ಮಳೆಯಿಲ್ಲದೆ ರೈತರಿಗೆ ಮತ್ತೆ ಸಂಕಷ್ಟ


Team Udayavani, Jul 4, 2019, 3:00 AM IST

maleillade

ಗುಂಡ್ಲುಪೇಟೆ: ಕಳೆದ ಹದಿನೈದು ದಿನಗಳಿಂದ ಮಳೆ ಬೀಳದ ಪರಿಣಾಮ ತಾಲೂಕಿನ ಬಹುತೇಕ ಭಾಗಗಳಲ್ಲಿ ಬೆಳೆದಿರುವ ಪೈರುಗಳು ಒಣಗುತ್ತಿದೆ. ಇನ್ನೂ ಕೆಲವು ದಿನ ಮಳೆ ಬೀಳದಿದ್ದರೆ ಎಲ್ಲಾ ಬೆಳೆಗಳು ನಾಶವಾಗುವ ಭೀತಿ ರೈತರಲ್ಲಿ ಎದುರಾಗಿದೆ.

ಹೌದು, ಪೂರ್ವಮುಂಗಾರಿನಲ್ಲಿ ಉತ್ತಮ ಮಳೆಬಿದ್ದ ಪರಿಣಾಮ ತಾಲೂಕಿನಾದ್ಯಂತ ಎಲ್ಲಾ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆಕಾರ್ಯ ಮಾಡಿದ್ದರು. ಎಲ್ಲೆಡೆ ಹಸಿರು ಕಂಗೊಳಿಸುತ್ತಿತ್ತು. ಆದರೀಗ ಮಳೆಯ ಕೊರತೆಯಿಂದ ಬೆಳೆಗಳು ಬಾಡುತ್ತಿರುವುದು ರೈತರಲ್ಲಿ ಆತಂಕವುಂಟು ಮಾಡಿದೆ. ಸಾವಿರಾರು ರೂ.ಗಳನ್ನು ಕೊಟ್ಟು ಖರೀದಿಸಿ ತಂದ ಬಿತ್ತನೆ ಬೀಜಗಳನ್ನು ಭೂಮಿಗೆ ಹಾಕಿ ಆಕಾಶ ನೋಡುತ್ತಿರುವ ರೈತರ ಸಂಕಟ ಹೇಳತೀರದಾಗಿದೆ.

ಸೂರ್ಯಕಾಂತಿ: ತಾಲೂಕಿನ ಹಂಗಳ ಹೋಬಳಿಯಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚಿನ ಮಳೆಬಿದ್ದಿದೆ. ಅತಿ ಕಡಿಮೆ ಮಳೆಬಿದ್ದಿರುವ ಬೇಗೂರು ಹೋಬಳಿಯಲ್ಲಿ ರೈತರು ಈ ಬಾರಿ ಹತ್ತಿಗಿಂತ ಹೆಚ್ಚಾಗಿ ಸೂರ್ಯಕಾಂತಿಯನ್ನೇ ಬಿತ್ತನೆ ಮಾಡಿದ್ದಾರೆ.

ಇನ್ನು ತೆರಕಣಾಂಬಿ ಹಾಗೂ ಕಸಬಾ ಹೋಬಳಿಗಳಲ್ಲಿಯೂ ಮಳೆಯ ಕೊರತೆಯಾಗಿದ್ದು ಈಗಾಗಲೇ ಬೆಳೆದಿರುವ ಸೂರ್ಯಕಾಂತಿ, ಮುಸುಕಿನಜೋಳ, ಜೋಳ ಮುಂತಾದ ಬೆಳೆಗಳು ದಿನೇ ದಿನೆ ಬಿಸಿಲಿಗೆ ಒಣಗುತ್ತಿವೆ. ಸೂರ್ಯಕಾಂತಿ ಗಿಡಗಳು ಎತ್ತರಕ್ಕೆ ಬೆಳೆಯಲು ಸಾಧ್ಯವಾಗದೆ ಗೇಣುದ್ದಕ್ಕೆ ಹೂ ಬಿಟ್ಟು ಬಾಡುತ್ತಿವೆ.

ಮೇವಿಗೂ ಕೊರತೆ: ಆಳೆತ್ತರಕ್ಕೆ ಬೆಳೆಯಬೇಕಾದ ಜೋಳದ ಪೈರುಗಳು ನೆಲದಲ್ಲಿಯೇ ಮುದುಡಿಕೊಳ್ಳುತ್ತಿದೆ. ಇದರಿಂದಾಗಿ ಕೆಲವೆಡೆ ಈಗಾಗಲೇ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.

ತಾಲೂಕಿನಾದ್ಯಂತ ಮಳೆ ಬಿದ್ದು 15 ದಿನಗಳ ಮೇಲಾಗಿದ್ದು ಮೋಡ ಮುಸುಕಿದ ವಾತಾವರಣ ಗಾಳಿಗೆ ಭೂಮಿಯಲ್ಲಿನ ತೇವಾಂಶ ಆರಿ ಹೋಗುತ್ತಿದೆ. ಬಿಸಿಲು ಹೆಚ್ಚಾಗಿರುವ ಹಿನ್ನೆಲೆ ಎಲ್ಲಾ ಬೆಳೆಗಳೂ ಒಣಗುತ್ತಿದ್ದು ಇನ್ನೂ ಮೂರು ನಾಲ್ಕು ದಿನಗಳ ಕಾಲ ಮಳೆ ಬೀಳದಿದ್ದರೆ ಎಲ್ಲಾ ಬೆಳೆಗಳೂ ನಾಶವಾಗುವ ಭೀತಿ ಎದುರಾಗಿದೆ.

