ಅಸಮರ್ಪಕ ಹೆದ್ದಾರಿ ನಿರ್ವಹಣೆ; ಸುಂಕ ವಸೂಲಿಗೆ ಮಾತ್ರ ಆದ್ಯತೆ

Team Udayavani, Jul 18, 2019, 5:22 AM IST

asamarpaka-heddari1

ಸುರತ್ಕಲ್: ರಾಜ್ಯದ ಆರ್ಥಿಕ ಹೆಬ್ಟಾಗಿಲು, ಕೋಟ್ಯಂತರ ಆದಾಯ ತರುವ ಏಕೈಕ ಬಂದರು ಹೊಂದಿರುವ ನವ ಮಂಗಳೂರು ಬಂದರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ನಿರ್ವಹಣೆ ಮಾಡುವ ಕಂಪೆನಿ ಸರಿಯಾದ ನಿರ್ವಹಣೆ ಮಾಡದೆ ಸುಂಕ ವಸೂಲಿಗೆ ಮಾತ್ರ ಆದ್ಯತೆ ನೀಡುತ್ತಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.

2004ರಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಹಾಗೂ ಮಂಗಳೂರು ಮತ್ತು ಬೆಂಗಳೂರು ಹೆದ್ದಾರಿಯ ಬಿ.ಸಿ. ರೋಡ್‌ನ‌ಮಧ್ಯದಲ್ಲಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ನಿರ್ವಹಣೆಗಾಗಿ ನ್ಯೂ ಮಂಗಳೂರು ಪೋರ್ಟ್‌ ರೋಡ್‌ ಕಂಪೆನಿಯನ್ನು ಅಸ್ತಿತ್ವಕ್ಕೆ ತರಲಾಗಿತ್ತು.

ಈ ಭಾಗದಲ್ಲಿ 35 ಕಿ.ಮೀ. ಉದ್ದದ ನಾಲ್ಕು ಲೇನ್‌ನ ಚತುಷ್ಪಥ ರಸ್ತೆ ನಿರ್ಮಾಣದ ಹೊಣೆಯನ್ನು ಈ ಕಂಪೆನಿ ವಹಿಸಿಕೊಂಡಿತ್ತು.

ಈ ಹೆದ್ದಾರಿ ನಿರ್ಮಾಣಕ್ಕೆ ಈ ಕಂಪೆನಿ ಬ್ಯಾಂಕ್‌ನಿಂದ 363 ಕೋಟಿ ರೂ. ಸಾಲ ಪಡೆದಿತ್ತು.

ಇರ್ಕಾನ್‌ ಕಂಪೆನಿಗೆ ರಸ್ತೆ ನಿರ್ಮಾಣ ಮಾಡಲು ಟೆಂಡರ್‌ ಕೂಡ ನೀಡಿತ್ತು. ಈ ಸಾಲ ಮರುಪಾವತಿಗಾಗಿ ಎನ್‌ಎಚ್ 66 ಸುರತ್ಕಲ್ ಮತ್ತು ಅಂದಿನ ಎನ್‌ಎಚ್75ರ ಬ್ರಹ್ಮರಕೂಟ್ಲು ಟೋಲ್ ಗೇಟ್‌ಗಳನ್ನು ನಿರ್ಮಾಣ ಮಾಡಿ ಟೋಲ್ ಸಂಗ್ರಹಿಸುತ್ತಿತ್ತು.

ಹಣದ ಕೊರತೆ

ಇದೀಗ ಸುರತ್ಕಲ್ನಿಂದ ನಂತೂರು ಬಿ.ಸಿ. ರೋಡ್‌ ಜಂಕ್ಷನ್‌ವರೆಗಿನ 35 ಕಿ.ಮೀ. ರಸ್ತೆ ಎರಡು ವರ್ಷಗಳಿಂದ ಹಣದ ಕೊರತೆಯಿಂದ ನಿರ್ವಹಣೆ ಇಲ್ಲದೆ ನಲುಗುತ್ತಿದೆ.

