ಸಂಚಾರಿ ನಿಯಮ ಪಾಲಿಸದಿದ್ದರೆ ದಂಡ ಖಚಿತ

ವಿಮೆ ಮಾಡಿಸದೇ ಪೊಲೀಸರ ಕೈಗೆ ಸಿಕ್ಕಿ ಬಿದ್ದರೆ ಕನಿಷ್ಟ 1000 ರೂ. ದಂಡ

Team Udayavani, Jul 12, 2019, 2:36 PM IST

gadaga-tdy-5..

ಗದಗ: ನಗರದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಿದ್ದ ಬೈಕ್‌ಗಳನ್ನು ಸಂಚಾರಿ ಪೊಲೀಸರು ಠಾಣೆಗೆ ಸಾಗಿಸಿದರು.

ಗದಗ: ಸಂಚಾರಿ ನಿಯಮಗಳನ್ನು ಪಾಲಿಸಿ, ಇಲ್ಲವೇ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದರೆ, ವಾಹನದ ವಿಮೆ ಮಾಡಿಸದೇ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರೆ ಕನಿಷ್ಠ 1000 ರೂ. ದಂಡ ತೆರಬೇಕಾದೀತು ಜೋಕೆ!

ಇದು ಗದಗ- ಬೆಟಗೇರಿ ಅವಳಿ ನಗರದಲ್ಲಿ ಸಂಚಾರಿ ಪೊಲೀಸರು ಧ್ವನಿವರ್ದಕದ ಮೂಲಕ ಪರಿಷ್ಕೃತ ದಂಡದ ಮೊತ್ತವನ್ನು ಪ್ರಚಾರ ಪಡಿಸಿದ ಪರಿ ಇದು. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಆದೇಶದನ್ವಯ ಸಂಚಾರಿ ನಿಯಮಗಳ ಉಲ್ಲಂಘನೆಗೆ ದುಪ್ಪಟ್ಟು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಗುರುವಾರ ಮೈಕ್‌ ಮೂಲಕ ಡಂಗೂರ ಸಾರಲಾಯಿತು.

ಇದೇ ವೇಳ ಅವಳಿ ನಗರದ ಪ್ರಮುಖ ವೃತ್ತಗಳ ನೋ ಪಾರ್ಕಿಂಗ್‌ ಪ್ರದೇಶದಲ್ಲಿ ಬೇಕಾಬಿಟ್ಟಿಯಾಗಿ ನಿಲ್ಲಿಸಲಾಗಿದ್ದ ಬೈಕ್‌ಗಳನ್ನು ಪೊಲೀಸ್‌ ಠಾಣೆಗೆ ಸಾಗಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಬಿಸಿ ಮುಟ್ಟಿಸಲಾಯಿತು.

ಪ್ರೊಬೇಷನರಿ ಡಿವೈಎಸ್ಪಿ ನವೀನ ಕುಮಾರ ನೇತೃತ್ವದಲ್ಲಿ ಸಂಚಾರಿ ಠಾಣೆ ಪಿಎಸ್‌ಐ ಕಮಲಾ ದೊಡ್ಡಮನಿ ಹಾಗೂ ಸಿಬ್ಬಂದಿ ನಗರದ ಮಹಾತ್ಮಗಾಂಧಿ ವೃತ್ತ, ರೋಟರಿ ಸರ್ಕಲ್, ಹಳೇ ಡಿಸಿ ಕಚೇರಿ ವೃತ್ತ, ಬೆಟಗೇರಿಯ ತೆಂಗಿನಕಾಯಿ ಬಜಾರ್‌ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುಂತೆ ಹಾಗೂ ಬೇಕಾಬಿಟ್ಟಿಯಾಗಿ ನಿಲ್ಲಿಸಿದ್ದ ಚಕ್ರ ವಾಹನಗಳನ್ನು ಟೈಗರ್‌ ಲಾರಿಯಲ್ಲಿ ಠಾಣೆಗೆ ಸಾಗಿಸಲಾಯಿತು.

ಇದೇ ವೇಳೆ ತಮ್ಮ ವಾಹನಗಳನ್ನು ವಶಕ್ಕೆ ಪಡೆಯುತ್ತಿರುವುದನ್ನು ಗಮನಿಸಿದ ಕೆಲವರು ತಮ್ಮ ಬೈಕ್‌ಗಳನ್ನು ಬಿಡುವಂತೆ ಕೋರಿದರು. ಮತ್ತೂಮ್ಮೆ ಈ ರೀತಿಯಾಗಿ ಬೇಕಾಬಿಟ್ಟಿಯಾಗಿ ಬೈಕ್‌ ನಿಲ್ಲಿಸಿದರೆ, 1 ಸಾವಿರ ರೂ. ದಂಡ ತೆರಬೇಕಾಗುತ್ತದೆ ಎಂದು ಪೊಲೀಸರು ಖಡಕ್ಕಾಗಿ ಎಚ್ಚರಿಸಿದರು.

ಧ್ವನಿ ವರ್ಧಕ ಮೂಲಕ ಪ್ರಚಾರ: ಅವಳಿ ನಗರದ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಪ್ರಚಾರ ಮಾಡಿದರು. ಬೈಕ್‌ ಸವಾರರ ಹಿತದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೈಕ್‌ಗಳಿಗೆ ವಿಮಾ ಮಾಡಿಸಬೇಕು. ಬೈಕ್‌ ಪರವಾನಗಿ ಪಡೆದುಕೊಂಡು ಬೈಕ್‌ ಓಡಿಸಬೇಕು. ಸಂಚಾರ ನಿಮಯ ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಕುರಿತು ಪ್ರಕ್ರಿಯಿಸಿರುವ ಟ್ರಾಫಿಕ್ಸ್‌ ಪಿಎಸ್‌ಐ ಕಮಲಾ ದೊಡ್ಡಮನಿ, ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಸಂಚಾರಿ ನಿಯಗಳ ಉಲ್ಲಂಘನೆಗೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಮೈಕ್‌ ಮೂಲಕ ಜನಜಾಗೃತಿ ನಡೆಸಲಾಗಿದೆ. ಇದೇ ವೇಳೆ ಸಂಚಾರಿ ನಿಯಮ ಉಲ್ಲಂಘಿಸಿ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಲಾದ 25ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.