ಕಿಸಾನ್‌ ಸಮ್ಮಾನಗೆ 1.30 ಲಕ್ಷ ರೈತರ ನೋಂದಣಿ

•ಇಲ್ಲಿವರೆಗೆ 1.82 ಲಕ್ಷ ರೈತರಿಂದ ಮಾಹಿತಿ ಸಂಗ್ರಹ •9000 ರೈತರಿಗೆ ಮೊದಲ ಕಂತಿನ ಹಣ ಜಮಾ

Team Udayavani, Jul 9, 2019, 8:38 AM IST

gadaga-tdy-1..

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಪೋಸ್ಟರ್‌.

ಗದಗ: ಕೇಂದ್ರ ಸರಕಾರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ಪರಿಷ್ಕೃತ ಯೋಜನೆಯಿಂದ ಜಿಲ್ಲೆಯಲ್ಲಿ ಫಲಾನುಭವಿಗಳ ಸಂಖ್ಯೆ ದುಪ್ಪಟ್ಟಾಗಿದೆ. ಯೋಜನೆಗೆ ರೈತರಿಂದ ದಾಖಲೆ ಸಂಗ್ರಹ ಪ್ರಗತಿ ಶೇ.72ರಷ್ಟಾಗಿದ್ದು, ಈಗಾಗಲೇ ಮೊದಲ ಕಂತಿನಲ್ಲಿ 9 ಸಾವಿರ ರೈತರ ಖಾತೆಗಳಿಗೆ 2 ಸಾವಿರ ರೂ. ಜಮಾ ಆಗಿದೆ. ಇನ್ನುಳಿದವರಿಗೆ ಕೆಲವೇ ದಿನಗಳಲ್ಲಿ ಹಣ ಬಿಡುಗಡೆಯಾಗಲಿದೆ.

ಕೇಂದ್ರ ಸರಕಾರ ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ವಾರ್ಷಿಕ ಮೂರು ಕಂತುಗಳಲ್ಲಿ ಒಟ್ಟು 6 ಸಾವಿರ ರೂ. ಜಮೆ ಮಾಡುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿತ್ತು. ಲೋಕಸಭಾ ಸಾರ್ವತ್ರಿಕಾ ಚುನಾವಣಾ ಹೊಸ್ತಿಲಲ್ಲಿ ಕೇಂದ್ರ ಸರಕಾರ ಘೊಷಿಸಿದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಭಾರೀ ಚರ್ಚೆಗೆ ಗ್ರಾಸ ವಾಗಿತ್ತು. ಯೋಜನೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದಾಗಲೇ ಲೋಕಸಭೆ ಚುನಾವಣೆ ಘೋಷಣೆಯಾಗಿತ್ತು. ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನೋಂದಣಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ವೇಳೆಗೆ ಜಿಲ್ಲೆಯಲ್ಲಿ ನೋಂದಾಯಿಸಿಕೊಂಡಿದ್ದ 18 ಸಾವಿರ ರೈತರಲ್ಲಿ 9 ಸಾವಿರ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ ತಲಾ 2 ಸಾವಿರ ರೂ. ಜಮಾ ಆಗಿದೆ.

ಬಳಿಕ ನಡೆದ 17ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವೇ ಮತ್ತೆ ಗದ್ದುಗೆ ಏರಿದ್ದು, ಮೋದಿ ಸರಕಾರದ ಮಹತ್ವಾಕಾಂಕ್ಷಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅನುಷ್ಠಾನವನ್ನು ಮತ್ತಷ್ಟು ಚುರುಕುಗೊಳಿಸಿದೆ. ಚುನಾವಣಾ ಪೂರ್ವದಲ್ಲಿ ಈ ಯೋಜನೆಯನ್ನು ಸಣ್ಣ ಹಿಡುವಳಿದಾರರಿಗೆ ಸೀಮಿತಗೊಳಿಸಲಾಗಿತ್ತು. ಇದೀಗ ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರು ಹಾಗೂ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರನ್ನು ಹೊರತಾಗಿ ಇನ್ನುಳಿದ ಎಲ್ಲ ರೈತರಿಗೆ ವಿಸ್ತರಿಸಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸುಮಾರು 1.80 ಲಕ್ಷ ರೈತರ ಪೈಕಿ ಸುಮಾರು 1.50 ಲಕ್ಷ ರೈತರಿಗೆ ಇದರ ಲಾಭವಾಗಬಹುದು ಎನ್ನುತ್ತಾರೆ ಕೃಷಿ ಇಲಾಖೆಗಳ ಅಧಿಕಾರಿಗಳು.

ಅರ್ಜಿ ಸಲ್ಲಿಕೆ ಕಡ್ಡಾಯ: ಪ್ರಧಾನಮಂತ್ರಿ ಕಿಸಾನ್‌ ನಿಧಿ ಸಮ್ಮಾನ್‌ ಯೋಜನೆ ಪ್ರಯೋಜನ ಪಡೆಯಲು ರೈತರು ಅರ್ಜಿ ಸಲ್ಲಿಸಲೇಬೇಕು. ಅರ್ಜಿಯೊಂದಿಗೆ ಉತಾರ(ಪಹಣಿ), ಆಧಾರ್‌ ಕಾರ್ಡ್‌ ಪ್ರತಿ ಸಲ್ಲಿಸುವುದು ಕಡ್ಡಾಯ. ಆದರೆ, ಯೋಜನೆಗೆ ಅರ್ಹರಾಗಿದ್ದರೂ, ಆಧಾರ್‌ ತಿದ್ದುಪಡಿ, ಹೊಸ ಆಧಾರ್‌ ಕಾರ್ಡ್‌ ನೋಂದಣಿಗಾಗಿ ಜನರು ಆಧಾರ್‌ ನೋಂದಣಿ ಕೇಂದ್ರಗಳಿಗೆ ಪ್ರದಕ್ಷಿಣೆ ಹಾಕುವಂತಾಗಿದೆ. ಸರ್ವರ್‌ ಸಮಸ್ಯೆ, ವಿವಿಧ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಆಧಾರ್‌ ನೋಂದಣಿ ಸ್ಥಗಿತಗೊಳಿಸಿದ್ದರಿಂದ ಸಾರ್ವಜನಿಕರು ಪರದಾ ಡುವಂತಾಗಿದೆ. ಇನ್ನುಳಿದಂತೆ ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ರೈತರಿಗೆ ಜುಲೈ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ‘ಪ್ರಧಾನಮಂತ್ರಿ ರೈತ ಸಮ್ಮಾನ್‌ ನಿಧಿ’ ಯೋಜನೆ ಮೊದಲ ಕಂತಿನ ಹಣ ಜಮಾ ಆಗಲಿದೆ ಎನ್ನಲಾಗಿದೆ.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.