ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ: ಮಕ್ಕಳ ಪರದಾಟ

ಮೂರು ತಿಂಗಳಿಂದ ಅಕ್ಕಿ ಸರಬರಾಜು ಮಾಡಿಲ್ಲ • ಕೆಲ ಶಾಲೆಗಳಲ್ಲಿ ಶಿಕ್ಷಕರಿಂದ ಊಟದ ವ್ಯವಸ್ಥೆ

Team Udayavani, Jul 17, 2019, 12:53 PM IST

mandya-tdy-2..

ಕೆ.ಆರ್‌.ಪೇಟೆ ತಾಲೂಕಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಕರು ಊಟದ ವ್ಯವಸ್ಥೆ ಮಾಡಿದ್ದಾರೆ.

ಕೆ.ಆರ್‌.ಪೇಟೆ: ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ಬಿಸಿಯೂಟ ತಯಾರು ಮಾಡಲು ಕಳೆದ ಮೂರು ತಿಂಗಳಿಂದ ಶಾಲೆಗಳಿಗೆ ಅಕ್ಕಿ ಸರಬರಾಜು ಮಾಡದೇ ಇರುವುದರಿಂದ ಈಗ ಬಹುತೇಕ ಶಾಲೆಗಳಲ್ಲಿ ಬಿಸಿಯೂಟವನ್ನು ಸ್ಥಗಿತ ಮಾಡಲಾಗಿದೆ.

ಮಕ್ಕಳು ಖಾಲಿ ಹೊಟ್ಟೆಯಲ್ಲಿ ಪಾಠ ಕಲಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ, ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದಿದೆ. ಜೊತೆಗೆ ಯಾವುದೇ ಕಾರಣಕ್ಕೂ ಮಕ್ಕಳಿಗೆ ಊಟವನ್ನು ಸ್ಥಗಿತ ಮಾಡಬಾರದು ಎಂಬ ಸೂಚನೆಯನ್ನು ಸಹ ನೀಡಲಾಗಿದೆ. ಆದರೆ, ಈಗ ಇಲಾಖೆಯಿಂದ ಅಕ್ಕಿಯನ್ನು ಶಾಲೆಗಳಿಗೆ ಸರಬರಾಜು ಮಾಡಿ, ನಾಲ್ಕು ತಿಂಗಳ ಕಳೆಯುತ್ತಿರುವುದರಿಂದ ಬಹುತೇಕ ಶಾಲೆಗಳಲ್ಲಿ ಅಕ್ಕಿ ಖಾಲಿಯಾಗಿ ಬಿಸಿಯೂಟ ಸ್ಥಗಿತವಾಗಿದೆ.

ಹಸಿವಿನಿಂದ ಪಾಠ ಕೇಳುತ್ತಿರುವ ಮಕ್ಕಳು: ಶಾಲೆಯಲ್ಲಿ ಅಕ್ಕಿ ಖಾಲಿಯಾಗಿ ಬಿಸಿಯೂಟ ಸ್ಥಗಿತವಾಗಿರುವುದು ತಿಳಿಯದೇ ಮನೆಯಿಂದ ಊಟದ ಡಬ್ಬಿಯನ್ನೂ ಸಹ ಮಕ್ಕಳು ತರುತ್ತಿಲ್ಲ. ಹಾಗೆ ಬರುವ ಕೆಲವು ಮಕ್ಕಳು ದಿನಪೂರ್ತಿ ಖಾಲಿ ಹೊಟ್ಟೆಯಲ್ಲಿ ಶಾಲೆಯಲ್ಲಿ ಕುಳಿತು ಪಾಠ ಕೇಳುವಂತಾಗಿದೆ. ಆದರೆ, ಕಡಿಮೆ ಮಕ್ಕಳ ಸಂಖ್ಯೆ ಇರುವ ಶಾಲೆಗಳಲ್ಲಿ ಕೆಲವು ಮುಖ್ಯ ಶಿಕ್ಷಕರು ಹೇಗೋ ಅಕ್ಕಿಯನ್ನು ಹೊಂದಿಸಿಕೊಂಡು, ಮಕ್ಕಳಿಗೆ ಊಟದ ವ್ಯವಸ್ಥೆ ಮಾಡುತ್ತಾರೆ. ಆದರೆ, ಕೆಲವು ಶಾಲೆಗಳಲ್ಲಿ 500ರಿಂದ 1000 ಮಕ್ಕಳಿರುವ ಶಾಲೆಗಳಲ್ಲಿ ಯಾವುದೇ ಬದಲಿ ವ್ಯವಸ್ಥೆ ಮಾಡಲಾಗದೆ. ಕೈಚೆಲ್ಲಿ ಮಕ್ಕಳಿಗೆ ಮನೆಯಿಂದಲೇ ಊಟವನ್ನು ತರುವಂತೆ ಹೇಳುವುದು ಶಾಲಾ ಶಿಕ್ಷಕರಿಗೆ ಅನಿವಾರ್ಯವಾಗಿದೆ ಎಂಬುದು ಕೆಲವು ಶಿಕ್ಷಕರ ಮಾತಾಗಿದೆ.

ಅಕ್ಕಿ ಸರಬರಾಜು ಮಾಡಲು ವಾಹನವಿಲ್ಲ: ಈಗ ಒಂದರೆಡು ದಿನಗಳಲ್ಲಿ ಅಕ್ಕಿ ತಾಲೂಕಿನ ಗೋಡಾನ್‌ಗೆ ಬಂದರೂ ಅಲ್ಲಿಂದ ತಾಲೂಕಿನ ಶಾಲೆಗಳಿಗೆ ಸರಬರಾಜು ಮಾಡಲು ವಾಹನದ ವ್ಯವಸ್ಥೆ ಇಲ್ಲ. ಶಿಕ್ಷಕರು ಅವರ ಹಣವನ್ನು ನೀಡಿ, ತೆಗೆದುಕೊಂಡು ಹೋಗುವುದು ಕಷ್ಟವಾಗುತ್ತದೆ. ಅವರ ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗಲು ಈಗ ಮಳೆಗಾಲ ಆದ್ದರಿಂದ ಲಾರಿಗಳ ಟೆಂಡರ್‌ ಮುಗಿಯುವ ವರೆವಿಗೂ ಇದೇ ಸಮಸ್ಯೆ ಮುಂದುವರಿದರೂ ಆಶ್ಚರ್ಯವಿಲ್ಲ. ಮಕ್ಕಳು ಊಟವಿಲ್ಲದ್ದೇ ಕಷ್ಟ ಅನುಭವಿಸುತ್ತಿರುವಾಗ ಜನ ಪ್ರತಿನಿಧಿಗಳು ಅಧಿಕಾರಕ್ಕಾಗಿ ರಸ್ತೆಗೆ ಬಂದು ಕಿತ್ತಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.