ಕೂಳೂರಿನಿಂದ ಕೊಟ್ಟಾರ ಚೌಕಿರಸ್ತೆ ಗಮನಿಸಿದರೆ ಪಾದಚಾರಿಗಳು ನಡೆದಾ ಡಲೂ ಜಾಗವಿಲ್ಲದ ಸ್ಥಿತಿಯಿದೆ. ಹೆದ್ದಾರಿ ಬದಿ ಸರ್ವಿಸ್‌ ರಸ್ತೆ ಮಾಡಿದ್ದರೆ ಇನ್ನೊಂದೆಡೆ ಮಾಡಲು ಭೂಮಿಯ ಕೊರತೆ ಎದುರಾಗಿದೆ. ಭೂಸ್ವಾಧೀನವನ್ನೇ ಮಾಡಲಾಗಿಲ್ಲ. ಇನ್ನು ಕೋಡಿಕಲ್ ತಿರುವಿನಿಂದ ಕೂಳೂರುವರೆಗೆ ಏಕ ಸಂಚಾರದಲ್ಲಿ ಸರ್ವಿಸ್‌ ರಸ್ತೆ ನಿರ್ಮಿಸಿ ಇಲಾಖೆ ಕೈ ತೊಳೆದುಕೊಂಡಿದೆ. ಕೂಳೂರಿನಿಂದ ಬರುವವರಿಗೆ ಕೋಡಿಕಲ್ ಬಳಿಯೇ ತಿರುಗಿ ಮತ್ತೆ ಚಲಿಸಬೇಕಾಗುತ್ತದೆ. ಇದರಿಂದ ಸಮಯ ವ್ಯರ್ಥ, ಡೀಸೆಲ್ ವ್ಯರ್ಥವಾಗುತ್ತದೆ.

ಮಳೆ ಬಂದರೆ ದ್ವೀಪ!

ಮಳೆ ಏನಾದರೂ ಒಂದೆರಡು ದಿನ ಬಂದರೆ ಕೊಟ್ಟಾರಚೌಕಿ ಪ್ರದೇಶ ಮುಳುಗಡೆಯಾಗುತ್ತದೆ. ರಾಜಕಾಲುವೆ ಸಂಪರ್ಕ ಕೇಂದ್ರವಿರುವುದರಿಂದ ಸುವ್ಯ ವಸ್ಥಿತ ಚರಂಡಿ ಅಗತ್ಯ. ಪ್ರಮುಖ ರಾಜ ಕಾಲುವೆಯೂ ಇಲ್ಲಿ ಸೇರು ವುದರಿಂದ ಮಳೆ ನೀರು ಸರಿಯಾಗಿ ಹರಿಯದೆ ವಿವಿಧ ರೋಗಗಳ ಕೇಂದ್ರ ವಾಗಿಯೂ ಕೊಟ್ಟಾರಚೌಕಿ ಸಮಸ್ಯೆಯನ್ನು ಎದುರಿ ಸುತ್ತಿದೆ.ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲ ಗಳಲ್ಲಿ ಸರ್ವಿಸ್‌ ರಸ್ತೆ, ಮಳೆ ನೀರು ರಾಜಕಾಲುವೆಗೆ ಸೇರಲು ವ್ಯವಸ್ಥೆ, ಪಾದಚಾರಿಗಳ ಓಡಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿ ಕೊಡಬೇಕಿದೆ.

ಸ್ಮಾರ್ಟ್‌ ಸಿಟಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ಹೆದ್ದಾರಿಗಳು ಇದುವರೆಗೂ ಸ್ಮಾರ್ಟ್‌ ಆಗದಿರುವುದು ನಮ್ಮನ್ನಾಳುವ ಮಂದಿಗೆ ಕಣ್ಣಿಗೆ ಕಂಡಂತಿಲ್ಲ. ಇದರ ಪರಿಣಾಮ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಗುಂಡಿಗಳು ಬಿದ್ದಿವೆ. ಅನೇಕ ಪ್ರಾಣಾಪಾಯಗಳು ಸಂಭವಿಸಿದೆ. ನೂರಾರು ಸವಾರರು ಅಂಗ ವೈಕಲ್ಯವನ್ನು ಹೊಂದಿದ್ದಾರೆ. ಎರಡು ಟೋಲ್ಗಳಿಂದ ಕೋಟಿಗಟ್ಟಲೆ ಟೋಲ್ ಸಂಗ್ರಹ ವಾಗುತ್ತಿದೆ. ಆದರೆ ನಿರ್ವಹಣೆ ಮಾತ್ರ ಆಗುತ್ತಿಲ್ಲ.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.