ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರ ತೀರಕ್ಕೆ ಕೇಂದ್ರ ಸಮಿತಿ ಸದಸ್ಯರ ಭೇಟಿ
Team Udayavani, Jul 1, 2019, 5:21 AM IST
ಉಳ್ಳಾಲ: ಸಾಂಪ್ರದಾಯಿಕ ಮೀನುಗಾರರ ಸಮಸ್ಯೆ ಮತ್ತು ಕಡಲ ತೀರ ಪ್ರದೇಶದ ನಿವಾಸಿಗಳ ಕುಂದು ಕೊರತೆಗಳ ಅಧ್ಯಯನ ಮಾಡಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಸದಸ್ಯ ಉಮೇಶ್ ಪೊಚ್ಚಪ್ಪನ್ ಅವರು ರವಿವಾರ ಉಳ್ಳಾಲ, ಸೋಮೇಶ್ವರ ಉಚ್ಚಿಲದ ಸಮುದ್ರ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಅವರು, ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಆಗುವ ಕಡಲ್ಕೊರೆತ ಮತ್ತು ಅದರಿಂದ ಮೀನು ಗಾರರಿಗೆ ಆಗುವ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ಈ ವ್ಯಾಪ್ತಿಯಲ್ಲಿ ಮೀನುಗಾರರ ಸಮಸ್ಯೆಗೆ ಸಂಬಂಧಿಸಿದಂತೆ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭ ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್ ಉಚ್ಚಿಲ್, ಜಿ.ಪಂ.ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾ. ಪಂ. ಸದಸ್ಯ ರವಿಶಂಕರ್ ಸೋಮೇಶ್ವರ, ಮುಖಂಡರಾದ ಯಶವಂತ ಅಮೀನ್, ಅಶೋಕ್ಬಾಡಿ, ಪಂಚಾಯತ್ ಸದಸ್ಯರಾದ ಸಚಿನ್ ಹರಿಶ್ಚಂದ್ರ ಅಡ್ಕ, ಅಜಿತ್ ಕುಮಾರ್, ಬೋವಿ ಸಮಾಜದ ಅಧ್ಯಕ್ಷ ಚಿದಾನಂದ ಉಚ್ಚಿಲ್, ಪ್ರಕಾಶ್ ಬಟ್ಟಪ್ಪಾಡಿ, ರೂಪೇಶ್ ಸ್ಥಳೀಯ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್