ಭಾಷಣಕ್ಕೆ ಸಲಹೆ ಕೋರಿದ ಪ್ರಧಾನಿ
Team Udayavani, Jul 20, 2019, 5:02 AM IST
ನವದೆಹಲಿ: ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಮೇಲಿನಿಂದ ಮಾಡಲಾಗುವ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದಲೂ ಸಾರ್ವಜನಿಕರಿಂದ ವಿಷಯ ಸಂಗ್ರಹಿಸುವ ಅವರು ಅದನ್ನು ತಮ್ಮ ಭಾಷಣದಲ್ಲಿ ಸೇರಿಸಿಕೊಳ್ಳುತ್ತಾರೆ.
ಈ ಬಗ್ಗೆ ನಮೋ ಆ್ಯಪ್ನಲ್ಲಿ ಫೋರಂ ರಚಿಸಲಾಗಿದ್ದು, ಇದರಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಆಗಸ್ಟ್ 15 ರಂದು ನನ್ನ ಭಾಷಣಕ್ಕೆ ನಿಮ್ಮ ಅಮೂಲ್ಯವಾದ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ನಾನು ವಿನಂತಿಸಿಕೊಳ್ಳುತ್ತೇನೆ. 130 ಕೋಟಿ ಜನರ ಧ್ವನಿಯು ಕೆಂಪುಕೋಟೆಯಲ್ಲಿ ಪ್ರತಿಧ್ವನಿಸಲಿ ಎಂದು ಟ್ವೀಟ್ನಲ್ಲಿ ಅವರು ಹೇಳಿದ್ದಾರೆ. ಎರಡನೇ ಬಾರಿಗೆ ಅಧಿಕಾರಕ್ಕೇರಿದ ನಂತರ ಸ್ವಾತಂತ್ರ್ಯ ದಿನದ ಮೊದಲ ಭಾಷಣವನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