36 ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಆದೇಶ: ತಿಮ್ಮಾಪುರ

Team Udayavani, Jul 3, 2019, 3:05 AM IST

36kharkha

ಬಾಗಲಕೋಟೆ: “ಕಬ್ಬು ಬಾಕಿ ಹಣ ಕೊಡುವಂತೆ ಸರ್ಕಾರ ವಿಧಿಸಿದ್ದ ಗಡುವು ಮುಗಿದರೂ ರಾಜ್ಯದ 36 ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಬಾಕಿ ಕೊಟ್ಟಿಲ್ಲ. ಅಂತಹ ಕಾರ್ಖಾನೆಗಳ ಸಕ್ಕರೆ ಗೋದಾಮು ಸೀಜ್‌ ಮಾಡಲು ಆದೇಶಿಸಿದ್ದು, ಸಕ್ಕರೆ ಹರಾಜು ಹಾಕಿ ರೈತರ ಬಾಕಿ ಕೊಡಿಸಲಾಗುವುದು’ ಎಂದು ಸಕ್ಕರೆ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ., “ರಾಜ್ಯದಲ್ಲಿ ಒಟ್ಟು 67 ಸಕ್ಕರೆ ಕಾರ್ಖಾನೆಗಳಿದ್ದು, 31 ಕಾರ್ಖಾನೆಗಳು ಶೇ.100 ಎಫ್‌ಆರ್‌ಪಿ ಅನ್ವಯ ಪೂರ್ಣ ಬಾಕಿ ಕೊಟ್ಟಿವೆ. 31 ಕಾರ್ಖಾನೆಗಳು ಶೇ.75ಕ್ಕಿಂತ ಹೆಚ್ಚು ಹಣ ನೀಡಿವೆ. 5 ಕಾರ್ಖಾನೆಗಳು ಶೇ.75ಕ್ಕಿಂತ ಕಡಿಮೆ ಬಾಕಿ ಕೊಟ್ಟಿವೆ. ಹೀಗಾಗಿ 36 ಕಾರ್ಖಾನೆಗಳ ಸಕ್ಕರೆ ಜಪ್ತಿ ಮಾಡಿ, ರೈತರ ಬಾಕಿ ಕೊಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ’ ಎಂದರು.

ರಾಜ್ಯದಲ್ಲಿ ಪ್ರತಿ ವರ್ಷ ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ಮಧ್ಯೆ ಸಮಸ್ಯೆ ನಿರಂತರವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೆಂಗಳೂರಿನಲ್ಲಿ ಬುಧವಾರ(ಜು.3) ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಯಲಿದೆ. ಕಬ್ಬು ಕಟಾವು ಮತ್ತು ಸಾರಿಗೆ ವೆಚ್ಚ (ಎಚ್‌ಎನ್‌ಟಿ) ಕಡಿತ ಮಾಡುವ ಕುರಿತು ಹಲವು ದೂರುಗಳಿದ್ದು, ಇದಕ್ಕೆ ಸ್ಪಷ್ಟ ನಿಯಮಾವಳಿ ರೂಪಿಸಲಾಗುವುದು. ಅದಕ್ಕೂ ಮುಂಚೆ ಕಬ್ಬು ಬೆಳೆಗಾರರಿಂದ ಸಲಹೆ ಪಡೆದಿದ್ದೇನೆ ಎಂದರು.

ಮಹಾರಾಷ್ಟ್ರಕ್ಕೆ ತಂಡ: ರಾಜ್ಯದ ಕಬ್ಬು ಬೆಳೆಗಾರರಿಗೆ ಮಹಾರಾಷ್ಟ್ರ ಮಾದರಿ ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚ ನಿಗದಿ ಮಾಡುವ ನಿಟ್ಟಿನಲ್ಲಿ ಮಹಾರಾಷ್ಟ್ರಕ್ಕೆ ಒಂದು ತಂಡ ಕಳುಹಿಸಲಾಗುವುದು. ಆ ತಂಡ ನೀಡುವ ವರದಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಸದ್ಯ ಕಬ್ಬು ಕಟಾವಿಗಿಂತ ಸಾಗಣೆ ವೆಚ್ಚವೇ ಹೆಚ್ಚಿನ ಪ್ರಮಾಣದಲ್ಲಿ ಕಾರ್ಖಾನೆಗಳು ಹಾಕುತ್ತಿವೆ. ಒಂದೊಂದು ಕಾರ್ಖಾನೆ ಒಂದು ರೀತಿಯ ದರ ನಿಗದಿ ಮಾಡಿವೆ. ಆಯಾ ಕಾರ್ಖಾನೆಗಳಿಗೆ ಕಬ್ಬು ಪ್ರದೇಶ ನಿಗದಿ ಇದ್ದರೂ, ಹೆಚ್ಚಿನ ಸಾಗಾಟ ವೆಚ್ಚ ಹಾಕುತ್ತಿರುವುದು ಗಮನಕ್ಕೆ ಬಂದಿದೆ ಎಂದರು.

ಕೇಂದ್ರಕ್ಕೆ ನಿಯೋಗ: ರಾಜ್ಯದ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಕೆಲವು ಬೇಡಿಕೆ ಈಡೇರಿಕೆಗೆ ರಾಜ್ಯದ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ತೆಗೆದುಕೊಂಡು ಹೋಗಲು ಚಿಂತನೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. ಕಾರ್ಖಾನೆಯವರು, ಸಕ್ಕರೆ ರಫ್ತು ಸಹಾಯಧನ ಬಂದ ಬಳಿಕ ಬಾಕಿ ಕೊಡುತ್ತೇವೆ ಎಂದು ಮುಚ್ಚಳಿಕೆ ಪತ್ರ ಕೊಡುತ್ತಿದ್ದಾರೆ. ಕೆಲವು ಕಾರ್ಖಾನೆಗಳು ಉಳಿಸಿಕೊಂಡ ಬಾಕಿಗಿಂತ ರಫ್ತು ಸಹಾಯಧನವೇ ಹೆಚ್ಚಿಗೆ ಬರಬೇಕಿದೆ.

ಕೇಂದ್ರ ಸರ್ಕಾರ ಕೂಡಲೇ ರಫ್ತು ಸಹಾಯಧನ ಬಿಡುಗಡೆ ಮಾಡಬೇಕು ಎಂದರು. ಬ್ರೆಜಿಲ್‌ ದೇಶದ ಮಾದರಿ ನಮ್ಮ ದೇಶದಲ್ಲೂ ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ನೆರವಿಗೆ ಬರಲು ಪೆಟ್ರೋಲ್‌ನಲ್ಲಿ ಇಥೆನಾಲ್‌ ಬಳಕೆಗೆ ಅವಕಾಶ ಕೊಡಬೇಕು. ಇದರಿಂದ ಕಾರ್ಖಾನೆಗಳಿಗೂ ಲಾಭವಾಗುವ ಜತೆಗೆ ಸಕ್ಕರೆ ಉದ್ಯಮವೂ ಬಲಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಕೇಂದ್ರಕ್ಕೆ ನಿಯೋಗ ಹೋದಾಗ ಲಿಖೀತ ರೂಪದ ಮನವರಿಕೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.