ಕುಮಾರಸ್ವಾಮಿಗೆ ಬಹುಮತ ಇಲ್ಲ, ನಾಳೆ ರಾಜೀನಾಮೆ ಕೊಡಲೇಬೇಕು: ಬಿಎಸ್ ವೈ
Team Udayavani, Jul 17, 2019, 1:15 PM IST
ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಬಂಡಾಯ ಶಾಸಕರ ರಾಜೀನಾಮೆ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ಆದೇಶ ಸಂವಿಧಾನದ ಮತ್ತು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
15 ಶಾಸಕರ ರಾಜೀನಾಮೆ ಅರ್ಜಿ ಕುರಿತ ಆದೇಶವನ್ನು ಸುಪ್ರೀಂಕೋರ್ಟ್ ಬುಧವಾರ ಪ್ರಕಟಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ. ಯಾವಾಗ ಸರ್ಕಾರಕ್ಕೆ ಬಹುಮತ ಇಲ್ಲವೋ ಆಗ ಕುಮಾರಸ್ವಾಮಿ ರಾಜೀನಾಮೆ ಕೊಡಲೇಬೇಕಾಗಿದೆ. ನಾನು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದರು.
ನಾಳೆ ನಡೆಯುವ ವಿಶ್ವಾಸಮತ ಯಾಚನೆ ವೇಳೆ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕಾಗಿದೆ. ಸರ್ಕಾರ ರಚನೆಗೆ ಬೇಕಾದ ಶಾಸಕರ ಸಂಖ್ಯೆ ಮೈತ್ರಿ ಸರ್ಕಾರದಲ್ಲಿ ಇಲ್ಲ ಎಂದು ಹೇಳಿದರು.
ಇದು ಬಂಡಾಯ ಶಾಸಕರ ನೈತಿಕ ಗೆಲುವಾಗಿದೆ. ಸುಪ್ರೀಂ ತೀರ್ಪು ಪ್ರಜಾಪ್ರಭುತ್ವಕ್ಕೆ ಸಿಕ್ಕಿದ ಜಯವಾಗಿದೆ ಎಂದು ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