32 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ: ಗುಂಡ್ಲುಪೇಟೆ ತಾಲೂಕಿನಲ್ಲಿ 32 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಕಾರ್ಯ ಮಾಡಲಾಗಿದೆ. ಬೇಗೂರಿನಲ್ಲಿ ಸಾಮಾನ್ಯವಾಗಿ 7.5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡುತ್ತಿದ್ದರೂ, ಈ ಬಾರಿ ಮಳೆಯ ಕೊರತೆಯಿಂದ ಕೇವಲ 2.5 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಬಿತ್ತನೆ ಕಾರ್ಯ ಸೀಮಿತವಾಗಿದೆ.

10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಜೋಳ, 13 ಸಾವಿರದ 738 ಹೆಕ್ಟೇರ್‌ ಸೂರ್ಯಕಾಂತಿ, 6 ಸಾವಿರ ಹೆಕ್ಟೇರ್‌ ನೆಲಗಡಲೆ ಇನ್ನುಳಿದ ಪ್ರದೇಶಗಳಲ್ಲಿ ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡಲಾಗಿದೆ.

ಮಳೆ ಪ್ರಮಾಣ ಇಳಿಮುಖ: ಮೇ ಅಂತ್ಯದವರೆಗೆ ಹಂಗಳ ಹೋಬಳಿಯಲ್ಲಿ ವಾಡಿಕೆ 245 ಮಿಮಿ ಮಳೆ ಬಿದ್ದರೆ, ಈ ಬಾರಿ 255 ಮಿಮಿ ಆಗಿದೆ. ಬೇಗೂರಿನಲ್ಲಿ 230ಕ್ಕೆ 178 ಮಿಮಿ ಮಾತ್ರ ಬಿದ್ದಿದೆ. ಜೂನ್‌ ತಿಂಗಳಿನಲ್ಲಿಯೂ ಹಂಗಳ 278ಕ್ಕೆ 275 ಮಿಮಿ ಆಗಿದ್ದರೆ ಬೇಗೂರಿನಲ್ಲಿ 264ಕ್ಕೆ 201 ಮಿಮಿ ಮಾತ್ರ ಬಿದ್ದಿದ್ದು ತೀವ್ರ ಕೊರತೆ ಎದುರಾಗಿದೆ. ಕಸಬಾ ಹಾಗೂ ತೆರಕಣಾಂಬಿ ಹೋಬಳಿಯಲ್ಲಿಯೂ ಮಳೆಯ ಪ್ರಮಾಣ ಇಳಿಮುಖವಾಗಿದೆ.

ಈ ವರ್ಷ ಪ್ರಾರಂಭದಲ್ಲಿ ಉತ್ತಮ ಮಳೆ ಬಿದ್ದರೂ ಬಿತ್ತನೆ ಕಾರ್ಯ ಮುಗಿದ ನಂತರ ಕೈಕೊಟ್ಟಿರುವುದು ತಾಲೂಕಿನ ರೈತರಲ್ಲಿ ಆತಂಕ ತಂದಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಲಿದೆ. ಕೃಷಿ ಕಾರ್ಮಿಕರು ಮತ್ತೆ ನೆರೆರಾಜ್ಯಗಳಿಗೆ ವಲಸೆ ತೆರಳಬೇಕಾಗುತ್ತದೆ. ಇನ್ನಾದರೂ ನದಿಮೂಲದಿಂದ ಕೆರೆಗಳಿಗೆ ನೀರು ತರುವ ಕೆಲಸವಾಗಬೇಕಿದೆ.
-ಕರಬೂರು ಮಂಜುನಾಥ್‌, ರೈತ ಮುಖಂಡ

ಇಲಾಖೆಯು ಮಳೆಯ ಕೊರತೆಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಇನ್ನೂ ಮೂರು ನಾಲ್ಕು ದಿನಗಳು ಮಳೆ ಬೀಳದಿದ್ದರೆ ರೈತರು ತೀವ್ರ ನಷ್ಟ ಎದುರಿಸಬೇಕಾಗುತ್ತದೆ. ರೈತರು ಬೆಳೆವಿಮೆ ಮಾಡಲು ಅವಕಾಶವಿದೆ. ಎಲ್ಲಾ ರೈತರೂ ತಮ್ಮ ಬೆಳೆಗಳಿಗೆ ವಿಮಾ ರಕ್ಷಣೆ ಪಡೆಯುವ ಮೂಲಕ ಆಗುವ ನಷ್ಟ ತಪ್ಪಿಸಬೇಕಿದೆ.
-ವೆಂಕಟೇಶ್‌, ಸಹಾಯಕ ಕೃಷಿ ನಿರ್ದೇಶಕ

* ಸೋಮಶೇಖರ್‌

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.