ಇ-ಸ್ವತ್ತಿಗಾಗಿ ಪುರಸಭೆ ಎದುರು ಪ್ರತಿಭಟನೆ

•ಅಧಿಕಾರಿಗಳು ಕೇಳಿದ ದಾಖಲೆ ಸಲ್ಲಿಸಿದರೂ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣ

Team Udayavani, Jul 17, 2019, 11:26 AM IST

uk-tdy-1..

ಅಂಕೋಲಾ: ಇ-ಸ್ವತ್ತು ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಮತ್ತು ಮುಖ್ಯಾಧಿಕಾರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ಅಂಕೋಲಾ: ಪುರಸಭೆಯಲ್ಲಿ ಇ-ಸ್ವತ್ತಿಗಾಗಿ ಕಳೆದ ಒಂದೂವರೆ ವರ್ಷದಿಂದ ಸಾರ್ವಜನಿಕರನ್ನು ಸತಾಯಿಸುತ್ತಿರುವುದನ್ನು ಖಂಡಿಸಿ ಪುರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ನ್ಯಾಯವಾದಿ ಉಮೇಶ ನಾಯ್ಕ ಮಾತನಾಡಿ, ಇಲ್ಲಿಯ ಪುರಸಭೆಯಲ್ಲಿ ಇ-ಸ್ವತ್ತಿಗಾಗಿ ಅರ್ಜಿ ಸಲ್ಲಸಿದರೆ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಸಾರ್ವಜನಿಕರು ನೀಡಿದ ಕಡತವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕಳುಹಿಸದೆ ತಮ್ಮ ಬಳಿಯೆ ಇಟ್ಟುಕೊಂಡು ಇಲ್ಲದ ಕಾರಣಗಳನ್ನು ನೀಡಿ ಪ್ರಕರಣಕ್ಕೆ ಹಿಂಬರಹ ನೀಡದೆ ಸಾರ್ವಜನಿಕರಿಗೆ ಅಲೆದಾಡಿಸುತ್ತಿರುವುದು ಖಂಡನೀಯ ಎಂದು ಆರೋಪಿಸಿದರು.

ಅರ್ಬನ್‌ ಬ್ಯಾಂಕಿನ ಅಧ್ಯಕ್ಷ ಭಾಸ್ಕರ ನಾರ್ವೇಕರ್‌ ಮಾತನಾಡಿ ಅಂಕೋಲಾದಲ್ಲಿ ಅಪಾರ್ಟ್‌ಮೆಂಟ್‌ಗಳನ್ನು ಕಟ್ಟಲು ಸರಾಗವಾಗಿ ಪರವಾನಿಗೆ ಸಿಗುತ್ತಿದೆ. ಆದರೆ ಬಡ ಮತ್ತು ಮಧ್ಯಮ ವರ್ಗದವರಿಗೆ ಇ-ಸ್ವತ್ತು ದೊರಕುತ್ತಿಲ್ಲದಿರುವ ಒಳಗಿನ ಮರ್ಮ ಏನು ಎಂದು ಅರ್ಥವಾಗುತ್ತಿಲ್ಲ. ಪುರಸಭೆ ಅಧಿಕಾರಿಗಳನ್ನು ಕೇಳಿದರೆ, ಯೋಜನೆ ಇಲಾಖೆ ಕಾರ್ಯಗತಗೊಳಿಸಬೇಕು ಎನ್ನುತ್ತಾರೆ. ಯೋಜನಾ ಇಲಾಖೆಯವರನ್ನು ಕೇಳಿದರೆ ಪುರಸಭೆಗೆ ಅಧಿಕಾರ ಇದೆ ಎನ್ನುತ್ತಾರೆ. ಹೀಗಾಗಿ ಇಲಾಖೆ ಧೋರಣೆಗೆ ಬೇಸತ್ತು ಹೋಗುವಂತಾಗಿದೆ ಎಂದರು.

ನ್ಯಾಯವಾದಿ ನಾಗಾನಂದ ಬಂಟ ಮಾತನಾಡಿ 2 ವರ್ಷಗಳ ಹಿಂದೆ ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದಾಗ ಕೈ ಬರಹದ ನಮೂನೆ -3 ನೀಡುತ್ತಿದ್ದರು. ಆದರೆ ಇತ್ತೀಚಿಗೆ ಯಾವುದೇ ಇ-ಸ್ವತ್ತು ನೀಡದೆ ತೊಂದರೆ ಕೊಡುತ್ತಿದ್ದಾರೆ. ಎಲ್ಲ ದಾಖಲೆಗಳನ್ನು ನೀಡಿದಾಗಲೂ ಇಲ್ಲಿನ ಅಧಿಕಾರಿಗಳು ಇ-ಸ್ವತ್ತು ನೀಡದೇ ಅರ್ಜಿ ತಿರಸ್ಕರಿಸಿ ಅವ್ಯವಹಾರಕ್ಕೆ ಆಸ್ಪದ ನೀಡಲಾಗುತ್ತಿದೆ ಎಂದರು.

ಪ್ರತಿಭಟನಾಕಾರರು ಶಿರೆಸ್ತೇದಾರ ಎಂ.ಬಿ. ಗುನಗಾ ಮತ್ತು ಮುಖ್ಯಾಧಿಕಾರಿ ಪ್ರಹ್ಲಾದ ಅವರಿಗೆ ಮನವಿ ಅರ್ಪಿಸಿದರು. ಪಪಂ ಮಾಜಿ ಅಧ್ಯಕ್ಷ ರಾಜೇಂದ್ರ ನಾಯ್ಕ, ಪುರಸಭೆ ಸದಸ್ಯರಾದ ಜಗದೀಶ ನಾಯಕ, ಮಂಜುನಾಥ ನಾಯ್ಕ, ನಾಗರಾಜ್‌ ಐಗಳ, ನ್ಯಾಯವಾದಿ ಬೈರವ ನಾಯ್ಕ, ರಾಘು ನಾಯ್ಕ, ನವಾಜ್‌ ಶೇಖ್‌, ಸಂಜಯ ಭಾವಿಕೇರಿ, ಚಂದ್ರಕಾಂತ ನಾಯ್ಕ, ಪ್ರವೀಣ ನಾಯ್ಕ, ಗೋವಿಂದ್ರಾಯ ನಾಯ್ಕ, ಪ್ರಶಾಂತ ನಾಯಕ, ನಾಗೇಂದ್ರ ನಾಯ್ಕ, ನಾಗೇಶ ನಾಯ್ಕ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗಜಾನನ ನಾಯ್ಕ, ಶಶಿಕಾಂತ ಶೆಟ್ಟಿ, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.