ಸುಳ್ಯ-ಮಡಿಕೇರಿ ಪರ್ಯಾಯ ರಸ್ತೆ ಅಭಿವೃದ್ಧಿಗೆ ಇಲ್ಲ ಆಸಕ್ತಿ

Team Udayavani, Jul 15, 2019, 5:41 AM IST

road

ಸುಳ್ಯ: ಸುಳ್ಯ ಮತ್ತು ಮಡಿಕೇರಿ ನಡುವಿನ ಪರ್ಯಾಯ ರಸ್ತೆ ಆಗಿರುವ ಸುಳ್ಯದಿಂದ ಆಲೆಟ್ಟಿ, ಬಡ್ಡಡ್ಕ, ಪಾಣತ್ತೂರು, ಕರಿಕೆ ಭಾಗಮಂಡಲ ರಸ್ತೆಯ ಆಯ್ದ ಭಾಗದ ದುರಸ್ತಿಗೆ ಅನುದಾನ ಲಭ್ಯವಿದ್ದರೂ ದುರಸ್ತಿಗೆ ಮನಸ್ಸು ಮಾಡಿಲ್ಲ.

ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಸುಳ್ಯ ತಾಲೂಕಿನ 10 ಕಿ.ಮೀ. ಸುಳ್ಯ ಆಲೆಟ್ಟಿ ಬಡ್ಡಡ್ಕದ ಮೂಲಕ ಬಾಟೋಳಿ ಗಡಿ ತನಕ ಡಾಮರು ಆಗಿದ್ದರೂ ಹೊಂಡ-ಗುಂಡಿ ಬಿದ್ದು ರಸ್ತೆ ಹದಗೆಟ್ಟು ಹೋಗಿದೆ. ಕಳೆದ ಮಳೆಗಾಲದ ಮಹಾ ಮಳೆಗೆ ರಸ್ತೆ ಹೊಂಡ-ಗುಂಡಿ ಬಿದ್ದು ಸಂಚಾರ ದುಸ್ತರವಾಗಿದೆ.

ನಿರಂತರ ಒತ್ತಾಯ, ಶಾಸಕ ಎಸ್‌. ಅಂಗಾರ ಅವರ ನಿರ್ದೇಶನದ ಮೇರೆಗೆ ಈ ರಸ್ತೆಯ ದುರಸ್ತಿಗೆ ಮಳೆಹಾನಿ ದುರಸ್ತಿ ಯೋಜನೆಯಡಿ 25 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿತ್ತು. ಆದರೆ ಮತ್ತೂಂದು ಮಳೆಗಾಲ ಬಂದರೂ ರಸ್ತೆಯ ದುರಸ್ತಿ ಕಾರ್ಯ ಮಾತ್ರ ಆಗಿಲ್ಲ.

ಗಾಂಧಿನಗರದಿಂದ ಗುರುಂಪು ತನಕ ಕಾಂಕ್ರೀಟ್ ಮತ್ತು ನಾಗಪಟ್ಟಣದಿಂದ ಗುಂಡ್ಯ ತನಕ ತೇಪೆ ಮಾಡಿ ದುರಸ್ತಿ ಮಾಡಲಾಗಿತ್ತು.

ಸಂಪೂರ್ಣ ಹದಗೆಟ್ಟಿರುವ ಗುಂಡ್ಯದಿಂದ ಬಡ್ಡಡ್ಕ ತನಕ ದುರಸ್ತಿ ಬಾಕಿ ಉಳಿದಿದೆ. ಇದೀಗ ಮಳೆಗಾಲ ಆರಂಭಗೊಂಡರೂ ಹೊಂಡಗಳು ಬಾಯ್ದೆರೆದು ಕೆಸರು, ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ.

