ಸತತ ಮಳೆಗೆ ಹೆಚ್ಚಿದ ನೀರಿನ ಮಟ್ಟ

85 ಸಾವಿರ ಕ್ಯೂಸೆಕ್‌ ಒಳಹರಿವು•ಜಲಾವೃತ ಸೇತುವೆ ಮೇಲೆ 4 ಅಡಿ ನೀರು

Team Udayavani, Jul 11, 2019, 1:22 PM IST

11-July-25

ಚಿಕ್ಕೋಡಿ: ದೂಧಗಂಗಾ ನದಿ ತೀರಕ್ಕೆ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 15 ಸಾವಿರ ಕ್ಯೂಸೆಕ್‌ ನೀರು ಹೆಚ್ಚಾಗಿದೆ.

ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಾದ ಮಹಾಬಲೇಶ್ವರ, ರಾಧಾನಗರಿ, ನವಜಾ, ಪಾಟಗಾಂವ, ಕೊಯ್ನಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದೆ. ಇತ್ತ ಗಡಿ ಭಾಗದಲ್ಲಿಯೂ ಮಳೆ ಆಗುತ್ತಿದೆ. ಇದರಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಸುಮಾರು 85 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ದಿನೇ ದಿನೇ ನೀರಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ.

ಇದರಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಕೃಷ್ಣಾ ನದಿಗೆ ಕಟ್ಟಲಾಗಿರುವ ಕಲ್ಲೋಳ-ಯಡೂರ ಸೇತುವೆ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ ನಿರ್ಮಿಸಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇದಗಂಗಾ ನದಿಗೆ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ-ಭಿವಸಿ ಆರು ಸೇತುವೆಗಳು ಮುಳುಗಡೆಗೊಂಡಿವೆ. ಇರುವುದರಿಂದ ಸಾರ್ವಜನಿಕರು ಸುತ್ತಿ ಬಳಸಿ ಪ್ರಯಾಣ ಮಾಡುತ್ತಿದ್ದಾರೆ. ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 65,453 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 20,240 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 85,693 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 71 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಅಲ್ಲಿಂದ 5 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿಯಿಂದ ಹೊರಬಿಡಲಾಗುತ್ತದೆ ಎಂದು ತಹಶೀಲ್ದಾರ ಡಾ| ಸಂತೋಷ ಬಿರಾದಾರ ಮಾಹಿತಿ ನೀಡಿದರು.

ಮಳೆ ಪ್ರಮಾಣ: ಕೊಯ್ನಾ-112 ಮಿಮೀ, ವಾರಣಾ-98ಮಿಮೀ, ಕಾಳಮ್ಮವಾಡಿ- 112ಮಿಮೀ, ನವಜಾ-150 ಸಾಂಗ್ಲಿ-4 ಮಿಮೀ, ರಾಧಾನಗರಿ-104 ಮಿಮೀ, ಪಾಟಗಾಂವ-126 ಮಿಮೀ, ಮಹಾಬಲೇಶ್ವರ-99ಮಿಮೀ, ಕೊಲ್ಲಾಪುರ-19 ಮಿಮೀ ಮಳೆ ಆಗಿದೆ.

ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-5.4 ಮಿಮೀ, ಅಂಕಲಿ-7.4 ಮಿಮೀ, ನಾಗರಮುನ್ನೋಳ್ಳಿ-1.6 ಮಿಮೀ, ಸದಲಗಾ-15.3 ಮಿಮೀ, ಗಳತಗಾ-14.2 ಮಿಮೀ, ಜೋಡಟ್ಟಿ-1.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-16.3 ಮಿಮೀ, ನಿಪ್ಪಾಣಿ ಎಆರ್‌ಎಸ್‌-13.2 ಮಿಮೀ, ಸೌಂದಲಗಾ-20 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.