ಮಾರಣಾಂತಿಕ ರೋಗ ಮಾಹಿತಿ ತಿಳಿಹೇಳಿ


Team Udayavani, Jul 1, 2019, 1:44 PM IST

hv-tdy-4..

ಬ್ಯಾಡಗಿ: ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮಕ್ಕೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಚಾಲನೆ ನೀಡಿದರು.

ಬ್ಯಾಡಗಿ: ವೈದ್ಯಕೀಯ ಇಲಾಖೆ ಮಾರಣಾಂತಿಕ ರೋಗದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ರವಾನಿಸಬೇಕು. ಇದರಲ್ಲಿ ತಾತ್ಸಾರ ಮನೋಭಾವನೆ ತೋರದೆ ಪ್ರತಿಯೊಬ್ಬರೂ ಸಾಮೂಹಿಕ ಹೊಣೆಗಾರಿಕೆ ತೋರುವ ಮೂಲಕ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕರೆ ನೀಡಿದರು.

ಸ್ಥಳೀಯ ಎಸ್‌ಜೆಜೆಎಂ ಕರ್ನಾಟಕ ಪಬ್ಲಿಕ್‌ ಸ್ಕೂಲ್ನಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೋಬೈಲ್ ಬಳಕೆ ಹೆಚ್ಚಾದ ಪರಿಣಾಮ ಪ್ರತಿಯೊಂದು ರೋಗದ ಬಗ್ಗೆ ವಿವರಗಳು ಮತ್ತು ಅದಕ್ಕೆ ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿಗಳು ದೊರೆಯುತ್ತಿದೆ. ಅದಾಗ್ಯೂ ಕೆಲವೊಂದು ಮಾರಣಾಂತಿಕ ರೋಗಗಳ ಬಗ್ಗೆ ಜನರು ಇಂದಿಗೂ ನಿರ್ಲಕ್ಷ ್ಯ ಮನೋಭಾವನೆ ತೋರುತ್ತಿರುವುದು ವಿಪರ್ಯಾಸ ಎಂದರು.

ನಾವು ವಾಸಿಸುವ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಪುರಸಭೆ ಜತೆಗೆ ನಮ್ಮೆಲ್ಲರ ಸಹಭಾಗಿತ್ವ ಹೆಚ್ಚು ಪರಿಣಾಮಕಾರಿಯಾಗಲಿದೆ. ಮಲೇರಿಯಾ, ಡೆಂಘೀ ಸೇರಿದಂತೆ ಇನ್ನಿತರ ಮಾರಣಾಂತಿಕ ರೋಗಗಳಿಂದ ಮುಕ್ತಿ ಹೊಂದಬೇಕು. ಆರೋಗ್ಯ ಸಂರಕ್ಷಣೆ ವಿಚಾರದಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯವಾಗರಲಿದೆ ಎಂದರು.

ಮಹಾಮಾರಿ ಮಲೇರಿಯಾ, ಡೆಂಘೀ ಸೇರಿದಂತೆ ಇನ್ನಿತರ ರೋಗಗಳ ಬಗ್ಗೆ ಗ್ರಾಮಾಂತರ ಪ್ರದೇಶಗಳ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವುದರಿಂದ ಮಕ್ಕಳು ತಮ್ಮ ಪೋಷಕರಿಗೆ ಹಾಗೂ ನೆರೆ ಹೊರೆಯವರಿಗೆ ಮತ್ತು ಬಂಧುಗಳಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬಹುದಾಗಿದೆ ಎಂದರು.

ಆರೋಗ್ಯಾಧಿಕಾರಿ ಬಿ.ಆರ್‌.ಲಮಾಣಿ ಮಾತನಾಡಿ, ಸೊಳ್ಳೆಗಳನ್ನು ಉತ್ಪಾದನೆ ಮಾಡುವ ಸಿಮೆಂಟ್ ತೊಟ್ಟಿ, ಬ್ಯಾರಲ್, ಒಡೆದ ಚಿಪ್ಪು, ಮಡಕೆ, ಪ್ಲಾಸ್ಟಿಕ್‌ ಇನ್ನಾವುದೇ ತ್ಯಾಜ್ಯ ವಸ್ತುಗಳಲ್ಲಿ ತಿಳಿ ನೀರು ನಿಲ್ಲದಂತೆ ನೋಡಕೊಳ್ಳಬೇಕು. ಇಲ್ಲಾವದಲ್ಲಿ ಅವುಗಳೇ ಸೊಳ್ಳೆ ಉತ್ಪಾದಿಸುವ ತಾಣವಾಗಿ ಪರಿಣಮಿಸಲಿವೆ ಎಂದರು.

ಈ ಸಂದರ್ಭದಲ್ಲಿ ಶಂಕ್ರಣ್ಣ ಮಾತನವರ, ಸುರೇಶ ಅಸಾದಿ, ವಿರೇಂದ್ರ ಶೆಟ್ಟರ, ವಿಷ್ಣುಕಾಂತ ಬೆನ್ನೂರ, ಪುರಸಭೆ ಸದಸ್ಯರಾದ ರಾಮಣ್ಣ ಕೋಡಿಹಳ್ಳಿ, ಫಕ್ಕೀರವ್ವ ಚಲವಾದಿ, ಕಲಾವತಿ ಬಡಿಗೇರ, ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ಜೆ.ಟಿ.ಖಾನಬಸಣ್ಣನವರ, ವೈ.ಎಂ. ಹಿರಿಯಕ್ಕನವರ, ಉಪಪ್ರಾಚಾರ್ಯ ಎಸ್‌.ಬಿ.ಇಮ್ಮಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.