ಬಸವಣ್ಣನ ಕಾಯಕವೇ ಕೈಲಾಸ ವಚನ ಪಾಲಿಸಿ

Team Udayavani, Jul 2, 2019, 3:00 AM IST

basavannna

ದೇವನಹಳ್ಳಿ: ಬಸವಣ್ಣ ಅವರ ಕಾಯಕವೇ ಕೈಲಾಸ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಶಿವಕುಮಾರಸ್ವಾಮಿ ವೃತ್ತದಲ್ಲಿ ತಾಲೂಕು ವೀರಶೈವ ಸಮಾಜದ ಸಂಘ ಮತ್ತು ವೀರಶೈವ ಮಹಿಳಾ ಸಂಘ ಹಾಗೂ ಅರ್ಚಕರ ಒಕ್ಕೂಟ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಉದ್ದೇಶಿತ ಶ್ರೀನಂದಿ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟೆಡ್‌ನ‌ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಸೌಹಾರ್ದ ಎನ್ನುವ ಪದದಲ್ಲಿ ಉತ್ತಮ ಅರ್ಥವಿದೆ. ಒಳ್ಳೆ ಉದ್ದೇಶವನ್ನಿಟ್ಟುಕೊಂಡು ಕೆಲಸಮಾಡಬೇಕು, ಸಂಘದ ಪ್ರತಿಯೊಬ್ಬ ಸದಸ್ಯನ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದರು.

ಸಾಲ ಸೌಲಭ್ಯ: ಬಸವಣ್ಣ ಅವರು ಹಾಕಿದ ದಾರಿಯಲ್ಲಿ ಹೋಗುತ್ತಿದ್ದೇವೆ. ಜಮ್ಮು ಕಾಶ್ಮೀರದಲ್ಲಿ ಒಬ್ಬ ಮಹಿಳೆ ಸಹಕಾರ ಸಂಘ ಮಾಡಿ ಹಲವಾರು ಜನರಿಗೆ ಸಾಲ ಸೌಲಭ್ಯ ನೀಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಹಕಾರ ಸಂಘ ಗಳು ಹೆಚ್ಚು ಆರ್ಥಿಕವಾಗಿ ಮುಂದೆ ಬಂದು ಸರ್ಕಾರಕ್ಕೆ ಸಾಲಕೊಡುವುಷ್ಟರ ಮಟ್ಟಿಗೆ ಬಂದಿದೆ. ನಮ್ಮ ರಾಜ್ಯದಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡಿದರೆ ಆರ್ಥಿಕವಾಗಿ ಮುಂದೆ ಬರಲಿದ್ದಾರೆಂದರು.

ಉನ್ನತ ಪರೀಕ್ಷೆ ಆಯ್ಕೆ ಮಾಡಿಕೊಳ್ಳಿ: ವೀರಶೈವ ಸಮಾಜದಲ್ಲಿ ಪ್ರತಿಭಾವಂತ ಮಕ್ಕಳಿದ್ದು ಐಎಎಸ್‌, ಕೆಎಎಸ್‌ ಪರೀಕ್ಷೆಗಳನ್ನು ಬರೆಯುವಂತೆ ಮಾಡಿ ಆಯ್ಕೆ ಮಾಡಬೇಕು. ಬಸವಣ್ಣ ಅವರ ವಚನಗಳನ್ನು ತಿಳಿಯಬೇಕು. ಯಾವ ಸಮಾಜದಲ್ಲಿ ಸಂಘಟನೆ, ನೀತಿ, ನಿಯಮಗಳಿರುತ್ತವೆ ಅಂತಹ ಸಮಾಜ ಎಲ್ಲಾ ರಂಗದಲ್ಲೂ ಮುಂದೆ ಬರುತ್ತದೆ ಎಂದು ತಿಳಿಸಿದರು.

ಸಮಯಕ್ಕೆ ಸಾಲ ಮರುಪಾವತಿಸಿ: ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಎಲ್ಲಾ ಹಳ್ಳಿಗಳಲ್ಲಿ 500 ಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಗಳಿದ್ದು ಶಿಸ್ತುಬದ್ಧ ಹಾಗೂ ಆರ್ಥಿಕವಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಬ್ಯಾಂಕುಗಳಲ್ಲಿ ಪುರುಷರಿಗೆ ಸಾಲ ನೀಡಲು ಹಿಂದೆ ನೋಡುತ್ತಾರೆ ಆದರೆ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಿ ಕೂಡಲೇ ಸಾಲ ಮಂಜೂರು ಮಾಡುತ್ತಾರೆ.

ಸ್ತ್ರೀಶಕ್ತಿ ಸಂಘಗಳು ಅವರು ತೆಗೆದುಕೊಂಡ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುತ್ತಾರೆ ಎಂಬ ದೃಢನಂಬಿಕೆಯಿಂದ ಸಾಲ ನೀಡುತ್ತಾರೆ. ಅದೇ ರೀತಿ ಸದಸ್ಯರು ತೆಗೆದುಕೊಳ್ಳುವ ಸಾಲವನ್ನು ಮರುಪಾವತಿಸಿದಾಗ ಬಾಂಧವ್ಯ ಹೆಚ್ಚಾಗಿ ಸಂಸ್ಥೆ ಉತ್ತಮವಾಗಿ ನಡೆಯಲಿದೆ ಎಂದರು.

ಸನ್ಮಾನ: ಇದೇ ವೇಳೆ ತಾಲೂಕಿನ ವೀರಶೈವ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನೂತನವಾಗಿ ದೇವನಹಳ್ಳಿ ಹಾಗೂ ನೆಲಮಂಗಲ ಪುರಸಭೆಗೆ ಆಯ್ಕೆಯಾದ ಸದಸ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್‌ ಅಧಿಕಾರಿ ಜ್ಯೋತಿ ಪ್ರಕಾಶ್‌ ಮಿರ್ಚಿ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ರಮೇಶ್‌, ಕಾರ್ಯದರ್ಶಿ ವಿಜಯ್‌ ಕುಮಾರ್‌, ಪುರಸಭೆ ಸದಸ್ಯರಾದ ನಾಗೇಶ್‌, ವೈ.ಸಿ.ಸತೀಶ್‌ ಕುಮಾರ್‌, ಬಿಬಿಎಂಪಿ ಘಟಕ ಅಧ್ಯಕ್ಷ ಚಂದ್ರಮೌಳಿ, ಬೆಂಗಳೂರು ಉತ್ತರ ಘಟಕ ಅಧ್ಯಕ್ಷ ತಿಂಡ್ಲು ಬಸವರಾಜ್‌, ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಸಚ್ಚಿದಾನಂದ ಮೂರ್ತಿ, ವೀರಶೈವ ಸಮಾಜದ ಉಪಾಧ್ಯಕ್ಷ ನಾಗಭೂಷಣ್‌, ಕೆ.ಸದಾಶಿವಯ್ಯ, ಮಹಿಳಾ ಘಟಕ ಅಧ್ಯಕ್ಷೆ ಉಷಾ ಮತ್ತಿತರರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.