ಕಳೆದ ಜನವರಿಯಲ್ಲಿ ಅನುದಾನ ಮಂಜೂರಾಗಿದ್ದರೂ ಹಣ ಬಿಡುಗಡೆಗೆ ವಿಳಂಬ, ಚುನಾವಣ ನೀತಿ ಸಂಹಿತೆ ಮತ್ತಿ ತರ ಕಾರಣಗಳಿಂದ ಟೆಂಡರ್‌ ನಡೆಯಲು ವಿಳಂಬವಾಗಿ ಕಾಮಗಾರಿ ನಡೆಸಲಾಗಲಿಲ್ಲ ಎನ್ನುವುದು ಜಿ.ಪಂ. ಎಂಜಿನಿಯರರು ನೀಡುವ ಉತ್ತರ. ರಾ.ಹೆ.ಗೆ ಪರ್ಯಾಯ ರಸ್ತೆ ಸುಳ್ಯ-ಮಡಿಕೇರಿ ರಾ.ಹೆ.ಯ ಪರ್ಯಾಯ ರಸ್ತೆ ಸುಳ್ಯ ಕರಿಕೆ ರಸ್ತೆ. ಕಳೆದ ಮಳೆಗಾಲದಲ್ಲಿ ಭೂಕುಸಿತ, ರಸ್ತೆ ಕೊಚ್ಚಿ ಹೋಗಿ ಸಂಪಾಜೆ-ಮಡಿಕೇರಿ ಮಧ್ಯೆ ರಸ್ತೆ ಮುಚ್ಚಿದಾಗ ಪರ್ಯಾಯ ರಸ್ತೆಯಾಗಿ ಸುಳ್ಯ-ಪಾಣತ್ತೂರು-ಕರಿಕೆ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು. ಸುಳ್ಯದಿಂದ ಮಡಿಕೇರಿಗೆ ದಿನಾಲೂ ಸಾವಿರಾರು ವಾಹನಗಳು ಓಡಾಟ ನಡೆಸಿದವು. ಮಡಿಕೇರಿಯಿಂದ ಸುಳ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸರ್ವೀಸ್‌ ಕೂಡ ನಡೆಸಿತ್ತು. ಸುಳ್ಯದಿಂದ ಕರಿಕೆ ಮೂಲಕ ಮಡಿಕೇರಿಗೆ 90 ಕಿ.ಮೀ. ದೂರವಿದೆ. ಇದರಲ್ಲಿ ಅಂತಾರಾಜ್ಯ ಸಂಪರ್ಕ ಕಲ್ಪಿಸುವ ಸುಳ್ಯ-ಪಾಣತ್ತೂರು ರಸ್ತೆ ಎರಡೂ ರಾಜ್ಯಗಳಲ್ಲಿ ತಲಾ 10 ಕಿ.ಮೀ.ನಂತೆ 20 ಕಿ.ಮೀ. ದೂರವಿದೆ.

ಎರಡೂ ಬದಿ ವಿಸ್ತರಣೆ ಮಾಡಲು ಆಗ್ರಹ

ಅಗಲ ಕಿರಿದಾದ ತಿರುವುಗಳನ್ನೊಳಗೊಂಡ ರಸ್ತೆಯ ಪ್ರಯಾಣ ದುಸ್ತರವಾಗಿದೆ. ಕರ್ನಾಟಕದ ಭಾಗದಲ್ಲಿ 10 ಕಿ.ಮೀ. ರಸ್ತೆ ಡಾಮರು ಕಾಮಗಾರಿ ಆಗಿದ್ದರೂ ಹೊಂಡ-ಗುಂಡಿ ಬಿದ್ದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ. ಜತೆಗೆ ಪರ್ಯಾಯ ರಸ್ತೆಯ ಸ್ಥಿತಿಯೂ ಅಯೋಮಯವಾಗಿದೆ. ಈಗಾಗಲೇ ಬಸ್‌ಗಳು ಸೇರಿ ನೂರಾರು ವಾಹನಗಳು ಓಡಾಟ ನಡೆಸುತ್ತಿವೆ. ಅನುದಾನವಿದ್ದರೂ ಸಾರ್ವಜನಿಕರಿಗೆ ಬಹೂಪಯೋಗಿ ಸಂಪರ್ಕ ರಸ್ತೆಯ ದುರಸ್ತಿ ಕಾರ್ಯ ನಡೆಸದ ಬಗ್ಗೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಎರಡೂ ಬದಿ ವಿಸ್ತರಣೆ ಮಾಡಿ ದುರಸ್ತಿಪಡಿಸಬೇಕು ಎನ್ನುವ ಬೇಡಿಕೆ ನಿರಂತರವಾಗಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.