಿಳಿಸಬೇಕು. ಕೂಡಲೇ ಅವಶ್ಯ ಅನುದಾನದ ನೆರವು ನೀಡುವ ಕುರಿತು ನಿಮ್ಮೊಂದಿಗೆ ಚರ್ಚೆ ನಡೆಸಲಾಗುವುದು. ಈ ಬಾರಿ ಕಾಮಗಾರಿಗಳ ಅನುದಾನ ಸಕಾಲಕ್ಕೆ ಬಳಕೆ ಮಾಡಿಕೊಳ್ಳದಿದ್ದರೆ ಬಂದ ಹಣ ವಾಪಾಸ್‌ ಹೋಗಲಿದೆ. ಅದಕ್ಕೆ ಏನೂ ಮಾಡಲು ಆಗುವುದಿಲ್ಲ. ಇನ್ನೂ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಇಂಜನಿಯರ್‌ಗಳ ಸಮಸ್ಯೆಯಿದೆ. ಈ ವಾರದಲ್ಲಿ ಇಲ್ಲಿಗೆ ಇಂಜನಿಯರ್‌ಗಳನ್ನು ನಿಯೋಜನೆ ಮಾಡಲಾಗುವುದು ಎಂದರು.

ಈ ವೇಳೆ ಸಂಸದೀಯ ಕಾರ್ಯದರ್ಶಿ ರಾಘವೇಂದ್ರ ಹಿಟ್ನಾಳ, ಶಾಸಕರಾದ ಹಾಲಪ್ಪ ಆಚಾರ್‌, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ನಾಪೂರ, ಜಿಲ್ಲಾಧಿಕಾರಿ ಸುನೀಲ್ ಕುಮಾರ, ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ ಸೇರಿ ಇತರರು ಪಾಲ್ಗೊಂಡಿದ್ದರು.

ಸಂಸದ ಸಂಗಣ್ಣ ಕರಡಿ ಅವರು ಜಿಲ್ಲೆಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಾಹರ ನಡೆದ ಬಗ್ಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ ಅವರು, ಸಂಸದರು ಅಕ್ರಮ ನಡೆದ ಬಗ್ಗೆ ಮಾಹಿತಿ, ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆ ಕೊಟ್ಟರೆ ನಾವು ಖಂಡಿತ ಪರಿಶೀಲನೆ ನಡೆಸುತ್ತೇವೆ. ಉದ್ಯೋಗ ಖಾತ್ರಿ ಯೋಜನೆಯಡಿ ನಾವು ಹೆಚ್ಚಿನ ಹಣವನ್ನು ರಾಜ್ಯಕ್ಕೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲಿನ ದುರುಪಯೋಗ ಸಹಿಸಲ್ಲ. ನಾವು ಉದ್ಯೋಗ ಖಾತ್ರಿ ಯೋಜನೆಗೆ ವೇಗ ಕೊಟ್ಟಿದ್ದೇವೆ. ಏನಾದರೂ ಅಕ್ರಮ ನಡೆದರೆ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.