ಪ್ರತಿ ಕುಟುಂಬಕ್ಕೆ ಸೂರು ಒದಗಿಸಲು ಕ್ರಮ

•ಹಿಂದುಳಿದ ಅಲೆಮಾರಿ ಜನಾಂಗ ಅಭಿವೃದ್ಧಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಬದ್ಧ: ಶಾಸಕ ರಾಜುಗೌಡ

Team Udayavani, Jul 2, 2019, 11:42 AM IST

yg-tdy-2..

ಕೆಂಭಾವಿ: ಮುದನೂರ ಗ್ರಾಮದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ) ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಅಲೆಮಾರಿ ಜನಾಂಗದವರಿಗೆ ಹಕ್ಕು ಪತ್ರ ವಿತರಿಸಿದರು.

ಕೆಂಭಾವಿ: ಹಿಂದುಳಿದ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಜನಾಂಗದ ಪ್ರತಿಯೊಂದು ಕುಟುಂಬಕ್ಕೂ ಸೂರು ಒದಗಿಸಲು ಕ್ರಮ ಕೈಗೊಂಡಿದೆ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಮುದನೂರ ಗ್ರಾಮದಲ್ಲಿ ಸೋಮವಾರ ರಾಜೀವ ಗಾಂಧಿ ವಸತಿ ನಿಗಮ ವತಿಯಿಂದ ಅಲೆಮಾರಿ ಜನಾಂಗದ ಕುಟುಂಬ ಸದಸ್ಯರಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು, ಯಾವುದೇ ಯೋಜನೆಗಳು ಸಾಮಾನ್ಯ ಜನತೆಗೆ ಕೈ ಸೇರಬೇಕಾದರೆ ಯೋಜನೆಯ ಸಂಪೂರ್ಣ ಲಾಭ ಅವರಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಅಲೆಮಾರಿ ಜನಾಂಗದ ಕುಟುಂಬಕ್ಕೆ ಈಗ ಹಕ್ಕು ಪತ್ರ ವಿತರಿಸಿದ್ದು, ಮುಂಬರುವ ದಿನಗಳಲ್ಲಿ ಅವರಿಗೆ ಸರ್ಕಾರದ ವಿವಿಧ ಯೋಜನೆಯ ಮೂಲಕ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಇತಿಹಾಸ ಪ್ರಸಿದ್ಧ ದೇವರ ದಾಸೀಮಯ್ಯನವರ ಜನ್ಮಸ್ಥಳವಾದ ಮುದನೂರ ಗ್ರಾಮದ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದು, ಎಚ್ಕೆಆರ್‌ಡಿಬಿ ಅನುದಾನದಲ್ಲಿ ಶೀಘ್ರ ವಿವಿಧ ಕೆಲಸಗಳಿಗೆ ಚಾಲನೆ ನೀಡಲಾಗುವುದು, ಅರ್ಧಕ್ಕೆ ನಿಂತಿರುವ ದಾಸೀಮಯ್ಯನವರ ಕಲ್ಯಾಣ ಮಂಟಪದ ಕಟ್ಟಡ ಕಾಮಗಾರಿಗೆ ಹಣ ಒದಗಿಸಿ ಅದನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದ ಅವರು, ಮುದನೂರ ಕ್ರಾಸ್‌ದಿಂದ ಮುದನೂರ ಗ್ರಾಮದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಿಸಿ ರಸ್ತೆ ನಿರ್ಮಾಣ ಮಾಡಲು ಪ್ರಥಮ ಹಂತವಾಗಿ ಶೀಘ್ರ 1 ಕೊಟಿ ರೂ. ಬಿಡುಗಡೆಗೊಳಿಸಲಾಗುವುದು ಎಂದರು.

ನಂತರ ಸುಮಾರು 40 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಜಿಪಂ ಸದಸ್ಯ ಬಸನಗೌಡ ಯಡಿಯಾಪೂರ ಮಾತನಾಡಿ, ನನ್ನ ಅರಕೇರಾ (ಜೆ) ಜಿಪಂ ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲದೆ ಜನತೆಗೆ ತೀವ್ರ ತೊಂದರೆಯಾಗಿದೆ. ಮುದನೂರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ತಹಶೀಲ್ದಾರ್‌ ಶ್ರೀಧರ ಮುಂದಲಮನಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಎಚ್. ಸಿ. ಪಾಟೀಲ, ತಾಪಂ ಸದಸ್ಯರಾದ ವಿಜಯರೆಡ್ಡಿ ಚೌದ್ರಿ, ತಿರುಪತಿ, ಭೀಮಣ್ಣ ಮೇಟಿ, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಯಮನಸಿಂಗ್‌, ಭೀಮರಾಯ ಇದ್ದರು. ಗ್ರಾಮ ಲೆಕ್ಕಿಗ ಪರಶುರಾಮ ಕೆಂಭಾವಿ ನಿರೂಪಿಸಿದರು. ಬಸವರಾಜ ಬಿರಾದಾರ ಸ್ವಾಗತಿಸಿದರು.

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.