ಬೊಲೆರೊ-ಲಾರಿ ಢಿಕ್ಕಿ: ಮೂರು ಸಾವು
ನೆಲ್ಯಾಡಿ ಸಮೀಪ ಭೀಕರ ಅಪಘಾತ
Team Udayavani, Jul 2, 2019, 4:13 AM IST
ಉಪ್ಪಿನಂಗಡಿ: ನೆಲ್ಯಾಡಿಯ ಬೆಥನಿಶಾಲೆಯ ಸಮೀಪ ಲಾರಿ ಮತ್ತು ಬೊಲೆರೊ ನಡುವೆ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸಂಭ ವಿಸಿದ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೊಲೆರೊ ಮತ್ತು ಮಂಗಳೂರಿನಿಂದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿತು. ಬೊಲೆರೊ ದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿ ಗೀಡಾಗಿದ್ದು, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೊಲೆರೊದಲ್ಲಿ ಒಟ್ಟು ನಾಲ್ವರಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟ್ರಾಫಿಕ್ ಜಾಮ್: ಕಿರು ಸೇತುವೆಯ ಮೇಲೆ ಅಪಘಾತ ಸಂಭವಿಸಿದ್ದರಿಂದ ಕೆಲವು ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ವಾಹನ ಸಂಚಾರ ಸ್ಥಗಿತಗೊಂಡಿತು.
ಘಟನ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