ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ


Team Udayavani, Jul 10, 2019, 3:00 AM IST

Udayavani Kannada Newspaper

ಬೆಂಗಳೂರು: ಬಿಜೆಪಿಯವರು ದೇಶಾದ್ಯಂತ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೇ.38, ಬಿಜೆಪಿಗೆ ಶೆ.37 ಹಾಗೂ ಜೆಡಿಎಸ್‌ಗೆ ಶೇ.19 ಮತಗಳು ಬಂದಿವೆ. ಎರಡೂ ಪಕ್ಷಗಳ ಮತಗಳು ಹಾಗೂ ಸಂಖ್ಯಾಬಲ ಬಿಜೆಪಿಗಿಂತ ಹೆಚ್ಚಿದೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಕಾರಣಕ್ಕೆ ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕಲ್ಪಿಸಿದ್ದರು. ಆದರೆ, ಯಡಿಯೂರಪ್ಪವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ವಿಫ‌ಲರಾದರು. ಆ ನಂತರ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಒಂದು ವರ್ಷದಿಂದ ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಐದು ಬಾರಿ ಪ್ರಯತ್ನ ವಿಫ‌ಲವಾಗಿದ್ದಾರೆ. ಈಗ ಮತ್ತೆ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ರಾಜೀನಾಮೆ ನೀಡಿದವರು ಈಗಲೂ ಸಚಿವರೇ: ಸರ್ಕಾರ ಉಳಿಸಿಕೊಳ್ಳಲು ಈಗಾಗಲೇ ಡಿಸಿಎಂ ಪರಮೇಶ್ವರ್‌ ಸೇರಿ 21 ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅವರೆಲ್ಲರೂ ಈಗಲೂ ಸಚಿವರಾಗಿದ್ದಾರೆಂದು ಸಿದ್ದರಾಮಯ್ಯ ಹೇಳಿದರು. ಸಚಿವರು ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಸಲ್ಲಿಸಿಲ್ಲ. ಹೀಗಾಗಿ ಅವರಿನ್ನೂ ಸಚಿವರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಯಾರನ್ನು ಉಳಿಸಿಕೊಳ್ಳಬೇಕು ಯಾರನ್ನು ಬಿಡಬೇಕು ಎಂದು ತೀರ್ಮಾನ ಮಾಡಿ, ಮುಖ್ಯಮಂತ್ರಿಗೆ ಕಳುಹಿಸಿ ಕೊಡುತ್ತಾರೆ ಎಂದರು.

ರಾಮಲಿಂಗಾ ರೆಡ್ಡಿ ಬಗ್ಗೆ ಮೃದು ಧೋರಣೆ: ಪಕ್ಷದ ಹಿರಿಯ ನಾಯಕ ಹಾಗೂ ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾ ರೆಡ್ಡಿ ಬಗ್ಗೆ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ಅನುಸರಿಸಲು ತೀರ್ಮಾನಿಸಿದ್ದಾರೆ. ರಾಜೀನಾಮೆ ನೀಡಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರೂ, ಅವರ ವಿರುದ್ಧ ಸ್ಪೀಕರ್‌ಗೆ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೇ ಅವರ ವಿರುದ್ಧ ಕ್ರಮಕ್ಕೆ ಮುಂದಾದರೆ, ಈಗಾಗಲೇ ಮುಂಬೈಗೆ ತೆರಳಿರುವ ಬೆಂಗಳೂರಿನ ಶಾಸಕರನ್ನು ವಾಪಸ್‌ ಕರೆಸಲು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಅವರ ಮನವೊಲಿಕೆ ಪ್ರಯತ್ನ ನಡೆಸಿ ಪಕ್ಷದಲ್ಲಿ ಉಳಿಸಿಕೊಂಡರೆ, ಬೆಂಗಳೂರಿನ ನಾಲ್ವರು ಶಾಸಕರೂ ವಾಪಸ್‌ ಬರುತ್ತಾರೆ ಎನ್ನವ ವಿಶ್ವಾಸವನ್ನು ಕಾಂಗ್ರೆಸ್‌ ನಾಯಕರು ಹೊಂದಿದ್ದಾರೆ.

ಸರ್ಕಾರ ಉಳಿಯುವ ಭರವಸೆ ಕಡಿಮೆ?: ಹೇಗಾದರೂ ಮಾಡಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಎಲ್ಲ ರೀತಿಯ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್‌ ನಾಯಕರು ಸದ್ಯದ ಪರಿಸ್ಥಿತಿಯಲ್ಲಿ ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ವಿಶ್ವಾಸ ಹೊಂದಿಲ್ಲ. ಈಗಾಗಲೇ ಪಕ್ಷದ 11 ಜನ ಶಾಸಕರು ರಾಜೀನಾಮೆ ನೀಡಿದ್ದು, ಪ್ರತಿ ದಿನ ಇನ್ನಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವುದಿಂದ ಸರ್ಕಾರ ಉಳಿಯುವ ಬಗ್ಗೆ ಕಾಂಗ್ರೆಸ್‌ನ ನಾಯಕರಲ್ಲಿ ಭರವಸೆ ಇಲ್ಲ ಎನ್ನಲಾಗುತ್ತಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಅದೇ ರೀತಿಯ ವಾತಾವರಣ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.