ತಮಿಳುನಾಡಿಗೆ ನೀರು ಬಿಟ್ಟಿದ್ದಕ್ಕೆ ರೈತರ ಆಕ್ರೋಶ

Team Udayavani, Jul 21, 2019, 3:06 AM IST

tamil-nadige

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮೈಸೂರು, ಎಚ್‌.ಡಿ.ಕೋಟೆ, ನಂಜನಗೂಡು ಸೇರಿ ಕಾವೇರಿ ಕಣಿವೆಯ ಹಲವೆಡೆ ರೈತರು ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಜಲಾಶಯದ ಕ್ರಸ್ಟ್‌ ಗೇಟ್‌ ತೆರೆಯದೆ, ಸುಭಾಷ್‌ ಪವರ್‌ ಕಾರ್ಪೊರೇಷನ್‌ ಗೇಟ್‌ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸುವಂತೆ ಒಂದು ತಿಂಗಳು ಸತತ ಹೋರಾಟ ನಡೆ ಸಿದ ಪರಿ ಣಾಮ ಜು.16ರಿಂದ ಹತ್ತು ದಿನಗಳ ಕಾಲ ನಾಲೆಗಳಿಗೆ ನೀರು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡ ಬೆನ್ನ ಹಿಂದೆಯೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರನ್ನು ಹರಿಯಬಿಟ್ಟು ಕಾವೇರಿ ಕಣಿವೆ ಪ್ರದೇ ಶದ ರೈತರ ಹಿತವನ್ನು ಕಡೆಗಣಿಸಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪಿಲಾ ನದಿಗಿಳಿದು ರೈತರ ಪ್ರತಿಭಟನೆ: ನಂಜನಗೂಡಿನಲ್ಲಿ ರೈತರು ಶನಿವಾರ ಕಪಿಲಾ ನದಿಗಿಳಿದು ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಒಂದು ಗಂಟೆಗೂ ಹೆಚ್ಚು ಕಾಲ ನೀರಿನಲ್ಲಿ ನಿಂತು ಪ್ರತಿಭಟನೆ ನಡೆಸಿದ ರೈತ ನಾಯಕರು, ಇದು ಸಾಂಕೇತಿಕ ಹೋರಾಟವಷ್ಟೇ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ದೋಣಿ ವಿಹಾರ ಸ್ಥಗಿತ: ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿದ ಪರಿಣಾಮ ಪ್ರಸಿದ್ಧ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಹೀಗಾಗಿ, ದೂರದ ಊರುಗಳಿಂದ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ಪಕ್ಷಿಧಾಮಕ್ಕೆ ಮಾತ್ರ ಪ್ರವೇಶ ನೀಡಲಾಗಿದ್ದು, ದೋಣಿವಿಹಾರ ನಡೆಸಲಾಗುತ್ತಿಲ್ಲ.

ನೀರು 89 ಅಡಿಗೆ ಕುಸಿತ: ಶುಕ್ರವಾರ ಬೆಳಗ್ಗೆ 2,908 ಕ್ಯೂಸೆಕ್‌ ಇದ್ದ ಹೊರಹರಿವಿನ ಪ್ರಮಾಣವನ್ನು ಸಂಜೆ 6 ಗಂಟೆಯ ಬಳಿಕ 5,064 ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಇದ ರಲ್ಲಿ 2,453 ಕ್ಯೂಸೆಕ್‌ ನದಿಗೆ ಹಾಗೂ 2,611 ಕ್ಯೂಸೆಕ್‌ ನೀರನ್ನು ನಾಲೆಗಳಿಗೆ ಹರಿ ಸಲಾಗುತ್ತಿದೆ. ಇದರೊಂದಿಗೆ ಜಲಾಶಯದ ನೀರಿನ ಮಟ್ಟ 90.53 ಅಡಿ ಯಿಂದ 89 ಅಡಿಗೆ ಕುಸಿದಿದೆ. ಇದೇ ವೇಳೆ, ಕಬಿನಿ ಜಲಾಶಯ ಭರ್ತಿಯಾಗುವ ಮುನ್ನವೇ ಜಲಾಶಯದಿಂದ ತಮಿಳುನಾಡಿಗೆ 3,000 ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿದ್ದು, ರೈತರಿಂದ ಆಕ್ರೋಶ ವ್ಯಕ್ತವಾಗಿದೆ.

ಕೇರಳದ ವೈನಾಡು ಭಾಗದಲ್ಲಿ ಈಗ ಸ್ವಲ್ಪಮಟ್ಟಿಗೆ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ 4,700 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಕೇವಲ 69 ಅಡಿ ಮಾತ್ರ ತುಂಬಿರುವಾಗ ಒಳಹರಿವಿನ ಪ್ರಮಾಣದಲ್ಲಿ ತಮಿಳುನಾಡಿಗೆ ನದಿ ಮೂಲಕ 3000 ಕ್ಯೂಸೆಕ್‌ ನೀರು ಹರಿಸುತ್ತಿರುವುದು ಅಚ್ಚುಕಟ್ಟು ರೈತರಿಗೆ ದ್ರೋಹವೆಸಗಿದಂತೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನೀರು ಗಂಟಿ ಕೆಲಸ ಮಾಡುತ್ತಿದೆ.
-ಕುರುಬೂರು ಶಾಂತಕುಮಾರ್‌, ಕಬಿನಿ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ

ಟಾಪ್ ನ್ಯೂಸ್

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

chef chidambara trailer

Chef Chidambara trailer: ಭರವಸೆ ಮೂಡಿಸಿದ ಅನಿರುದ್ಧ್ ಸಿನಿಮಾ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.