ಅನ್ನದಾತರ ಸಮಸ್ಯೆಗೆ ಸ್ಪಂದಿಸಿ

ರೈತರ ಹಿತ ಕಡೆಗಣಿಸುತ್ತಿರುವ ಸರ್ಕಾರದ ವಿರುದ್ಧ ಮಠಾಧೀಶರ ಆಕ್ರೋಶ

Team Udayavani, Jul 6, 2019, 1:23 PM IST

06-July-20

ಬಸವನಬಾಗೇವಾಡಿ: ರೈತ ಸಂಘದ 10ನೇ ದಿನದ ಸತ್ಯಾಗ್ರಹದಲ್ಲಿ ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು ಮಾತನಾಡಿದರು.

ಬಸವನಬಾಗೇವಾಡಿ: ರೈತರು ದೇಶದ ಬೆನ್ನೆಲುಬು ಎಂದು ಜನಪ್ರತಿನಿಧಿಗಳು ಆಡುವ ಮಾತು ಬರಿ ಭಾಷಣಕ್ಕೆ ಸಿಮೀತವಾಗಿದ್ದು ಆತ್ಮಸಾಕ್ಷಿಯಾಗಿ ರೈತರ ಮೇಲೆ ಕಾಳಜಿ ಇದ್ದರೆ ತಕ್ಷಣ ಬಸವನಬಾಗೇವಾಡಿ ತಾಲೂಕನ್ನು ಬರಗಾಲ ಪಟ್ಟಿಗೆ ಸೇರಿಸಿ ರೈತರಿಗೆ ಪರಿಹಾರ ಹಣ ನೀಡಬೇಕೆಂದು ಮುತ್ತಗಿಯ ವೀರ ರುದ್ರಮುನಿ ಶಿವಾಚಾರ್ಯ ಶ್ರೀಗಳು ಸರಕಾರಕ್ಕೆ ಒತ್ತಾಯಿಸಿದರು.

ಶುಕ್ರವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದೆ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಕೃಷಿಕ ಸಮಾಜ, ಮಠಾಧೀಶರ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ನಡೆದ 10ನೇ ದಿನದ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಟ್ಟಣದ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು ಮಾತನಾಡಿ, ಹಸಿರು ಶಾಲು ಹೊತ್ತುಕೊಂಡು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಹಿತವನ್ನು ಕಡೆಗಣಿಸಿ ರಾಜಕಾರಣ ಮಾಡುತ್ತಿರುವುದು ಖಂಡನೀಯ ಹಾಗೂ ನೋವಿನ ಸಂಗತಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿ ರೈತರಿಗೆ ನ್ಯಾಯ ಒದಗಿಸಬೇಕು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಹೇಳಿದರು. ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿ, ಜಿಲ್ಲೆಯ ಮೂವರು ಪ್ರಭಾವಿ ಸಚಿವರು ಸರಕಾರಕ್ಕೆ ಮನವರಿಕೆ ಮಾಡಿ ಶೀಘ್ರವೇ ತಾಲೂಕನ್ನು ಬರಗಾಲ ಪಟ್ಟಿಗೆ ಸೇರಿಸಿ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರದ ದ್ವಿಮುಖ ನೀತಿಯಿಂದ ಸಮಗ್ರ ರೈತ ಸಮುದಾಯಕ್ಕೆ ಅನ್ಯಾಯವಾಗಿದೆ. ರೈತರ ಪರ ಹಮ್ಮಿಕೊಂಡಿರುವ ಹೋರಾಟಕ್ಕೆ ರೈತರು ಸೇರಿದಂತೆ ಎಲ್ಲ ಜನರೂ ಬೆಂಬಲಿಸಬೇಕೆಂದು ಕೋರಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ಬಿ.ಎಲ್. ಪಾಟೀಲ, ಕಾರ್ಯದರ್ಶಿ ವೆಂಕಣ್ಣಗೌಡ ಪಾಟೀಲ, ಈರಣ್ಣ ಸಜ್ಜನ ಧರಣಿಯನ್ನುದ್ದೇಶಿಸಿ ಮಾತನಾಡಿದರು. ಸತ್ಯಾಗ್ರಹದಲ್ಲಿ ಬಾಬು ನಿಕ್ಕಂ, ಸಂತೋಷ ಕೂಡಗಿ, ಬಿ.ಎಸ್‌. ಹೊರ್ತಿ, ಶಿವಪ್ಪ ಮಂಗೊಂಡ, ಯಲ್ಲಪ್ಪ ಭಜಂತ್ರಿ, ಶಿವಣ್ಣ ಬಾಗೇವಾಡಿ, ನಿಂಗಣ್ಣ ಶಿವಯೋಗಿ, ಮಾಮಲ್ಲಪ್ಪ ಜೋಗಿ, ರೇವಣೆಪ್ಪ ಸಜ್ಜನ, ರಾವುತಪ್ಪ ಹಂಡಿ, ಈರಣ್ಣ ದೇವರಗುಡಿ, ಗುರಪ್ಪ ಉಣ್ಣಿಭಾವಿ, ಸಿದ್ರಾಮ ಅಂಗಡಗೇರಿ, ಮಾಚಪ್ಪ ಹೊರ್ತಿ, ಶಾಂತಗೌಡ ಬಿರಾದಾರ, ಹನುಮಂತ ತೋಟದ, ರಾಜು ಇಂಡಿ, ಅವಪ್ಪ ತಳ್ಳೋಳ್ಳಿ, ಭೀಮಪ್ಪ ಕುಂಬಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.