ಆನಂದ್ ಸಿಂಗ್ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ರಾಜೀನಾಮೆ; ಅಮೆರಿಕದಲ್ಲಿ ಸಿಎಂಗೆ ಟೆನ್ಶನ್!
Team Udayavani, Jul 1, 2019, 4:49 PM IST
ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಅಮೆರಿಕಾದಲ್ಲಿರುವ ಸಿಎಂ ಕುಮಾರಸ್ವಾಮಿ ಅಲ್ಲಿಂದಲೇ ಅತೃಪ್ತರ ಮನವೊಲಿಕೆಗೆ ಮುಂದಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಜಿಂದಾಲ್ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಗೆ ಅನ್ಯಾಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಆನಂದ್ ಸಿಂಗ್ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದರು. ಇದೀಗ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೂಡಾ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಮಾರಸ್ವಾಮಿ
ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಅಮೆರಿಕದ ನ್ಯೂಜೆರ್ಸಿಯಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತರ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಮೊಬೈಲ್ ಕರೆ ಮಾಡುವ ಮೂಲಕ ಅತೃಪ್ತರ ಮನವೊಲಿಕೆಗೆ ಮುಂದಾಗಿದ್ದಾರೆನ್ನಲಾಗಿದೆ. ಆದರೆ ಅತೃಪ್ತ ಶಾಸಕರ ಮೊಬೈಲ್ ಸ್ವಿಚ್ ಆಫ್ ಆಗಿರುವುದಾಗಿ ವರದಿ ವಿವರಿಸಿದೆ.
ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಚರ್ಚೆ:
ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಂತೆಯೇ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಡನೆ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದು, ಸರ್ಕಾರ ಉಳಿಸಿಕೊಳ್ಳುವ ಕುರಿತು ಸಮಾಲೋಚನೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್